ಸೇಮಿಫೈನಲ್‌ಗೆ ಇಂಗ್ಲೆಂಡ್ : ಟಿ20 ವಿಶ್ವಕಪ್‌ನಿಂದ : ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಔಟ್

ಇಂದು ನಡೆದ ಸೂಪರ್ 12ರ ಸುತ್ತಿನ ಮೊದಲ ಗುಂಪಿನ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಶ್ರೀಲಂಕಾ ತಂಡವನ್ನು 4 ವಿಕೆಟ್‌ಗಳಿಂದ ಮಣಿಸುವುದರೊಂದಿಗೆ ಟಿ20 ವಿಶ್ವಕಪ್​ನ ಸೆಮಿಫೈನಲ್​ಗೆ ಪ್ರವೇಶಿತು.
ಮೊದಲ ಗುಂಪಿನಿಂದ ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ತಂಡಗಳು ಅಧಿಕೃತವಾಗಿ ಸೆಮಿಫೈನಲ್​ಗೆ ಪ್ರವೇಶಿದವು. ಹಾಗೂ ಇದೇವೇಳೆ ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿಯುವ ಕನಸಿನಲ್ಲಿದ್ದ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಟಿ20 ವಿಶ್ವಕಪ್​ನಿಂದ ಸೂಪರ್ 12ರ ಸುತ್ತಿನಿಂದಲೇ ಹೊರಬಿದ್ದಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಶ್ರೀಲಂಕಾ ತಂಡ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 141 ರನ್‌ಗಳ ಸಾಧಾರಣ ಮೊತ್ತ ಗಳಿಸಿತು. ತಂಡದ ಪರ ಅರ್ಧಶತಕ ಸಿಡಿಸಿ ಮಿಂಚಿದ ಪಾತುಮ್ ನಿಸಂಕಾ 45 ಎಸೆತಗಳಲ್ಲಿ 67 ರನ್ ಗಳಿಸಿ, ತಂಡದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡರು. ಅದೇ ಸಮಯದಲ್ಲಿ, ಭಾನುಕಾ ರಾಜಪಕ್ಸೆ 22 ಎಸೆತಗಳಲ್ಲಿ 22 ರನ್ ಗಳಿಸಿದರೆ, ಇಂಗ್ಲೆಂಡ್ ಪರ ವೇಗಿ ಮಾರ್ಕ್​ವುಡ್ 3 ವಿಕೆಟ್ ಪಡೆದು ಯಶಸ್ವಿ ಬೌಲರ್‌ ಎನಿಸಿದರು.
ವೋಕ್ಸ್ ಬ್ಯಾಕ್‌ವರ್ಡ್ ಪಾಯಿಂಟ್‌ನ ಕೊನೆಯ ಓವರ್‌ನ ನಾಲ್ಕನೇ ಚೆಂಡನ್ನು ಬೌಂಡರಿಗೆ ಅಟ್ಟುವ ಮೂಲಕ ಗೆಲುವಿನ ನಗೆ ಬೀರಿತು. ಬೆನ್ ಸ್ಟೋಕ್ಸ್ 36 ರಲ್ಲಿ 42 ರನ್ ಗಳಿಸಿ ಅಜೇಯರಾಗಿ ಉಳಿದರು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಚೀನಾದಲ್ಲಿ 'ಶೂನ್ಯ' ಕೋವಿಡ್ ನೀತಿ ವಿರುದ್ಧ ಭುಗಿಲೆದ್ದ ಆಕ್ರೋಶ: ಕೋವಿಡ್ ನಿರ್ಬಂಧದ ವಿರುದ್ಧ ಬೀದಿಗಿಳಿದ ಜನ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement