ಟಾಟಾ ಸನ್ಸ್‌ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಕಾರು ಅಪಘಾತ ಪ್ರಕರಣ : ವೈದ್ಯೆ ಅನಾಹಿತಾ ಪಾಂಡೋಲೆ ವಿರುದ್ಧ ಎಫ್ಐಆರ್

ನವದೆಹಲಿ : ಸೆಪ್ಟೆಂಬರ್‌ನಲ್ಲಿ ಟಾಟಾ ಸನ್ಸ್‌ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರ ಸಾವಿಗೆ ಕಾರಣವಾದ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಸ್ತ್ರೀರೋಗ ವೈದ್ಯೆ ಅನಾಹಿತಾ ಪಾಂಡೋಲೆ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಕಾರಿನ ಡೇಟಾ ಚಿಪ್ ಮತ್ತು ಮರ್ಸಿಡಿಸ್ ಬೆಂಜ್ ಕಂಪನಿಯ ಅಂತಿಮ ವರದಿಯ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆ ಮತ್ತು ಮೋಟಾರು ವಾಹನಗಳ ಕಾಯ್ದೆಯಡಿಯಲ್ಲಿ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆ ಆರೋಪದಡಿಯಲ್ಲಿ ಪಾಂಡೋಲೆ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ. ಆಕೆಯ ಪತಿ ಮತ್ತು ಸಹ-ಪ್ರಯಾಣಿಕ ಡೇರಿಯಸ್ ಪಾಂಡೋಲೆ ಅವರ ಹೇಳಿಕೆಯನ್ನು ದಾಖಲಸಿದ ಬಳಿಕ ಎಫ್‌ಐಆರ್‌ ದಾಖಲಾಗಿದೆ.

ಡೇರಿಯಸ್ ಪಾಂಡೋಲೆ ಅವರು ಆಸ್ಪತ್ರೆಯಿಂದ ಬಿಡುಗಡೆಯಾದ ನಾಲ್ಕು ದಿನಗಳ ನಂತರ ಪೊಲೀಸರು ಹೇಳಿಕೆಯನ್ನು ದಾಖಲಿಸಿದ್ದಾರೆ .ಆದರೆ, ಅನಾಹಿತಾ ಇನ್ನೂ ಐಸಿಯುನಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಅನಾಹಿತಾ ಪಾಂಡೋಲೆ, ಅವರ ಪತಿ ಡೇರಿಯಸ್ ಮತ್ತು ಸೈರಸ್ ಮಿಸ್ತ್ರಿ ಹಾಗೂ ಜಹಾಂಗೀರ್‌  ಪಾಂಡೋಲೆ  ಗುಜರಾತ್‌ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ಮರ್ಸಿಡೆಜ್ ಬೆಂಜ್ ಅಪಘಾತಕ್ಕೀಡಾಗಿತ್ತು. ವೈದ್ಯ ಅನಾಹಿತಾ ಪಾಂಡೋಲೆ ಚಾಲನೆ ಮಾಡುತ್ತಿದ್ದಾಗ, ಸೆಪ್ಟೆಂಬರ್ 4 ರಂದು ಕಾಂಕ್ರೀಟ್ ತಡೆಗೋಡೆಗೆ ಅಪ್ಪಳಿಸಿತ್ತು. ಪರಿಣಾಮ ಘಟನೆಯಲ್ಲಿ ಮಿಸ್ತ್ರಿ ಮತ್ತು ಜಹಾಂಗೀರ್ ಪಾಂಡೋಲೆ ಮೃತಪಟ್ಟಿದ್ದರು.

ಪ್ರಮುಖ ಸುದ್ದಿ :-   ರಾಯಬರೇಲಿಯಿಂದ ಅಕ್ಕನ ವಿರುದ್ಧ ಸ್ಪರ್ಧಿಸಲು ಬಿಜೆಪಿ ನೀಡಿದ್ದ ಆಫರ್‌ ತಿರಸ್ಕರಿಸಿದರೇ ವರುಣ್‌ ಗಾಂಧಿ..?

2 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement