ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಪಿಎಫ್‌ಐ ಸದಸ್ಯರನ್ನು ಬಂಧಿಸಿದ ಎನ್‌ಐಎ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಹಲವು ಸ್ಥಳಗಳಲ್ಲಿ ದಾಳಿ ನಡೆಸಿ ಮೂವರನ್ನು ಬಂಧಿಸಿದೆ.
ಪ್ರವೀಣ ನೆಟ್ಟಾರು ಹತ್ಯೆಯ ಸಂಚಿನಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ಕೆ ಮಹಮ್ಮದ್ ಇಕ್ಬಾಲ್ ಹಾಗೂ ಈತನ ಸಹೋದರ ಕೆ ಇಸ್ಮಾಯಿಲ್ ಶಫಿ ಮತ್ತು ಸುಳ್ಯ ತಾಲೂಕಿನ ಕಸಬಾ ಗ್ರಾಮದ ಇಬ್ರಾಹಿಂ ಬಂಧಿತ ಆರೋಪಿಗಳು.ದಕ್ಷಿಣ ಕನ್ನಡ, ಹುಬ್ಬಳ್ಳಿ ಮತ್ತು ಮೈಸೂರು ಜಿಲ್ಲೆಗಳ ಐದು ಸ್ಥಳಗಳಲ್ಲಿ ಎನ್‌ಐಎ ಶೋಧ ನಡೆಸಿದೆ.

ಬೆಳ್ಳಾರೆ ನಿವಾಸಿ ಹಾಗೂ ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಕಾರ್ಯದರ್ಶಿ ಪ್ರವೀಣ ನೆಟ್ಟಾರು ಎಂಬವರ ಮೇಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕಾರ್ಯಕರ್ತರು ಜೂನ್ 26 ರಂದು ರಾತ್ರಿ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿದ್ದರು. ಶೋಧದ ವೇಳೆ ಆರೋಪಿಗಳು ಮತ್ತು ಶಂಕಿತರ ಮನೆಗಳಿಂದ ಡಿಜಿಟಲ್ ಸಾಧನಗಳು ಮತ್ತು ದೋಷಾರೋಪಣೆ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಪ್ರಕರಣದಲ್ಲಿ ಇದುವರೆಗೆ 10 ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ನಾಲ್ವರು ಆರೋಪಿಗಳ ಸುಳಿವು ನೀಡಿದವರಿಗೆ ಎನ್‌ಐಎ ಬಹುಮಾನ ಘೋಷಿಸಿದ್ದು, ಅವರನ್ನು ಬಂಧಿಸುವ ಪ್ರಯತ್ನ ಮುಂದುವರಿದಿದೆ.

ಪ್ರಮುಖ ಸುದ್ದಿ :-   ಮಂಗಳೂರಲ್ಲಿ ಅಭೂತಪೂರ್ವ ರೋಡ್ ಶೋ : ಕರಾವಳಿ ಜನರ ಬಗ್ಗೆ ಪ್ರಧಾನಿ ಮೋದಿ ಟ್ವೀಟ್‌

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement