9.82 ಲಕ್ಷ ಕೋಟಿ ರೂ. ಮೌಲ್ಯದ ತಿಳಿವಳಿಕೆ ಒಪ್ಪಂದಗಳಿಗೆ ಸಹಿ ಹಾಕಿದ ಜಿಮ್‌

posted in: ರಾಜ್ಯ | 0

ಬೆಂಗಳೂರು: ಮೂರು ದಿನಗಳ ಜಾಗತಿಕ ಹೂಡಿಕೆದಾರರ ಸಭೆ (GIM) ಶುಕ್ರವಾರ ಮುಕ್ತಾಯಗೊಂಡಿದ್ದು, 9.82 ಲಕ್ಷ ಕೋಟಿ ರೂಪಾಯಿ ಮೌಲ್ಯದ ಎಂಒಯುಗಳಿಗೆ ಸಹಿ ಹಾಕಲಾಗಿದೆ, ಇದು ಆರಂಭದಲ್ಲಿ ನಿರೀಕ್ಷಿಸಿದ 5 ಲಕ್ಷ ಕೋಟಿ ಹೂಡಿಕೆಯ ಸುಮಾರು ಎರಡು ಪಟ್ಟಾಗಿದೆ. ಸಹಿ ಮಾಡಲಾದ ಎಂಒಯುಗಳನ್ನು ಕಾರ್ಯಗತಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ಮುಂದಿನ ಮೂರು ತಿಂಗಳಲ್ಲಿ ಯೋಜನೆಗಳ ಅನುಷ್ಠಾನಕ್ಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿ ವರ್ಗಗಳಿಗೆ ಸೂಚನೆ ನೀಡಿದ್ದಾರೆ.
ಜಿಮ್‌ (GIM) 2022ರ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ, ರಾಜ್ಯದಲ್ಲಿ ಹೂಡಿಕೆ ಮಾಡುವ ಕಂಪನಿಗಳಿಗೆ ನಿರಂತರ ಬೆಂಬಲ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಕಂಪನಿಗಳು ಮತ್ತು ಸರ್ಕಾರಕ್ಕೆ ಸವಾಲುಗಳಿವೆ. ಸವಾಲುಗಳನ್ನು ಎದುರಿಸಲು ನಾವು ಒಟ್ಟಾಗಿ ಕೆಲಸ ಮಾಡೋಣ. ಎಂದರು.
ಹಸಿರು ಇಂಧನ ವಲಯಕ್ಕೆ 2 ಲಕ್ಷ ಕೋಟಿ ರೂಪಾಯಿಗಳ ಹೂಡಿಕೆ ಸೆಳೆಯುವ ಕುರಿತು ಮಾತನಾಡಿದ ಅವರು, “ನಾವು (ಕರ್ನಾಟಕ) ದೇಶದಲ್ಲಿ 63 ಪ್ರತಿಶತದಷ್ಟು ನವೀಕರಿಸಬಹುದಾದ ಇಂಧನವನ್ನು ಉತ್ಪಾದಿಸುತ್ತಿದ್ದೇವೆ. ಹೈಡ್ರೋಜನ್ ಇಂಧನ ಮತ್ತು ಅಮೋನಿಯಾ ಉತ್ಪಾದನೆಯಲ್ಲಿ ಕರ್ನಾಟಕವು ಗಲ್ಫ್ ರಾಷ್ಟ್ರಗಳೊಂದಿಗೆ ಸ್ಪರ್ಧಿಸಲಿದೆ ಎಂದು ನನಗೆ ಖಾತ್ರಿಯಿದೆ ಎಂದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಇಂದಿನ ಪ್ರಮುಖ ಸುದ್ದಿ :-   ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್‌ : 1.55 ಲಕ್ಷ ಹೊಸ ಪಡಿತರ ಕಾರ್ಡ್‌ ವಿತರಣೆಗೆ ಸರ್ಕಾರದ ಆದೇಶ

ಜಗತ್ತು ಎದುರಿಸುತ್ತಿರುವ ಸಂಕಷ್ಟದ ಸಮಯದಲ್ಲಿ ರಾಜ್ಯ ಸರ್ಕಾರ ಈ ಕಾರ್ಯಕ್ರಮವನ್ನು ಆಯೋಜಿಸಲು ಧೈರ್ಯ ಮಾಡಿದೆ. ನಮ್ಮ ಕೈಗಾರಿಕಾ ನೀತಿಗಳು, ಮುಂದೆ ನೋಡುವ ಮನೋಭಾವ, ಪ್ರತಿಭೆ ಮತ್ತು ಮಾನವ ಸಂಪನ್ಮೂಲ ನಮ್ಮ ಶಕ್ತಿಯಾಗಿರುವುದರಿಂದ ಇದು ಸಾಧ್ಯವಾಯಿತು ಎಂದು ಬೊಮ್ಮಾಯಿ ಹೇಳಿದರು.
ರಾಜ್ಯದ ಮೂಲಸೌಕರ್ಯಗಳ ಬಗ್ಗೆ ನಕಾರಾತ್ಮಕ ವರದಿಗಳ ಹೊರತಾಗಿಯೂ, ವಿಶೇಷವಾಗಿ ಬೆಂಗಳೂರಿನಲ್ಲಿ, ಕರ್ನಾಟಕ ನೀಡುತ್ತಿರುವ ಮೂಲಸೌಕರ್ಯವನ್ನು ಬೇರೆ ಯಾವುದೇ ರಾಜ್ಯ ನೀಡಲು ಸಾಧ್ಯವಿಲ್ಲ ಎಂದು ಹೇಳಿದ ಬೊಮ್ಮಾಯಿ, ಹುಬ್ಬಳ್ಳಿ, ಧಾರವಾಡ, ಮಂಗಳೂರು, ಕಲಬುರಗಿ, ಬಳ್ಳಾರಿ, ತುಮಕೂರು ಮತ್ತು ಮೈಸೂರಿನಲ್ಲಿ 50,000 ಎಕರೆ ಭೂ ಬ್ಯಾಂಕ್ ಹೊಂದಿದ್ದೇವೆ. ಶಿವಮೊಗ್ಗ, ವಿಜಯಪುರ ಮತ್ತು ಕಾರವಾರದಲ್ಲಿ ಶೀಘ್ರದಲ್ಲೇ ವಿಮಾನ ನಿಲ್ದಾಣಗಳು ಬರಲಿವೆ. ರಾಷ್ಟ್ರೀಯ ಹೆದ್ದಾರಿಗಳನ್ನು 6,000 ಕಿ.ಮೀ ವಿಸ್ತರಿಸಿ ಅಭಿವೃದ್ಧಿಪಡಿಸುತ್ತಿದ್ದೇವೆ ಎಂದರು.
ಬೆಂಗಳೂರು ಹೊರತುಪಡಿಸಿ ಇತರೆ ಜಿಲ್ಲೆಗಳು ಶೇ 70ರಷ್ಟು ಹೂಡಿಕೆಯನ್ನು ಆಕರ್ಷಿಸಿರುವುದರಿಂದ ರಾಜ್ಯದ ಇತರ ಭಾಗಗಳಿಗೆ ಹೂಡಿಕೆ ಆಕರ್ಷಿಸುವ ಸರ್ಕಾರದ ಪ್ರಯತ್ನ ಯಶಸ್ವಿಯಾಗಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದರು. ಜಿಮ್‌ನ ಮುಂದಿನ ಆವೃತ್ತಿಯು ಜನವರಿ 2025 ರಲ್ಲಿ ನಡೆಯಲಿದೆ ಎಂದು ಅವರು ಹೇಳಿದರು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಚಿಕ್ಕಮಗಳೂರು : ದತ್ತ ಪೀಠದಲ್ಲಿ ಡಿಸೆಂಬರ್ 6ರಿಂದ ದತ್ತ ಜಯಂತಿ ಆಚರಣೆಗೆ ಹೈಕೋರ್ಟ್‌ ಅನುಮತಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement