ತಿರುಪತಿ ವೆಂಕಟೇಶ್ವರ ದೇವಸ್ಥಾನದ ನಿವ್ವಳ ಮೌಲ್ಯ 2.3 ಲಕ್ಷ ಕೋಟಿ ರೂ.

ತಿರುಪತಿ: ದೇಶದ ಅತ್ಯಂತ ಶ್ರೀಮಂತ ದೇವಾಲಯ ಎಂದು ಪರಿಗಣಿತವಾದ ತಿರುಪತಿ ವೆಂಕಟೇಶ್ವರ ದೇವಸ್ಥಾನದ ನಿವ್ವಳ ಮೌಲ್ಯವು 2.3 ಲಕ್ಷ ಕೋಟಿ ಎಂದು ಅಂದಾಜಿಸಲಾಗಿದೆ.
ದೇವಾಲಯವನ್ನು ನಿರ್ವಹಿಸುವ ಟ್ರಸ್ಟ್ ತಿರುಮಲ ತಿರುಪತಿ ದೇವಸ್ಥಾನಮ್ಸ್, 1933 ರಲ್ಲಿ ಸ್ಥಾಪನೆಯಾದ ನಂತರ ಮೊದಲ ಬಾರಿಗೆ ತನ್ನ ನಿವ್ವಳ ಮೌಲ್ಯವನ್ನು ಘೋಷಿಸಿದೆ.

ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಚಾಲ್ತಿಯಲ್ಲಿರುವ ಮಾರುಕಟ್ಟೆ ಬೆಲೆಯಲ್ಲಿ 5,300 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ 10.3 ಟನ್ ಚಿನ್ನದ ಠೇವಣಿ ಹೊಂದಿದೆ ಎಂದು ದೇವಸ್ಥಾನದ ಟ್ರಸ್ಟ್ ಹೇಳಿದೆ.ಇದಲ್ಲದೆ, ಇದು 2.5 ಟನ್ ಚಿನ್ನಾಭರಣಗಳನ್ನು ಹೊಂದಿದೆ, ಇವುಗಳಲ್ಲಿ ಹೆಚ್ಚಿನವು ಪುರಾತನ ವಸ್ತುಗಳು, ಬೆಲೆಬಾಳುವವು ಎಂದು ಪರಿಗಣಿಸಲಾಗಿದೆ. ಅಲ್ಲದೆ, ಬ್ಯಾಂಕ್‌ಗಳಲ್ಲಿ ಸುಮಾರು 16,000 ಕೋಟಿ ರೂಪಾಯಿಗಳ ನಗದು ಠೇವಣಿ ಹೊಂದಿದೆ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ
ದೇವಾಲಯದ ಆಸ್ತಿಗಳ ಪಟ್ಟಿಯು ಭಾರತದಾದ್ಯಂತ 960 ಆಸ್ತಿಗಳನ್ನು ಒಳಗೊಂಡಿದ್ದು ಒಟ್ಟು 7,123 ಎಕರೆ ವಿಸ್ತೀರ್ಣವನ್ನು ಹೊಂದಿದೆ. ಇವುಗಳ ಮೌಲ್ಯ ಸುಮಾರು 85,705 ಕೋಟಿ ರೂಪಾಯಿ ಎಂದು ಟಿಟಿಡಿ ಅಧ್ಯಕ್ಷ ವೈವಿ ಸುಬ್ಬಾ ರೆಡ್ಡಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ: ತಾಪಮಾನ ಹೆಚ್ಚಳದಿಂದ ವಿದ್ಯಾರ್ಥಿಗಳು ಪಾರಾಗಲು ಕ್ಲಾಸ್‌ ರೂಮ್‌ ಅನ್ನೇ ಈಜುಕೊಳವಾಗಿ ಪರಿವರ್ತಿಸಿದ ಶಾಲೆ...!

3.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement