ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ಮೂವರು ಸಾವು

ಮೈಸೂರು : ಜಿಲ್ಲೆಯಲ್ಲಿ ದುರಂತವೊಂದು ಸಂಭವಿಸಿದ್ದು, ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೂವರು ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ನೀಲಸೋಗೆ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ನೀಲಸೋಗೆ ಗ್ರಾಮದಲ್ಲಿ ವಿದ್ಯುತ್ ತಂತಿ ತುಳಿದು ಮೂವರು ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಹರೀಶ್ (32), ರಾಚೇಗೌಡ (60) ಹಾಗೂ ಮಹದೇವಸ್ವಾಮಿ (38) ಎಂದು ಗುರುತಿಸಲಾಗಿದೆ. ರಾಚೇ ಗೌಡ ಹಾಗೂ ಹರೀಶ ತಂದೆ ಹಾಗೂ ಮಗ ಎಂದು ಹೇಳಲಾಗಿದೆ.
ಬೆಳಿಗ್ಗೆ ಗದ್ದೆಗೆ ಔಷಧ ಸಿಂಪಡಣೆ ಮಾಡುವ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಔಷಧ ಸಿಂಪಡಣೆ ಮಾಡುತ್ತ ರಾಚೇ ಗೌಡ ಅವರು ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದಿದ್ದಾರೆ. ವಿದ್ಯುತ್‌ ಪ್ರವಹಿಸಿ ಬೊಬ್ಬೆ ಹೊಡೆದಿದ್ದಾರೆ. ಅವರ ರಕ್ಷಣೆಗೆ ಬಂದ ಹರೀಶ ಅವರಿಗೂ ವಿದ್ಯುತ್‌ ತಗುಲಿದೆ. ಇವರ ರಕ್ಷಣೆಗೆ ಬಂದ ಮಹದೇವಸ್ವಾಮಿ ಅವರಿಗೂ ವಿದ್ಯುತ್‌ ಶಾಕ್‌ ಹೊಡೆದು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಸ್ಥಳೀಯ ಶಾಸಕ ಹಾಗೂ ಜೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎಂದು ವರದಿಯಾಗಿದೆ. ಟಿ ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement