ಮೈಸೂರು: ವಾಕಿಂಗ್‌ ವೇಳೆ ನಿವೃತ್ತ ಐಬಿ ಅಧಿಕಾರಿ ಮೇಲೆ ವಾಹನ ಹಾಯಿಸಿ ಪರಾರಿ, ಕೊಲೆ ಶಂಕೆ

ಮೈಸೂರು: ಮೈಸೂರಿನಲ್ಲಿ ಕೇಂದ್ರ ಇಂಟೆಲಿಜೆನ್ಸ್ ಬ್ಯೂರೊದ ‌ನಿವೃತ್ತ ಅಧಿಕಾರಿಯೋರ್ವರು ಹಿಟ್‌ & ರನ್‌ ಪ್ರಕರಣದಲ್ಲಿ ಮೃತಪಟ್ಟಿದ್ದಾರೆ.
ಮೈಸೂರಿನ ಮಾನಸ ಗಂಗೋತ್ರಿ ಕ್ಯಾಂಪಸ್‌ನ ಕಂಪ್ಯೂಟರ್ ಸೈನ್ಸ್ ವಿಭಾಗದ ಪಕ್ಕದ ರಸ್ತೆಯಲ್ಲಿ ಕುಲಕರ್ಣಿಯವರು ವಾಕಿಂಗ್ ಮಾಡುತ್ತಿದ್ದಾಗ ಇದು ಸಂಭವಿಸಿದ್ದು, 83 ವರ್ಷದ ಕೇಂದ್ರ ಇಂಟೆಲಿಜೆನ್ಸ್ ಬ್ಯೂರೊದ ‌ನಿವೃತ್ತ ಅಧಿಕಾರಿ ಆರ್.ಎಸ್.ಕುಲಕರ್ಣಿ ಎಂಬವರನ್ನು ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ತೀವ್ರವಾಗಿ ಗಾಯಗೊಂಡಿದ್ದ ಕುಲಕರ್ಣಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೇಲ್ನೋಟಕ್ಕೆ ಮೇಲ್ನೋಟಕ್ಕೆ ಇದೊಂದು ಹಿಟ್ ಅಂಡ್ ರನ್ ಪ್ರಕರಣವೆಂದು ಭಾವಿಸಿದ್ದ ಪೊಲೀಸರು ಸಹ ಕೊಲೆಯ ಶಂಕೆ ಮೇಲೆ ತನಿಖೆ ನಡೆಸುತ್ತಿದ್ದಾರೆ. ಮೈಸೂರಿನ ಮಾನಸ ಗಂಗೋತ್ರಿ ಕ್ಯಾಂಪಸ್‌ನ ಸಮೀಪದ ರಸ್ತೆಯಲ್ಲಿ ಕುಲಕರ್ಣಿಯವರು ವಾಕಿಂಗ್ ಮಾಡುತ್ತಿದ್ದಾಗ ವಾಹನವನ್ನು ಅವರಿಗೆ ಡಿಕ್ಕಿ ಹೊಡೆಸಿರುವುದು ಸಿಸಿಟಿವಿಯಲ್ಲಿ ಕಂಡುಬಂದಿದೆ.

ಘಟನಾ ಸ್ಥಳದ ಆಸುಪಾಸಿನಲ್ಲಿ ಅಳವಡಿಸಿರುವ ಸಿ.ಸಿ.ಕ್ಯಾಮರಾಗಳಲ್ಲಿ ದಾಖಲಾಗಿದ್ದ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಬೆಚ್ಚಿ ಬೀಳಿಸುವ ಸಂಗತಿ ಬೆಳಕಿಗೆ ‌ಬಂದಿದೆ. ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಈ ರೀತಿಯ ದುಷ್ಕೃತ್ಯವೆಸಗಿದ್ದಾರೆ. ಕುಲಕರ್ಣಿಯವರು ರಸ್ತೆ ಬದಿಯಲ್ಲಿ ನಿಂತಿದ್ದರೂ ಸಹ ಅಪಘಾತವೆಸಗಿ ಪರಾರಿಯಾಗಿದ್ದಾರೆ. ಘಟನಾ ಸ್ಥಳದಲ್ಲಿ ಕೃತ್ಯವೆಸಗಿದ ಕಾರಿನ ಮಿರರ್ ಪತ್ತೆಯಾಗಿದೆ. ಪ್ರಕಣರದ ಬಗ್ಗೆ ಎಲ್ಲಾ ಆಯಾಮಗಳಲ್ಲೂ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕುಲಕರ್ಣಿಯವರು ಸೇವೆಯಿಂದ ನಿವೃತ್ತಿಯಾಗಿ 23 ವರ್ಷಗಳಾಗಿವೆ. ಜಯಲಕ್ಷ್ಮಿಪುರಂ ಪೋಲಿಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಪೋಲಿಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಪ್ರಕರಣದ ಬಗ್ಗೆ ಎಲ್ಲಾ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದೇವೆ, ಎಸಿಪಿ ನೇತೃತ್ವದಲ್ಲಿ ಮೂವರು ಪೊಲೀಸ್ ಅಧಿಕಾರಿಗಳ ತಂಡ ರಚಿಸಲಾಗಿದೆ. ಶೀಘ್ರವೇ ಪ್ರಕರಣ ಬೇಧಿಸಲಿದ್ದೇವೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣಗೆ ನಾವು ಅನುಮತಿ ನೀಡಿಲ್ಲ ; ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಜರ್ಮನಿಗೆ ತೆರಳಿದ್ದಾರೆ : ವಿದೇಶಾಂಗ ಸಚಿವಾಲಯ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement