ಸಿಡ್ನಿ ನ್ಯಾಯಾಲಯದಿಂದ ಗುಣತಿಲಕಗೆ ಜಾಮೀನು ನಿರಾಕರಣೆ: ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ಅಮಾನತುಗೊಳಿಸಿದ ಶ್ರೀಲಂಕಾ

 ಕೋಲಂಬೊ : ಅತ್ಯಾಚಾರದ ಆರೋಪಕ್ಕೆ ಗುರಿಯಾಗಿ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಬಂಧನಕ್ಕೊಳಗಾಗಿರುವ ಶ್ರೀಲಂಕಾ ಕ್ರಿಕೆಟಿಗ ದನುಷ್ಕಾ ಗುಣತಿಲಕ ಅವರನ್ನು ಶ್ರೀಲಂಕಾ ಕ್ರಿಕೆಟ್ ಮಂಡಳಿ  ಎಲ್ಲ ಮಾದರಿಯ ಕ್ರಿಕೆಟ್‌ನಿಂದ ಅಮಾನತು ಮಾಡಿದೆ.
ಶ್ರೀಲಂಕಾ ಕ್ರಿಕೆಟ್ ಮಂಡಳಿಯ ಕಾರ್ಯಕಾರಿ ಸಮಿತಿಯು, ದನುಷ್ಕಾ ಗುಣತಿಲಕ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ಅಮಾನತುಗೊಳಿಸಲು ನಿರ್ಧರಿಸಿದೆ ಎಂದು ಶ್ರೀಲಂಕಾ ಕ್ರಿಕೆಟ್ ದೃಢಪಡಿಸಿದೆ. ಸಿಡ್ನಿಯಲ್ಲಿ ಸ್ಟಾರ್ ಬ್ಯಾಟರ್ ಅನ್ನು ಬಂಧಿಸಿ ಲೈಂಗಿಕ ಆರೋಪ ಹೊರಿಸಲಾಗಿದೆ ಎಂದು ತಿಳಿಸಿದ ನಂತರ ಅವರನ್ನು ಯಾವುದೇ ಆಯ್ಕೆಗಳಿಗೆ ಪರಿಗಣಿಸುವುದಿಲ್ಲ ಎಂದು ಕ್ರಿಕೆಟ್ ಮಂಡಳಿ ಸ್ಪಷ್ಟಪಡಿಸಿದೆ.
ಆರೋಪಿತ ಈ ಪ್ರಕರಣದ ಮುಕ್ತಾಯದ ನಂತರ, ತಪ್ಪಿತಸ್ಥರೆಂದು ಕಂಡುಬಂದಲ್ಲಿ ಆಟಗಾರನಿಗೆ ದಂಡ ವಿಧಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ” ಎಂದೂ ಅದು ಹೇಳಿದೆ.

ಜಾಮೀನು ನಿರಾಕರಣೆ:
ಟಿ20 ವಿಶ್ವಕಪ್ ವೇಳೆ ಅತ್ಯಾಚಾರ ಆರೋಪ ಎದುರಿಸುತ್ತಿರುವ ಶ್ರೀಲಂಕಾ ಕ್ರಿಕೆಟಿಗ ದನುಷ್ಕಾ ಗುಣತಿಲಕ ಅವರಿಗೆ ಸಿಡ್ನಿ ನ್ಯಾಯಾಲಯ ಜಾಮೀನು ನಿರಾಕರಿಸಿದೆ.
ನವೆಂಬರ್ 2ರಂದು ಮಹಿಳೆಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯ ನಂತರ 31 ವರ್ಷದ ಗುಣತಿಲಕ ಅವರನ್ನು ಭಾನುವಾರ ನಸುಕಿನಲ್ಲಿ ಬಂಧಿಸಲಾಯಿತು. ಟಿ20 ವಿಶ್ವಕಪ್ ವೇಳೆ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಬಂಧಿತರಾಗಿರುವ ಶ್ರೀಲಂಕಾ ಕ್ರಿಕೆಟಿಗ ದನುಷ್ಕಾ ಗುಣತಿಲಕ ಅವರಿಗೆ ಸಿಡ್ನಿ ಸ್ಥಳೀಯ ನ್ಯಾಯಾಲಯದಲ್ಲಿ ವಿಚಾರಣೆ ಬಳಿಕ ಜಾಮೀನು ನಿರಾಕರಿಸಲಾಗಿದೆ.

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement