ಖಾಸಗಿ ಜಮೀನುಗಳ ದಾಖಲೆ ರಹಿತ ಜನವಸತಿ ಪ್ರದೇಶದವರಿಗೆ ಸಿಹಿ ಸುದ್ದಿ: : ಕಂದಾಯ ಗ್ರಾಮವಾಗಿ ಪರಿವರ್ತಿಸಿ ಹಕ್ಕು ಪತ್ರ ನೀಡಲು ಆದೇಶ

ಬೆಂಗಳೂರು: ಖಾಸಗಿ ಜಮೀನುಗಳಲ್ಲಿ ನೆಲೆಸಿರುವ ದಾಖಲೆ ರಹಿತ ಜನವಸತಿಗಳನ್ನು ಕಂದಾಯ ಗ್ರಾಮ, ಗ್ರಾಮದ ಭಾಗವಾಗಿ ಪರಿವರ್ತಿಸಿ, ಅಲ್ಲಿಯ ನಿವಾಸಿಗಳಿಗೆ ಹಕ್ಕು ಪತ್ರಗಳನ್ನು ( Title Deed ) ನೀಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಖಾಸಗಿ ಜಮೀನುಗಳಲ್ಲಿ ವಾಸಿಸುತ್ತಾ, ದಾಖಲೆ ರಹಿತರಾಗಿದ್ದವರಿಗೆ ಸರ್ಕಾರ ಭರ್ಜರಿಸಿಹಿ ಸುದ್ದಿ ನೀಡಿದೆ.
ಈ ಕುರಿತು ಕಂದಾಯ ಇಲಾಖೆಯ ಸರ್ಕಾರದ ಉಪಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ನೆಲೆಗೊಂಡಿರುವ ಜನವಸತಿಗಳ ಪೈಕಿ ಹಲವಾರು ಜನವಸತಿಗಳು ವಿಶೇಷವಾಗಿ ಲಂಬಾಣಿ ತಾಂಡಾ, ಗೊಲ್ಲರಹಟ್ಟಿ, ವಡ್ಡರಹಟ್ಟಿ, ನಾಯಕರ ಹಟ್ಟಿ, ಕುರುಬರ ಹಟ್ಟಿ, ಹಾಡಿ, ಮಜರೆ, ದೊಡ್ಡಿ, ಪಾಳ್ಯ, ಕ್ಯಾಂಪ್, ಕಾಲೋನಿ ಇತ್ಯಾದಿ ಹೆಸರುಗಳಿಂದ ಗುರುತಿಸಲ್ಪಟ್ಟಿರುವ ಜನವಸತಿಗಳು ದಾಖಲೆರಹಿತವಾಗಿ ಉಳಿದುಕೊಂಡಿದೆ. ಇಂತಹ ಜನವಸತಿಗಳನ್ನು ಕಂದಾಯ ಗ್ರಾಮಗಳಾಗಿ ಅಥವಾ ಅಸ್ತಿತ್ವದಲ್ಲಿರುವ ಕಂದಾಯ ಗ್ರಾಮದ ಭಾಗವಾಗಿ ಪರಿವರ್ತಿಸಿ ಅಲ್ಲಿನ ನಿವಾಸಿಗಳಿಗೆ ವಾಸ್ತವ್ಯದ ಹಕ್ಕು ದಾಖಲೆಗಳನ್ನು ಒದಗಿಸಿ, ಆ ಕುಟುಂಬಗಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿರುತ್ತದೆ ಎಂದು ಅವರು ಹೇಳಿದ್ದಾರೆ.

ಈ ಯೋಜನೆ ಅನುಷ್ಠಾನಗೊಳಿಸಲು ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸುತ್ತಿದೆ. ಸರ್ಕಾರವು ಕರ್ನಾಟಕ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ಕಲಂ 38ಎ ಮತ್ತು ನಿಯಮ 9ಸಿ ಸೇರ್ಪಡೆಗೊಳಿಸುವ ಮೂಲಕ ಖಾಸಗಿ ಜಮೀನಿನಲ್ಲಿ ನೆಲೆಗೊಂಡಿರುವ ದಾಖಲೆರಹಿತ ಜನವಸತಿ ಪ್ರದೇಶಗಳ ನಿವಾಸಿಗಳಿಗೆ ಹಕ್ಕುಪತ್ರ ನೀಡಲು ಅವಕಾಶ ಕಲ್ಪಿಸಿದೆ ಎಂದು ಅವರು ತಿಳಿಸಿದ್ದಾರೆ.
ಅಲ್ಲದೆ ಖಾಸಗಿ ಜಮೀನುಗಳಲ್ಲಿ ನೆಲೆಸಿರುವ ದಾಖಲೆ ರಹಿತ ಜನವಸತಿಗಳನ್ನು ಕಂದಾಯ ಗ್ರಾಮ, ಗ್ರಾಮದ ಭಾಗವಾಗಿ ಪರಿವರ್ತಿಸಿ, ಅಲ್ಲಿಯ ನಿವಾಸಿಗಳಿಗೆ ಹಕ್ಕು ಪತ್ರಗಳನ್ನು ನೀಡಲು ಕೆಲವು ಅಂಶಗಳನ್ನು ಅನುಸರಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದು, ಆ ಅಂಶಗಳನ್ನು ಸುತ್ತೋಲೆಯಲ್ಲಿ ಪಟ್ಟಿ ಮಾಡಿ ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ರಾಜ್ಯದಲ್ಲಿ ತಾಪಮಾನ ಏರಿಕೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement