ಯತ್ನಾಳರನ್ನು ಭೇಟಿ ಮಾಡಿದ ಕರ್ನಾಟಕ ಉಸ್ತುವಾರಿ ಅರುಣ್‌ ಸಿಂಗ್‌ ; ಗೌಪ್ಯ ಮಾತುಕತೆ

posted in: ರಾಜ್ಯ | 0

ವಿಜಯಪುರ: ಕರ್ನಾಟಕದ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್ ಹಾಗೂ ವಿಜಯಪುರ ನಗರ ಶಾಸಕ‌ ಬಸನಗೌಡ ಪಾಟೀಲ್‌ ಯತ್ನಾಳ್‌ ಮಂಗಳವಾರ ರಾತ್ರಿ ಗೌಪ್ಯವಾಗಿ ಮಾತುಕತೆ ನಡೆಸಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ವಿಜಯಪುರ ಪ್ರವಾಸದಲ್ಲಿರುವ ಅರುಣ್‌ ಸಿಂಗ್ ಯತ್ನಾಳ್‌ ಅವರನ್ನು ಭೇಟಿ ಮಾಡಿ ಸುಮಾರು 20-25 ನಿಮಿಷಗಳ ಕಾಲ ಗೌಪ್ಯವಾಗಿ ಮಾತುಕತೆ ನಡೆಸಿದ್ದಾರೆ.
ವಿಜಯಪುರ ನಗರದ ಹೊರ ಭಾಗದಲ್ಲಿರುವ ಯತ್ನಾಳ ಮಾಲೀಕತ್ವದ ಹೈಪರ್ ಮಾರ್ಟ್ ನಲ್ಲಿ ಈ ಸಭೆ ನಡೆದಿದೆ. ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಬಿಜೆಪಿ ಸಂಕಲ್ಪ ಯಾತ್ರೆಯ ಪ್ರಯುಕ್ತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಅರುಣ್‌ ಸಿಂಗ್ ಹಾಗೂ ಬಿಜೆಪಿಯ ಜಿಲ್ಲೆಯ ಬಹುತೇಕ ಎಲ್ಲ ಮುಖಂಡರು ಭಾಗವಹಿಸಿದ್ದರು. ಆದರೆ, ಬಸನಗೌಡ ಪಾಟೀಲ್‌ ಯತ್ನಾಳ್‌ ಮಾತ್ರ ಭಾಗವಹಿಸಿರಲಿಲ್ಲ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ತಮ್ಮ ತವರು ಜಿಲ್ಲೆ ವಿಜಯಪುರಕ್ಕೆ ಬಂದರೂ ಯತ್ನಾಳ್‌ ಅರುಣ್‌ ಸಿಂಗ್ ಅವರನ್ನು ಭೇಟಿ ಮಾಡದೆ ಅಂತರ ಕಾಯ್ದುಕೊಂಡಿದ್ದರು. ಇದರಿಂದ ತಪ್ಪು ಸಂದೇಶ ರವಾನೆಯಾಗಬಹುದು ಎಂಬ ಬಗ್ಗೆ ಜಾಗೃತರಾದ ಅರುಣ ಸಿಂಗ್ ವಿಜಯಪುರಕ್ಕೆ ಆಗಮಿಸಿ ಯತ್ನಾಳ್‌ ಅವರನ್ನು ಭೇಟಿ ಮಾಡಿದ್ದಾರೆ.
ಯತ್ನಾಳ್‌ ಅವರನ್ನು ಪ್ರತ್ಯೇಕವಾಗಿ ಕರೆದ ಅರುಣ್‌ ಸಿಂಗ್ ಸುಮಾರು 20 ನಿಮಿಷಗಳ ಕಾಲ ಗೌಪ್ಯವಾಗಿ ಮಾತುಕತೆ ನಡೆಸಿದ್ದಾರೆ. ಆದರೆ, ಇತ್ತೀಚೆಗೆ ಯತ್ನಾಳ್‌ ಕುರಿತು ಅರುಣ್‌ ಸಿಂಗ್ ಯತ್ನಾಳ್‌ ಅವರು ಪಕ್ಷದ ನೀತಿ ನಿರೂಪಣೆ ಸಮಿತಿಯ ಸದಸ್ಯರಲ್ಲ. ಅವರೊಬ್ಬ ಶಾಸಕ ಮಾತ್ರ. ಅವರ ಮಾತಿಗೆ ಮಹತ್ವ ನೀಡಬೇಕಿಲ್ಲ ಎಂದು ಹೇಳಿದ್ದರು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಕಿತವಾಡ್ ಫಾಲ್ಸ್: ಸೆಲ್ಫಿ ತೆಗೆಯುವಾಗ ಜಾರಿ ಬಿದ್ದು ಬೆಳಗಾವಿ ನಾಲ್ವರು ಯುವತಿಯರು ನೀರುಪಾಲು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement