ಮುರುಘಾ ಶರಣರು ಕ್ಷಮಿಸಲಾರದ ಅಪರಾಧ ಮಾಡಿದ್ದಾರೆ: ಯಡಿಯೂರಪ್ಪ

ಉಡುಪಿ: ಮುರುಘಾ ಶರಣರು ಕ್ಷಮಿಸಲಾರದ ಅಪರಾಧ ಮಾಡಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಮುರುಘಾ ಶರಣರಿಂದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ಮುರುಘಾ ಶರಣರು ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಅವರು ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆಂದು ಅಂದುಕೊಂಡಿರಲಿಲ್ಲ. ಎಲ್ಲರೂ ಇದನ್ನು ಖಂಡಿಸಬೇಕು. ಶ್ರೀಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಹೇಳಿದರು.

ಇದೇ ವೇಳೆ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಸಿದ್ದರಾಮಯ್ಯ ಅವರು ಭ್ರಮೆಯಲ್ಲಿದ್ದಾರೆ. ರಾಜ್ಯದ ಜನ ಅವರ ಜೇಬಿನಲ್ಲಿದ್ದಾರೆ ಎಂಬ ಭಾವನೆ ಅವರ ಮನಸ್ಸಲ್ಲಿದ್ದಂತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲ್ಲುವುದು ಅಸಾಧ್ಯದ ಮಾತು ಎಂದರು.
ನಾನು ಮತ್ತು ಬೊಮ್ಮಾಯಿ ರಾಜ್ಯದಲ್ಲಿ ಪ್ರವಾಸ ಹೊರಟಾಗ ಅಭೂತಪೂರ್ವ ಜನಬೆಂಬಲ ಸಿಕ್ಕಿದೆ. ಮೋದಿ ಅವರ ಬೆಂಬಲದೊಂದಿಗೆ ಬಿಜೆಪಿಗೆ ಕರ್ನಾಟಕದಲ್ಲಿ ಸ್ಪಷ್ಟ ಬಹುಮತ ಸಿಗಲಿದೆ ಎಂದು ಹೇಳಿದರು.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement