ಹಿಂದೂ ಎಂಬುದು ಭಾರತೀಯ ಪದ ಅಲ್ಲ ಎಂದು ನಾನು ಹೇಳಿದ್ದರಲ್ಲಿ ತಪ್ಪಿಲ್ಲ: ಸತೀಶ ಜಾರಕಿಹೊಳಿ

ಬೆಳಗಾವಿ: ಹಿಂದೂ ಪದದ ಅರ್ಥದ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯ ಸತೀಶ್ ಜಾರಕಿಹೊಳಿ (Satish Jarkiholi) ಸ್ಪಷ್ಟನೆ ನೀಡಲು ಯತ್ನಿಸಿದ್ದಾರೆ. ಭಾಷಣದಲ್ಲಿ ಹೇಳಿದ ಹಿಂದೂ ಶಬ್ದ, ಪರ್ಷಿಯನ್ ಭಾಗದಿಂದ ಬಂದಿದೆ ಎಂದು ಉಲ್ಲೇಖ ಮಾಡಿದ್ದು ನಿಜ. ನಾನು ಇದರ ಬಗ್ಗೆ ಸಂಪೂರ್ಣವಾಗಿ ಚರ್ಚೆ ಆಗಲಿ ಎಂದು ಹೇಳಿದ್ದೇನೆ. ಹಿಂದೂ ಶಬ್ದದ ಬಗ್ಗೆ ಕೆಲವು ನಿಂದನೆ ಮಾಡುವಂತಹ ಸಾಕಷ್ಟು ಶಬ್ದಗಳು ದಾಖಲೆಗಳಲ್ಲಿ ಸಿಗುತ್ತವೆ. ಅದರ ಬಗ್ಗೆ ನಾನು ಒತ್ತಿ ಹೇಳಿದ್ದೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ‌ ತಮ್ಮ ಹೇಳಿಕೆಗೆ ಸ್ಪಷ್ಟೀಕರಣ ನೀಡಿದ್ದಾರೆ.
ನನ್ನ ಹೇಳಿಕೆಯು ತಪ್ಪು ಎಂದಾದರೆ ಕ್ಷಮೆ ಕೇಳುವುದಷ್ಟೇ ಅಲ್ಲ, ರಾಜೀನಾಮೆ ಸಹ ನೀಡುತ್ತೇನೆ ಎಂದು ಹೇಳಿದ್ದಾರೆ.
ನಾನು ಅಧ್ಯಯನದ ಅನುಭವದಿಂದಲೇ ನಾನು ಈ ಹೇಳಿಕೆ ನೀಡಿದ್ದೇನೆ. ಹಿಂದೂ ಎಂಬುದು ಪರ್ಷಿಯನ್ ಭಾಷೆಯಿಂದ ಬಂದ ಶಬ್ದ. ಹಿಂದೂ ಪದದ ಬಗ್ಗೆ ಶಬ್ದಕೋಶದಲ್ಲಿ, ವಿಕಿಪಿಡಿಯಾದಲ್ಲಿ ಇರುವ ವಿವರಣೆಯನ್ನೇ ನಾನು ಹೇಳಿದ್ದೇನೆ. ಹಿಂದೂ ಪದದ ಬಗ್ಗೆ ಚರ್ಚೆಯಾಗಬೇಕು ಎಂದು ನಾನು ಹೇಳಿದ್ದೇನೆ. ಆದರೆ ನಾನು ಏನು ಹೇಳಿದ್ದೇನೆಯೋ ಅದರ ಬಗ್ಗೆ ಅಥವಾ ಹಿಂದೂ ಪದದ ನಿಜವಾದ ಅರ್ಥದ ಬಗ್ಗೆ ಚರ್ಚೆ ನಡೆಯುತ್ತಿಲ್ಲ. ಬೇರೆ ಯಾವ್ಯಾವುದೋ ವಿಷಯಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂದರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊಗಳು..| ಕುಮಟಾ : ಬಾಡದಲ್ಲಿ 26 ಗಂಟೆಗಳ ನಂತರ ಮನೆಗೆ ನುಗ್ಗಿದ್ದ ಚಿರತೆ ಬಂಧಿ ; ಅರವಳಿಕೆ ಚುಚ್ಚು ಮದ್ದು ನೀಡಿ ಸೆರೆ ಹಿಡಿದರು...

ನಾವು ಯಾವುದೇ ಜಾತಿ, ಧರ್ಮಗಳನ್ನ ಮೀರಿ ಬೆಳೆಯಬೇಕು.  ನಾನು ಹೇಳಿದರಲ್ಲಿ ಏನೂ ತಪ್ಪಿಲ್ಲ. ಪರ್ಷಿಯನ್ ಶಬ್ದ ಬಂದಿರುವ ಬಗ್ಗೆ  ದಾಖಲೆಗಳಿವೆ. ಆರ್ಯ ಸಮಾಜದ ಸ್ಥಾಪಕರು ದಯಾನಂದ ಸರಸ್ವತಿ ರಚಿಸಿದ `ಸತ್ಯಾರ್ಥ ಪ್ರಕಾಶ’, ಡಾ.ಜಿ.ಎಸ್.ಪಾಟೀಲ ಬರೆದಂತಹ `ಬಸವ ಭಾರತ’ ಹಾಗೂ ಬಾಲಗಂಗಾಧರ ತಿಲಕ್‌ರವರ ಕೇಸರಿ ಪತ್ರಿಕೆಯಲ್ಲೂ ಉಲ್ಲೇಖ ಇದೆ. ಸಾಕಷ್ಟು ವೆಬ್‌ಸೈಟ್, ವಿಕಿಪೀಡಿಯದಲ್ಲಿ ಮಾಹಿತಿ ಲಭ್ಯ ಇದೆ. ಆದರೆ ನನ್ನ ಹೇಳಿಕೆಯನ್ನು ಉಕ್ರೇನ್-ರಷ್ಯಾ ಯುದ್ಶ ಮಾದರಿಯಲ್ಲಿ, ಸರ್ಜಿಕಲ್ ಸ್ಟ್ರೈಕ್‌ ಮಾದರಿಯಲ್ಲಿ ವಿಶ್ಲೇಷಣೆ ಮಾಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅನಾವಶ್ಯಕವಾಗಿ ಇಷ್ಟೊಂದು ವೈಭವೀಕರಣ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಹಿಂದೂ’ ಶಬ್ದ ಪರ್ಷಿಯನ್ ಭಾಷೆಯಿಂದ ಬಂದಿದ್ದು ಎಂದು ಹೇಳಿದ್ದು ನಿಜ. ಹಿಂದೂ ಶಬ್ದದ (Hindu Word) ಬಗ್ಗೆ ಕೆಲವು ನಿಂದನೆ ಮಾಡುವಂತ ಸಾಕಷ್ಟು ಶಬ್ದಗಳು ದಾಖಲೆಗಳಲ್ಲಿ ಸಿಗುತ್ತವೆ. ಅದರ ಬಗ್ಗೆ ನಾನು ಹೇಳಿದ್ದೇನೆ, ಅದು ಸತೀಶ ಜಾರಕಿಹೊಳಿ ಹೇಳಿದ್ದಲ್ಲ. ಈ ರೀತಿಯ ಭಾಷಣಗಳು ದೇಶದಲ್ಲಿ ಸಾವಿರಾರು ಆಗಿವೆ. ಆದರೂ ನಾನು ಹೇಳಿದ್ದನ್ನು ದೊಡ್ಡಮಟ್ಟದಲ್ಲಿ ವಿಶ್ಲೇಷಣೆ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನನಗೆ ಯಾರನ್ನೂ ಅಪಮಾನ ಮಾಡುವ ಉದ್ದೇಶ ಇಲ್ಲ. ನಾನು ಯಾವುದೇ ಧರ್ಮ, ಜಾತಿ, ಸಮಾಜದ ವಿರುದ್ಧ ಹೇಳಿಕೆ ನೀಡಿಲ್ಲ ನಾನು ತಪ್ಪಿ ಹೇಳಿದ್ದರೆ ಚರ್ಚೆ ಮುಂದುವರಿಸಬಹುದು ಎಂದರು.
ಭಾನುವಾರ (ನ 6) ನಿಪ್ಪಾಣಿ ಪಟ್ಟಣದಲ್ಲಿ ಮಾನವ ಬಂಧುತ್ವ ವೇದಿಕೆ ಆಯೋಜಿಸಿದ್ದ ‘ಮನೆಮನೆಗೆ ಬುದ್ಧ, ಬಸವ, ಅಂಬೇಡ್ಕರ್ ಕಾರ್ಯಕ್ರಮ’ದಲ್ಲಿ ಹಿಂದೂ ಶಬ್ದದ ಅರ್ಥದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿಕೆ ಇದು ಪರ್ಷಿಯನ್‌ ಶಬ್ದವಾಗಿದ್ದು, ಇದರ ಅರ್ಥ ಅಸಭ್ಯವಾಗಿದೆ ಎಂದು ಹೇಳಿದ್ದರು. ಇದು ಈಗ ವೀವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್‌ ಅವರ ಹೇಳಿಕೆಯಿಂದ ದೂರ ಸರಿಯಲು ಪ್ರಯತ್ನಸಿದೆ. ಕಾಂಗ್ರೆಸ್‌ನ ಕರ್ನಾಟಕದ ಉಸ್ತುವಾರಿ ರಣಜೀತ್‌ ಸಿಂಗ್‌ ಸುರ್ಜೆವಾಲಾ ಅವರು ಈ ಹೇಳಿಕೆ ಖಂಡಿಸಿದ್ದಾರೆ.

ಪ್ರಮುಖ ಸುದ್ದಿ :-   ಐಟಿ ಅಧಿಕಾರಿಗಳ ದಾಳಿ, ಕಲಬುರಗಿ ರೈಲ್ವೆ ನಿಲ್ದಾಣದ ಬಳಿ ಕಾರಿನಲ್ಲಿದ್ದ 2 ಕೋಟಿ ರೂ. ವಶಕ್ಕೆ

4 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement