ಯುದ್ಧಕ್ಕೆ ಸಿದ್ಧರಾಗಿ ಎಂದು ಸೇನೆಗೆ ಕರೆ ಕೊಟ್ಟ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್: ತೈವಾನ್ ಗುರಿಯೇ?

ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ತಮ್ಮ ಸೇನೆಗೆ ಸಿದ್ಧರಾಗಿ ಎಂಬ ಆದೇಶವನ್ನು ನೀಡಿದ್ದಾರೆ. ತಮ್ಮ ಸೇನೆಯ ಜಾಯಿಂಟ್ ಆಪರೇಷನ್ ಕಮಾಂಡ್ ಸೆಂಟರ್ ಪರಿಶೀಲನೆ ನಡೆಸಿದ ಜಿನ್‌ಪಿಂಗ್ ಅವರು ಪೀಪಲ್ಸ್ ಲಿಬರೇಶನ್ ಆರ್ಮಿಗೆ ‘ಯುದ್ಧಕ್ಕೆ ಸಿದ್ಧರಾಗಿ ಮತ್ತು ಯುದ್ಧದಲ್ಲಿ ಹೋರಾಡುವಂತೆ’ ಆದೇಶ ನೀಡಿದ್ದಾರೆ. ಚೀನಾ ಪ್ರಸ್ತುತ ಭಾರತಕ್ಕೆ ದಕ್ಷಿಣ ಚೀನಾ ಸಮುದ್ರದಲ್ಲಿರುವ ದೇಶಗಳೊಂದಿಗೆ ಮುಖಾಮುಖಿಯಾಗಿದೆ. ಕಳೆದ … Continued

‘ನನ್ನ ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ’: ಬಿಆರ್‌ಎಸ್‌ ಪಕ್ಷದ ಮೇಲೆ ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ವಾಗ್ದಾಳಿ

ಹೈದರಾಬಾದ್‌: ತೆಲಂಗಾಣ ಗವರ್ನರ್ ತಮಿಳಿಸೈ ಸೌಂದರರಾಜನ್ ಅವರು ಬುಧವಾರ, ನವೆಂಬರ್ 9 ರಂದು ಆಡಳಿತಾರೂಢ ಬಿಆರ್‌ಎಸ್ ಪಕ್ಷದ ಮೇಲೆ ಹೊಸ ದಾಳಿಯನ್ನು ಪ್ರಾರಂಭಿಸಿದರು. ತಮ್ಮ ದೂರವಾಣಿ ಕರೆಗಳನ್ನು ತನಗೆ ತಿಳಿಯದೆ ಟ್ಯಾಪ್ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸೌಂದರರಾಜನ್, “ನನ್ನ ಫೋನ್ ಕರೆಗಳನ್ನು ಕದ್ದಾಲಿಕೆ ಮಾಡಲಾಗುತ್ತಿದೆ ಎಂದು ನಾನು ಭಾವಿಸುತ್ತೇನೆ. ರಾಜ್ಯದಲ್ಲಿ ವಿಶೇಷವಾಗಿ ರಾಜ್ಯಪಾಲರನ್ನು … Continued

ಬಾಬರಿ ಮಸೀದಿ ಧ್ವಂಸ : ಅಡ್ವಾಣಿ ಇತರರ ಖುಲಾಸೆ ಪ್ರಶ್ನಿಸಿದ್ದ ಮನವಿ ವಜಾಗೊಳಿಸಿದ ಅಲಾಹಾಬಾದ್ ಹೈಕೋರ್ಟ್

ಲಕ್ನೋ: ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾಣಿ ಸೇರಿದಂತೆ 32 ಆರೋಪಿಗಳನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ. ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಉಪ ಪ್ರಧಾನಿ ಎಲ್‌ ಕೆ ಅಡ್ವಾಣಿ, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್, ಬಿಜೆಪಿ … Continued

ಹಿಂದೂ ಶಬ್ದ ಹೇಳಿಕೆ ವಿವಾದ: ಸತೀಶ ಜಾರಕಿಹೊಳಿ ವಿರುದ್ಧ ಬೆಂಗಳೂರು ಕೋರ್ಟ್‌ನಲ್ಲಿ ಖಾಸಗಿ ದೂರು ದಾಖಲು

ಬೆಂಗಳೂರು: ಹಿಂದೂ ಎನ್ನುವುದು ಭಾರತೀಯ ಪದವಲ್ಲ. ಅದು ಪರ್ಷಿಯನ್‌ ನೆಲಕ್ಕೆ ಸೇರಿದ್ದು, ಅದೊಂದು ಅಶ್ಲೀಲ ಪದವಾಗಿದೆ” ಎಂದು ಕಾರ್ಯಕ್ರಮವೊಂದರಲ್ಲಿ ಹೇಳಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಿರುದ್ಧ ಬೆಂಗಳೂರಿನ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ಬುಧವಾರ ಖಾಸಗಿ ದೂರು ದಾಖಲಾಗಿದೆ. ವಕೀಲ ದಿಲೀಪಕುಮಾರ ದಾಖಲಿಸಿದ್ದ ಖಾಸಗಿ ಅರ್ಜಿಯನ್ನು ವಿಚಾರಣೆಗೆ ದಾಖಲಿಸಿಕೊಳ್ಳಲು ಬೆಂಗಳೂರಿನ ಎಂಟನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ … Continued

ನವೆಂಬರ್ 11ರ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳ ಕಡ್ಡಾಯ ಹಾಜರಾತಿ ಆದೇಶ ಹಿಂಪಡೆದ ಸರ್ಕಾರ

ಬೆಂಗಳೂರು: ನವೆಂಬರ್ 11ರಂದು ನಡೆಯಲಿರುವ ಪ್ರಧಾನ ಮಂತ್ರಿಗಳ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕಳುಹಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರಿಗೆ ನಿರ್ದೇಶಿಸುವ ಸುತ್ತೋಲೆಯನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಬೆಂಗಳೂರು ಗ್ರಾಮಾಂತರದ ಎಲ್ಲ ಪಿಯು ಕಾಲೇಜುಗಳ ಪ್ರಾಂಶುಪಾಲರ ಜತೆ ನಡೆಸಿದ ಸಭೆಯಲ್ಲಿ ಕೈಗೊಂಡ ನಿರ್ಧಾರದ ಪ್ರಕಾರ ಸಂಸ್ಥೆಗಳು ತಮ್ಮ ವಿದ್ಯಾರ್ಥಿಗಳನ್ನು … Continued

ಪಂಜಾಬ್ ನ್ಯಾಶನಲ್‌ ಬ್ಯಾಂಕ್‌ ಹಗರಣ: ನೀರವ್ ಮೋದಿ ಮೇಲ್ಮನವಿ ತಿರಸ್ಕರಿಸಿದ ಲಂಡನ್‌ ಹೈಕೋರ್ಟ್; ಭಾರತಕ್ಕೆ ಹಸ್ತಾಂತರಿಸಲು ಆದೇಶ

ಲಂಡನ್‌: ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ಸಾಲ ಹಗರಣ ಪ್ರಕರಣದಲ್ಲಿ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪಗಳನ್ನು ಎದುರಿಸಲು ವಜ್ರದ ವ್ಯಾಪಾರಿ ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಲಂಡನ್‌ನ ಹೈಕೋರ್ಟ್ ಬುಧವಾರ ಆದೇಶಿಸಿದೆ. .ಈ ವರ್ಷದ ಆರಂಭದಲ್ಲಿ ಮೇಲ್ಮನವಿ ವಿಚಾರಣೆಯ ಅಧ್ಯಕ್ಷತೆ ವಹಿಸಿದ್ದ ನ್ಯಾಯಮೂರ್ತಿ ಜೆರೆಮಿ ಸ್ಟುವರ್ಟ್-ಸ್ಮಿತ್ ಮತ್ತು ನ್ಯಾಯಮೂರ್ತಿ ರಾಬರ್ಟ್ ಜೇ ಅವರು … Continued

ಬಿಜೆಪಿಗೆ ಮಾಜಿ ಶಾಸಕ ಯು.ಬಿ.ಬಣಕಾರ ಗುಡ್‌ ಬೈ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಿರುವಾಗ ಮಾಜಿ ಶಾಸಕ ಯು.ಬಿ.ಬಣಕಾರ (U B Banakar) ಬಿಜೆಪಿಗೆ ಗುಡ್​ ಬೈ ಹೇಳಿದ್ದಾರೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವ ಹಾಗೂ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನ ಹಾಗೂ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಎರಡು ಬಾರಿ ಹಿರೇಕೆರೂರು ಕ್ಷೇತ್ರದ ಶಾಸಕರಾಗಿದ್ದ ಯು.ಬಿ.ಬಣಕಾರ್​​ 1994 … Continued

11,000 ಉದ್ಯೋಗಿಗಳನ್ನು ವಜಾಗೊಳಿಸಿದ ಫೇಸ್‌ಬುಕ್ ಪೋಷಕ ಕಂಪನಿ ಮೆಟಾ

ವಾಷಿಂಗ್ಟನ್: ಫೇಸ್‌ಬುಕ್‌ನ ಮೂಲ ಕಂಪನಿ ಮೆಟಾ ಪ್ಲಾಟ್‌ಫಾರ್ಮ್ಸ್ ಜಾಗತಿಕವಾಗಿ 11,000 ಉದ್ಯೋಗಿಗಳನ್ನು ವಜಾಗೊಳಿಸಿದೆ. ಇದು ಅದರ ಒಟ್ಟು ಸುಮಾರು 13%ರಷ್ಟಾಗಿದೆ. .ಕಂಪನಿಯು ಹೊಸ ನೇಮಕಾತಿಗೆ ವಿಧಿಸಿರುವ ಫ್ರೀಜ್ ಅನ್ನು ವಿಸ್ತರಿಸುವ ಸಾಧ್ಯತೆಯಿದೆ. ಫೇಸ್‌ಬುಕ್ ಮೂಲ ಕಂಪನಿಯು ಸೆಪ್ಟೆಂಬರ್ ಅಂತ್ಯದ ವೇಳೆಗೆ 87,000 ಉದ್ಯೋಗಿಗಳನ್ನು ವರದಿ ಮಾಡಿತ್ತು. ಈ ನಿರ್ಧಾರಗಳಿಗೆ ಮತ್ತು ನಾವು ಇಲ್ಲಿಗೆ ಹೇಗೆ ಬಂದೆವು … Continued

ಹಿಂದೂ ಪದದ ಕುರಿತು ವಿವಾದಿತ ಹೇಳಿಕೆ ಹಿಂಪಡೆದ ಸತೀಶ ಜಾರಕಿಹೊಳಿ

ಬೆಳಗಾವಿ: ಹಿಂದೂ ಶಬ್ದದ  ಬಗ್ಗೆ ನೀಡಿದ್ದ ಹೇಳಿಕೆಯ ವಿವಾದ ಜೋರಾಗುತ್ತಿದ್ದಂತೆಯೇ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ (Satish Jarkiholi) ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ತಮ್ಮ ಹೇಳಿಕೆಯನ್ನು ಹಿಂಪಡೆಯುವುದಾಗಿ ಹೇಳಿದ್ದಾರೆ ಹಾಗೂ ನಿಪ್ಪಾಣಿ ಕಾರ್ಯಕ್ರಮದಲ್ಲಿ ಸತೀಶ ಜಾರಕಿಹೊಳಿ ಅವರು ಹಿಂದೂ ಶಬ್ದದ ಬಗ್ಗೆ ಆಡಿದ್ದ ಮಾತು ವಿವಾದಕ್ಕೀಡಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ … Continued

ಗಮನಿಸಿ… ಶಿಕ್ಷಕರ ಅರ್ಹತಾ ಪರೀಕ್ಷೆಯ ಕೀ ಉತ್ತರ ಪ್ರಕಟ

ಬೆಂಗಳೂರು: ನವೆಂಬರ್‌ 6ರಂದು ನಡೆದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ -2022ರ (TET ) ಕೀ ಉತ್ತರವನ್ನು ( ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ದಿನಾಂಕ 06-11-2022ರಂದು ನಡೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2022ರ ಪತ್ರಿಕೆ-1 ಮತ್ತು ಪತ್ರಿಕೆ-2ರ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ ಎಂದು ತಿಳಿಸಲಾಗಿದೆ. ಟಿಇಟಿ … Continued