ಮಂಗಳೂರು ಮಳಲಿ ಮಸೀದಿ ವಿವಾದ: ವಿಎಚ್​ಪಿ ಅರ್ಜಿ ವಿಚಾರಣೆಗೆ ಅಂಗೀಕಾರ, ಮಸೀದಿ ಆಡಳಿತ ಮಂಡಳಿ ಅರ್ಜಿ ವಜಾ

posted in: ರಾಜ್ಯ | 0

ಮಂಗಳೂರು: ಮಳಲಿ ಮಸೀದಿ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದು ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು 3ನೇ ಹೆಚ್ಚುವರಿ ಸಿವಿಲ್ ಕೋರ್ಟ್ ವಿಚಾರಣೆಗೆ ಅಂಗೀಕರಿಸಿದೆ.ಮಲಾಲಿ ಮಸೀದಿಯನ್ನು ಹಿಂದೂ ದೇವಾಲಯದ ಮೇಲೆ ನಿರ್ಮಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಅದರ ಸಮೀಕ್ಷೆಗೆ ಆಯುಕ್ತರನ್ನು ನೇಮಿಸುವಂತೆ ಕೋರಿ ಸಲ್ಲಿಸಲಾದ ಮೊಕದ್ದಮೆಯನ್ನು ನ್ಯಾಯಾಲಯವು ಬುಧವಾರ ನಿರ್ವಹಿಸಬಹುದಾಗಿದೆ ಎಂದು ತೀರ್ಪು ನೀಡಿದೆ.
ಮಸೀದಿ ಕಾಮಗಾರಿಗೆ ನೀಡಿರುವ ತಡೆಯಾಜ್ಞೆ ತೆರವುಗೊಳಿಸಬೇಕು ಮತ್ತು ವಿಎಚ್​ಪಿ ಅರ್ಜಿ ವಜಾ ಮಾಡಬೇಕು ಎಂದು ಕೋರಿದ್ದ ಮಸೀದಿ ಆಡಳಿತ ಮಂಡಳಿಯ ಅರ್ಜಿಯನ್ನು ಕೋರ್ಟ್‌ ವಜಾ ಮಾಡಿದೆ. ಕೋರ್ಟ್ ಕಮಿಷನರ್ ನೇಮಿಸಿ, ಮಸೀದಿ ಸರ್ವೇ ನಡೆಸಬೇಕು ಎಂದು ಕೋರಿ ವಿಎಚ್​ಪಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ವಿಎಚ್​ಪಿ ಅರ್ಜಿಯನ್ನು ಅಂಗೀಕರಿಸಿರುವ ನ್ಯಾಯಾಲಯವು ವಿಚಾರಣೆಯನ್ನು ಜನವರಿ 8, 2023ಕ್ಕೆ ಮುಂದೂಡಿದೆ.
2022ರ ಏಪ್ರಿಲ್ 21 ರಂದು ಮಳಲಿಯ ಅಸಯ್ಯಿದ್ ಅಬ್ದುಲ್ಲಾಹಿಲ್ ಮದನಿ ಮಸೀದಿಯ ನವೀಕರಣಕ್ಕಾಗಿ ಒಂದು ಭಾಗವನ್ನು ಕೆಡವಿದಾಗ ಹಿಂದೂ ದೇವಸ್ಥಾನದ ರಚನೆಯ ಮಾದರಿ ಪತ್ತೆಯಾಗಿತ್ತು. ಹೀಗಾಗಿ ವಿಶ್ವ ಹಿಂದೂ ಪರಿಷತ್ (VHP) ಕಾಮಗಾರಿ ನಿಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ ನಂತರ ಕಾಮಗಾರಿ ಸ್ಥಗಿತಗೊಂಡಿತ್ತು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಇಂದಿನ ಪ್ರಮುಖ ಸುದ್ದಿ :-   ಪ್ರವೇಗ್ ಡಿಫೈ ಎಲೆಕ್ಟ್ರಿಕ್ ಎಸ್‌ಯುವಿ ಕಾರು ಬಿಡುಗಡೆ : ಪ್ರತಿ ಚಾರ್ಜ್‌ಗೆ 500 ಕಿಮೀ ಮೈಲೇಜ್

ಮಸೀದಿ ಇರುವ ಜಾಗದಲ್ಲಿ ಸರ್ವೇ ನಡೆಸಬೇಕೆಂದು ವಿಹೆಚ್‌ಪಿ ಮಂಗಳೂರಿನ ಮೂರನೇ ಹೆಚ್ಚುವರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು. ಆದರೆ ಸರ್ವೇ ನಡೆಸುವ ಅರ್ಜಿಗೆ ತಡೆ ನೀಡಬೇಕೆಂದು ಮಸೀದಿ ಆಡಳಿತ ಮಂಡಳಿಯೂ ಅರ್ಜಿ ಸಲ್ಲಿಸಿತ್ತು. ಮಸೀದಿ ಇರುವ ಜಾಗ ವಕ್ಫ್ ಬೋರ್ಡ್‌ನ ಜಾಗವಾಗಿದ್ದು ಇದನ್ನು ಸಿವಿಲ್ ನ್ಯಾಯಾಲಯ ವಿಚಾರಣೆ ಮಾಡಲು ಅವಕಾಶ ಇಲ್ಲ, ವಕ್ಫ್ ಟ್ರಿಬುನಲ್ ಕೋರ್ಟ್ ಮಾಡಬೇಕೆಂದು ಮಸೀದಿ ಆಡಳಿತ ಮಂಡಳಿ ಅರ್ಜಿ ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ ಮಂಗಳೂರಿನ ಮೂರನೇ ಹೆಚ್ಚುವರಿ ನ್ಯಾಯಾಲಯ ಮಸೀದಿ ಆಡಳಿತ ಮಂಡಳಿಯ ಅರ್ಜಿಯನ್ನು ವಜಾಗೊಳಿಸಿದ್ದು, ವಿಹೆಚ್‌ಪಿಯ ಅರ್ಜಿ ವಿಚಾರಣೆಗೆ ಅಸ್ತು ಎಂದಿದೆ. ಆದ್ದರಿಂದ ಅದು ಜನವರಿ 2023 ರಿಂದ ಮೊಕದ್ದಮೆ ವಿಚಾರಣೆ ನಡೆಸಲಿದೆ.
ಮಸೀದಿ ವಿವಾದದ ಬಗ್ಗೆ ಕಳೆದ ಅಕ್ಟೋಬರ್‌ 17ರಂದು ನ್ಯಾಯಾಲಯವು ವಿಚಾರಣೆ ನಡೆಸಿತ್ತು. ಮಳಲಿ ಮಸೀದಿಯಲ್ಲಿ ದೇವಾಲಯ ಮಾದರಿ ರಚನೆ ಇದೆ. ವಿಚಾರಣೆಗಾಗಿ ಕೋರ್ಟ್​ ಕಮಿಷನರ್ ನೇಮಿಸಬೇಕು ಎಂದು ಹಿಂದುತ್ವ ಪರ ಸಂಘಟನೆಗಳು ಕೋರಿದ್ದವು. ಕಳೆದ ಬಾರಿಯ ವಿಚಾರಣೆಯ ವೇಳೆ ನ್ಯಾಯಾಲಯವು ‘ಸದ್ಯದ ಮಟ್ಟಿಗೆ ಮಳಲಿ ಮಸೀದಿ ಕಟ್ಟಡವನ್ನು ಯಥಾಸ್ಥಿತಿ ಕಾಯ್ದುಕೊಳ್ಳಬೇಕು’ ಎಂದು ಹೇಳಿತ್ತು. ಮಂಗಳೂರಿನ ಟಿಎ ಧನಂಜಯ ಮತ್ತು ಬಿಎ ಮನೋಜ್ ಕುಮಾರ್ ಅವರು ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ಮೂಲ ದಾವೆ ಹೂಡಿದ್ದರು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಕರ್ನಾಟಕ ಗಡಿ-ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ನ್ಯಾ.ಶಿವರಾಜ ಪಾಟೀಲ ನೇಮಕ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement