ಗಮನಿಸಿ… ಶಿಕ್ಷಕರ ಅರ್ಹತಾ ಪರೀಕ್ಷೆಯ ಕೀ ಉತ್ತರ ಪ್ರಕಟ

posted in: ರಾಜ್ಯ | 0

ಬೆಂಗಳೂರು: ನವೆಂಬರ್‌ 6ರಂದು ನಡೆದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ -2022ರ (TET ) ಕೀ ಉತ್ತರವನ್ನು ( ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ದಿನಾಂಕ 06-11-2022ರಂದು ನಡೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2022ರ ಪತ್ರಿಕೆ-1 ಮತ್ತು ಪತ್ರಿಕೆ-2ರ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ ಎಂದು ತಿಳಿಸಲಾಗಿದೆ.
ಟಿಇಟಿ ಪರೀಕ್ಷೆಯ ಸರಿ ಉತ್ತರಗಳನ್ನು ಇಲಾಖೆಯ ವೆಬ್ ಸೈಟ್ http://www.schooleducation.kar.nic.in  ಜಾಲತಾಣದಲ್ಲಿ ವೀಕ್ಷಿಸಬಹುದಾಗಿದೆ. ಈ ಸಂಬಂಧದ ಆಕ್ಷೇಪಣೆಗಳನ್ನು ಅಭ್ಯರ್ಥಿಗಳು ದಿನಾಂಕ 10-11-2022 ರಿಂದ 17-11-2022ರ ಒಳಗಾಗಿ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.
ಕೀ ಉತ್ತರಕ್ಕೆ ಆಕ್ಷೇಪಣೆಗಳನ್ನು ಆನ್‌ಲೈನ್‌ನಲ್ಲಿ ಮಾತ್ರ ಸಲ್ಲಿಸಲು ಸೂಚಿಸಲಾಗಿದೆ.ಆನ್‌ಲೈನ್‌ ಹೊರತುಪಡಿಸಿ ಬೇರೆ ಯಾವುದೇ ವಿಧಾನದಿಂದ ಕಳುಹಿಸಿದ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ತಿಳಿಸಲಾಗಿದೆ. ಅಲ್ಲದೆ, ಆಕ್ಷೇಪಣೆಗಳಿಗೆ ಅಧಿಕೃತ ದಾಖಲೆಗಳನ್ನು ಸಲ್ಲಿಸಲು ತಿಳಿಸಲಾಗಿದೆ. ಅಧಿಕೃತ ಆಧಾರಗಳಿಲ್ಲದ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಹೇಳಲಾಗಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಬನ್ನಿ ಭಾವಗಳೇ... ಕನ್ನಡ ನುಡಿ ಹಬ್ಬಕೆ ಕರೆಯುತಿದೆ ಕೈ ಬೀಸಿ

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement