ಹಿಂದೂ ಪದದ ಕುರಿತು ವಿವಾದಿತ ಹೇಳಿಕೆ ಹಿಂಪಡೆದ ಸತೀಶ ಜಾರಕಿಹೊಳಿ

posted in: ರಾಜ್ಯ | 0

ಬೆಳಗಾವಿ: ಹಿಂದೂ ಶಬ್ದದ  ಬಗ್ಗೆ ನೀಡಿದ್ದ ಹೇಳಿಕೆಯ ವಿವಾದ ಜೋರಾಗುತ್ತಿದ್ದಂತೆಯೇ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ (Satish Jarkiholi) ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ತಮ್ಮ ಹೇಳಿಕೆಯನ್ನು ಹಿಂಪಡೆಯುವುದಾಗಿ ಹೇಳಿದ್ದಾರೆ ಹಾಗೂ
ನಿಪ್ಪಾಣಿ ಕಾರ್ಯಕ್ರಮದಲ್ಲಿ ಸತೀಶ ಜಾರಕಿಹೊಳಿ ಅವರು ಹಿಂದೂ ಶಬ್ದದ ಬಗ್ಗೆ ಆಡಿದ್ದ ಮಾತು ವಿವಾದಕ್ಕೀಡಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಪತ್ರ ಬರೆದಿರುವ ಅವರು, ನಾನು ಮಾತನಾಡಿದ್ದ ಹಿಂದೂ ಶಬ್ದದದ ಬಳಕೆ ಕುರಿತು ನನ್ನ ತೇಜೋವಧೆ ಮಾಡಲಾಗುತ್ತಿದೆ. ಅಲ್ಲದೆ, ಅದನ್ನು ತಿರುಚಿ ಅಪಪ್ರಚಾರಗೊಳಿಸುತ್ತಿರುವುದರಿಂದ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗಬಾರದು ಎಂಬ ಸದುದ್ದೇಶದಿಂದ ಅಂದು ನಾನು ಹೇಳಿರುವ ಹಿಂದೂ ಶಬ್ದದ ಹೇಳಿಕೆ ಹಿಂದೆ ಪಡೆಯುತ್ತಿದ್ದೇನೆ. ಆ ಹೇಳಿಕೆಯಿಂದ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದಲ್ಲಿ ವಿಷಾದಿಸುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಅಲ್ಲದೆ, ತಮ್ಮ ಹೇಳಿಕೆ ಬಗ್ಗೆ ತನಿಖಾ ಸಮಿತಿ ರಚಿಸುವಂತೆ ಅವರು ಮನವಿ ಮಾಡಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ನಿಪ್ಪಾಣಿಯಲ್ಲಿ ನಡೆದ ಮಾನವ ಬಂಧುತ್ವ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಹಿಂದೂ ಶಬ್ದ ಪರ್ಷಿಯನ್ ಭಾಷೆಯಿಂದ ಬಂದಿದೆ. ಇದು ಭಾರತ ದೇಶಕ್ಕೆ ಹೇಗೆ ಬಂತು? ಹಲವಾರು ಲೇಖನಗಳಲ್ಲಿ ಹಿಂದೂ ಎಂಬ ಪದದ ಅರ್ಥ ಕೆಟ್ಟದಾಗಿದೆ ಎಂದು ಬರೆದಿರುತ್ತಾರೆ ಎಂದು ಹೇಳಿರುತ್ತೇನೆ ಮತ್ತು ಇದು ಸಾರ್ವಜನಿಕವಾಗಿ ಚರ್ಚೆ ಆಗಬೇಕಾಗಿರುವದು ಬಹಳ ಅವಶ್ಯಕತೆ ಇದೆ ಎಂದು ಸಹ ಹೇಳಿದ್ದೇನೆ.
ಇದನ್ನು ನಾನು ವಿಕಿಪಿಡಿಯಾ, ಪುಸ್ತಕಗಳು, ಶಬ್ದಕೋಶಗಳು ಮತ್ತು ಇತಿಹಾಸಕಾರರ ಬರಹಗಳ ಉಲ್ಲೇಖದ ಮೇಲೆ ಈ ನನ್ನ ಭಾಷಣ ಆಧಾರಿತವಾಗಿರುತ್ತದೆ. ಕೆಲವು ಪಟ್ಟಬದ್ಧ ಹಿತಾಸಕ್ತಿಗಳು ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಹೊರಟಿರುತ್ತಾರೆ. ಜೊತೆಗೆ ನನಗೆ ತೇಜೋವಧೆ ಹಾಗೂ ಹಾನಿವುಂಟು ಮಾಡುವ ವ್ಯವಸ್ಥಿತ ಪಿತೂರಿ ನಡೆದಿರುತ್ತದೆ. ಮೇಲಿನ ಎಲ್ಲ ಅಂಶಗಳನ್ನು ಪರಿಶೀಲಿಸಲು ಮತ್ತು ನೈಜ ಸ್ಥಿತಿಯನ್ನು ವಿವರಿಸದೇ ಈ ಅವಾಂತರ ಸೃಷ್ಟಿಸಿದವರ ಮೇಲೆ ತನಿಖೆ ಮಾಡುವಂತೆ ವಿನಂತಿಸಿಕೊಳ್ಳುತ್ತೇನೆ. ಮತ್ತೊಮ್ಮೆ ತಮ್ಮಲ್ಲಿ ಕೇಳಿಕೊಳ್ಳುವದೇನೆಂದರೆ, ಈ ಕುರಿತು ತಕ್ಷಣ ತನಿಖಾ ಸಮಿತಿ ರಚಿಸಬೇಕು ಎಂದು ವಿನಂತಿಸಿಕೊಳ್ಳುತ್ತೇನೆ ಎಂದು ಬರೆದಿದ್ದಾರೆ.
ನಿಪ್ಪಾಣಿಯಲ್ಲಿ ನಡೆದ ಮಾನವ ಬಂಧುತ್ವ ವೇದಿಕೆಯ ಮನೆ ಮನೆಗೆ ಬುದ್ಧ, ಬಸವ, ಅಂಬೇಡ್ಕರ ಕಾರ್ಯಕ್ರಮದಲ್ಲಿ ನಾನು ಮಾತನಾಡಿದ ಆ ಒಂದು ಮಾತು ವಿವಾದಕ್ಕಿಡಾಗಿದೆ. ಅಲ್ಲದೇ ಅದನ್ನು ತಿರುಚಿ ಅಪಪ್ರಚಾರ ಗೊಳಿಸುತ್ತಿರುವುದರಿಂದ, ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗಬಾರದು ಎಂಬ ಸದುದ್ದೇಶದಿಂದ ಅಂದು ನಾನು ಹೇಳಿದ್ದ ಆ ಹೇಳಿಕೆಯನ್ನು ಹಿಂಪಡೆಯುತ್ತಿದ್ದೇನೆ. ಮತ್ತು ಆ ಹೇಳಿಕೆಯಿಂದ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದಲ್ಲಿ ವಿಷಾದಿಸುತ್ತೇನೆ ಎಂದು ತಿಳಿಸಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ದಿ ಹಿಂದೂ ಸಂಗೀತ ಸ್ಪರ್ಧೆ: ಬಾಲಪ್ರತಿಭೆ ವಿಭಾಗದಲ್ಲಿ ಕುಮಟಾದ ಅದಿತಿ ಶಾನಭಾಗ ಪ್ರಥಮ

ಏನಿದು ವಿವಾದ?:
ಭಾರತಕ್ಕೂ, ಪರ್ಷಿಯನ್‍ಗೂ ಏನ್ ಸಂಬಂಧ? ಹಿಂದೂ ಭಾರತೀಯ ಪದವೇ ಅಲ್ಲ, ಅದು ಪರ್ಷಿಯನ್ ಪದ. ಹಿಂದೂ ನಮ್ಮದು ಹೇಗೆ ಆಯಿತು ಅನ್ನೋದು ಚರ್ಚೆ ಆಗಬೇಕಿದೆ. ಹಿಂದೂ ಪದದ ಅರ್ಥ ಬಹಳ ಅಶ್ಲೀಲವಾಗಿದೆ. ಅದು ನಿಮಗೆ ತಿಳಿದರೆ ನಿಮಗೆ ನಾಚಿಕೆ ಆಗುತ್ತೆ. ಎಲ್ಲಿಂದಲೋ ಬಂದಿರೋ ಧರ್ಮವನ್ನು ತಂದು ಒತ್ತಾಯಪೂರ್ವಕವಾಗಿ ಹೇರಲಾಗುತ್ತಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು.
ಈ ಹೇಳಿಕೆಗೆ ವಿವಿಧ ಹಿಂದೂಪರ ಸಂಘಟನೆ ಹಾಗೂ ಬಿಜೆಪಿ ಸೇರಿದಂತೆ ಅನೇಕ ರಾಜಕೀಯ ಪಕ್ಷಗಳಿಂದಲೂ ಜಾರಕಿಹೊಳಿ ಟೀಕೆಗೆ ಗುರಿಯಾಗಿದ್ದರು. ಸತೀಶ ಜಾರಕಿಹೊಳಿ ಪಕ್ಷವಾದ ಕಾಂಗ್ರೆಸ್‌ ಸಹ ಈ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿತ್ತು. ಕಾಂಗ್ರೆಸ್‌ನ ಕರ್ನಾಟಕದ ಉಸ್ತುವಾರಿ ರಣಜೀತ್‌ ಸಿಂಗ್‌ ಸುರ್ಜೆವಾಲಾ ಅವರು ಈ ಹೇಳಿಕೆಯನ್ನು ಖಂಡಿಸಿದ್ದರು ಹಾಗೂ ಸತೀಶ ಜಾರಕಿಹೊಳಿ ಹೇಳಿದ್ದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಟ್ವೀಟ್‌ ಮಾಡಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು ಈ ಬಗ್ಗೆ ಸ್ಪಷ್ಟೀಕರಣ ಕೇಳುವುದಾಗಿ ಹೇಳಿದ್ದರು.

ಇಂದಿನ ಪ್ರಮುಖ ಸುದ್ದಿ :-   ಚುನಾವಣೆ ಸನಿಹದಲ್ಲೇ ಬಿಜೆಪಿಯ ವಿಧಾನ ಪರಿಷತ್‌ ಸ್ಥಾನಕ್ಕೆ ಬಾಬುರಾವ್ ಚಿಂಚನಸೂರು ರಾಜೀನಾಮೆ : ಮುಂದಿನ ನಡೆ..?

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement