ಬಿಜೆಪಿಗೆ ಮಾಜಿ ಶಾಸಕ ಯು.ಬಿ.ಬಣಕಾರ ಗುಡ್‌ ಬೈ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಿರುವಾಗ ಮಾಜಿ ಶಾಸಕ ಯು.ಬಿ.ಬಣಕಾರ (U B Banakar) ಬಿಜೆಪಿಗೆ ಗುಡ್​ ಬೈ ಹೇಳಿದ್ದಾರೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವ ಹಾಗೂ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನ ಹಾಗೂ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಎರಡು ಬಾರಿ ಹಿರೇಕೆರೂರು ಕ್ಷೇತ್ರದ ಶಾಸಕರಾಗಿದ್ದ ಯು.ಬಿ.ಬಣಕಾರ್​​ 1994 ಹಾಗೂ 2013ರ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 2018ರ ವಿಧಾನಸಭೆ ಚುನಾವಣೆಯಲ್ಲಿ ಬಿ.ಸಿ. ಪಾಟೀಲ ವಿರುದ್ಧ ಅಲ್ಪ ಮತಗಳ ಅಂತರದಿಂದ ಸೋಲುಕಂಡಿದ್ದರು. ಬಳಿಕ ಬದಲಾದ ರಾಜಕೀಯ ವಿದ್ಯಾಮಾನದಿಂದ ಬಿ.ಸಿ.ಪಾಟೀಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಯಲ್ಲಿ ಬಣಕಾರ ಅವರಿಗೆ ಬಿಜೆಪಿ ಟಿಕೆಟ್ ಸಿಗುವುದು ಸಾಧ್ಯತೆಗಳು ಕಡಿಮೆ. ಇದರಿಂದ ಬಣಕಾರ ತಮ್ಮ ಮುಂದಿನ ರಾಜಕೀಯ ನಡೆಗಾಗಿ ಬಿಜೆಪಿಗೆ ರಾಜೀನಾಮೆ ನೀಡಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement