ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ: ಸುಧಾಕರ ರಾವ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚನೆ

ದಾವಣಗೆರೆ: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಸುಧಾಕರ ರಾವ್ ಅಧ್ಯಕ್ಷತೆಯಲ್ಲಿ ಏಳನೇ ವೇತನ ಆಯೋಗ ರಚಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಬುಧವಾರ ಮಾತನಾಡಿದ ಅವರು ಈ ವಿಷಯ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ ಏಳನೇ ವೇತನ ಆಯೋಗ ರಚಿಸಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು.
ಆದರೆ 7ನೇ ವೇತನ ಆಯೋಗ ರಚನೆ ಆದೇಶ ಹೊರಬಿದ್ದಿಲ್ಲ. ಅದನ್ನು ಶೀಘ್ರವೇ ಪ್ರಕಟಿಸುಯವ ನಿರೀಕ್ಷೆಯಿದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರ ಈ ಹೇಳಿಕೆಯಿಂದ ವೇತನ ಪರಿಷ್ಕರಣೆಗೆ ಕಾಯುತ್ತಿರುವ ರಾಜ್ಯ ಸರ್ಕಾರಿ ನೌಕರರು, ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ನೌಕರ ವರ್ಗಕ್ಕೆ ಸಮಾಧಾನ ಹಾಗೂ ನಿವೃತ್ತ ನೌಕರರಿಗೆ ಸಮಾಧಾನ ತಂಂದಿದೆ.

ಕಳೆದ ಬಜೆಟ್‌ನಲ್ಲಿ ವೇತನ ಆಯೋಗ ರಚನೆಯನ್ನು ಸಿಎಂ ಬೊಮ್ಮಾಯಿ ಪ್ರಕಟಿಸಿದ್ದರು. ಕೆಲವು ದಿನಗಳ ಹಿಂದೆ ಅಕ್ಟೋಬರ್‌ನಲ್ಲಿ ಏಳನೇ ವೇತನ ಆಯೋಗ ರಚಿಸುವುದಾಗಿ ಹೇಳಿದ್ದರು. ಈಗ ಮುಂದಡಿ ಇಟ್ಟಿದ್ದಾರೆ. ಈ ಸಂಬಂಧ ರಾಜ್ಯ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಅಧ್ಯಕ್ಷ ಷಡಕ್ಷರಿ ನೇತೃತ್ವದಲ್ಲಿ ಭಾನುವಾರ ಮುಖ್ಯಮಂತ್ರಿಯವರನ್ನು ಭೇಟಿ ನಡೆದಿತ್ತು. ಈ ವೇಳೆ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೊಬ್ಬರ ಅಧ್ಯಕ್ಷತೆಯಲ್ಲಿ ಆಯೋಗ ರಚನೆಗೆ ನಿರ್ಧರಿಸಲಾಗಿತ್ತು. ಈಗ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅವರ ಅಧ್ಯಕ್ಷತೆಯಲ್ಲಿ ಏಳನೇ ವೇತನ ಆಯೋಗ ರಚಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದ್ದಾರೆ.
ನೂತನ ವೇತನ ಆಯೋಗ ರಚನೆ ಹಾಗೂ ವರದಿ ಪಡೆದು ವೇತನ ಪರಿಷ್ಕರಣೆ ಮಾಡುವುದರಿಂದ ಸುಮಾರು 5.20 ಲಕ್ಷ ಸರಕಾರಿ ನೌಕರರು, 3.5 ಲಕ್ಷ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ನೌಕರ ವರ್ಗ ಹಾಗೂ 4.5 ಲಕ್ಷ ನಿವೃತ್ತ ಸರಕಾರಿ ನೌಕರರಿಗೆ ಅನುಕೂಲವಾಗಲಿದೆ ಎಂದು ನಿರೀಕ್ಷಿಸಲಾಗಿದೆ. 2023ರ ಏಪ್ರಿಲ್‌ 1ರಿಂದ ಏಳನೇ ವೇತನದ ಆರ್ಥಿಕ ಅನುಕೂಲ ಸಿಗಬೇಕು ಎಂದು ನೌಕರರು ಆಗ್ರಹಿಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಕಾಲೇಜ್‌ ಕ್ಯಾಂಪಸ್‌ ನಲ್ಲೇ ಚಾಕುವಿನಿಂದ ಇರಿದು ಕಾರ್ಪೊರೇಟರ್ ಪುತ್ರಿಯ ಹತ್ಯೆ ; ಯುವಕನ ಬಂಧನ

 

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement