ಕಬ್ಬು ಕಟಾವು ದರ, ಎಫ್‌ಆರ್‌ಪಿ ಹೆಚ್ಚಳಕ್ಕೆ ಸಮಿತಿ ರಚನೆ

ಬೆಂಗಳೂರು: ಕಬ್ಬು ಬೆಳೆಗಾರರ ದರದ ಹೆಚ್ಚಳ ಬೇಡಿಕೆ ಬಗ್ಗೆ ಗುರುವಾರ ವಿಕಾಸ ಸೌಧದಲ್ಲಿ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸಭೆ ನಡೆಸಿ, ಕಬ್ಬು ಕಟಾವು ದರ, ಎಫ್‌ಆರ್‌ಪಿ ಹೆಚ್ಚಳ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.
ಸಕ್ಕರೆ ನಿಯಂತ್ರಣ ಮಂಡಳಿ, ರೈತ ಹೋರಾಟಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರನ್ನು (ಸರ್ಕಾರಿ ಹಾಗೂ ಖಾಸಗಿ) ಒಟ್ಟುಗೂಡಿಸಿ ಗುರುವಾರ ಸಭೆ ನಡೆಸಲಾಗಿದೆ.
ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಪ್ರಕಾರ ಸಮಿತಿ ರಚಿಸಲಾಗಿದ್ದು ಈ ಸಮಿತಿಯು ಕಬ್ಬು ಕಟಾವು ದರ, ಎಫ್‌ಆರ್‌ಪಿ ಹೆಚ್ಚಳ ಇವೇ ಮೊದಲಾದವುಗಳ ಕುರಿತು ನಿರ್ಣಯ ಕೈಗೊಳ್ಳಲಿದೆ. ಸಕ್ಕರೆ ಹಾಗೂ ಸಕ್ಕರೆ ಸಹ ಉತ್ಪನ್ನಗಳ ದರವನ್ನು ಹೆಚ್ಚಿಸಿ, ರೈತರು ಲಾಭವನ್ನು ಹಂಚಿಕೊಳ್ಳಬೇಕು ಎಂಬ ಸಂಬಂಧ ಸಮಿತಿಯು ವೈಜ್ಞಾನಿಕ ಅಧ್ಯಯನ ನಡೆಸಿ ಇನ್ನು ಒಂದು ವಾರದೊಳಗೆ ವರದಿ ಸಲ್ಲಿಸಲಿದೆ. ಆ ವರದಿಯನ್ನು ಮುಖ್ಯಮಂತ್ರಿಗೆ ಸಲ್ಲಿಸಿ, ಕೂಡಲೇ ಒಂದು ತೀರ್ಮಾನ ಘೋಷಣೆ ಮಾಡಲು ಈ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಸಚಿವ ಮುನೇನಕೊಪ್ಪ ಮಾತನಾಡಿ, ಕಬ್ಬು ಬೆಳೆಗಾರರಿಗೆ ಪೂರ್ತಿ ಹಣ ಪಾವತಿ ಮಾಡುತ್ತಿರುವ ರಾಜ್ಯ ಕರ್ನಾಟಕ. ರೈತರು ಪಾವತಿ ಸಂಬಂಧವಾಗಿ ರಸ್ತೆಗಿಳಿಯದಂತೆ ಸತತ ಎರಡು ವರ್ಷಗಳಿಂದಲೂ ಸರ್ಕಾರ ಕ್ರಮ ವಹಿಸಿದೆ. ಈಗ ರೈತರು ಕೇಳುತ್ತಿರುವಂತೆ ಎಫ್‌ಆರ್‌ಪಿ ದರಕ್ಕಿಂತಲೂ ಹೆಚ್ಚು ಮೊತ್ತವನ್ನು ಕೊಡಿಸಲು ಸರ್ಕಾರ ಶ್ರಮಿಸುತ್ತಿದೆ. ಕಾರ್ಖಾನೆ ಮಾಲೀಕರಿಗೂ ತೊಂದರೆಯಾಗದ ರೀತಿಯಲ್ಲಿ ರೈತರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ನಿರ್ಣಯ ಕೈಗೊಳ್ಳಲಾಗುವುದು. ರೈತರು ಸಹಕರಿಸಬೇಕು ಎಂದು ಕೋರಿದರು.
ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನೀಡುವಂತೆ ರಾಜ್ಯದ ವಿವಿಧೆಡೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement