ಮುರುಘಾ ಮಠದಲ್ಲಿ ಫೋಟೋ ಕಳವು ಪ್ರಕರಣ: ಮಾಜಿ ಶಾಸಕ ಬಸವರಾಜನ್ ಪೊಲೀಸ್‌ ವಶಕ್ಕೆ

posted in: ರಾಜ್ಯ | 0

ಚಿತ್ರದುರ್ಗ: ಮುರುಘಾ ಮಠದಲ್ಲಿ ಫೋಟೋಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಠದ ಮಾಜಿ ಆಡಳಿತಾಧಿಕಾರಿ, ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದಸರಾ ಉತ್ಸವದ ಅಂಗವಾಗಿ ನಡೆದ ಪೀಠಾರೋಹಣದ ಹಿಂದಿನ ದಿನ ಅಕ್ಟೋಬರ್‌ 5ರ ಮಧ್ಯರಾತ್ರಿ ವೇಳೆ ರಾಜಾಂಗಣದಲ್ಲಿ ಗೋಡೆಗೆ ಹಾಕಿದ್ದ 47 ಫೋಟೋಗಳು ಕಳುವಾಗಿತ್ತು. ಧಾರ್ಮಿಕ ಮುಖಂಡರು, ರಾಷ್ಟ್ರಪತಿ, ಪ್ರಧಾನಿ, ಹಾಗೂ ಮುಖ್ಯಮಂತ್ರಿಗಳ ಜೊತೆಗಿನ ಮುರುಘಾಶ್ರೀಗಳಿದ್ದ ಫೋಟೋಗಳನ್ನು ಕಳುವು ಮಾಡಲಾಗಿತ್ತು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ನಂತರ ತನಿಖೆ ಆರಂಭಿಸಿದ ಪೊಲೀಸರು ಹೊಸಹಳ್ಳಿ ಗ್ರಾಮ ಪಂಚಾಯತ ಸದಸ್ಯ ಮೋಹನ ಮೂರ್ತಿ ಅಲಿಯಾಸ್ ಸ್ವಾಮಿ, ಎಸ್‍ಜೆಎಮ್ ಪಾಲಿಟೆಕ್ನಿಕ್ ಕಾಲೇಜು ಉಪನ್ಯಾಸಕ ಶಿವಾನಂದ ಸ್ವಾಮಿಯನ್ನು ಫೋಟೋ ಕಳವು ಮಾಡಿದ ಆರೋಪದಡಿ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಬಸವರಾಜನ್ ಫೋಟೋವನ್ನು ಕಳವು ಮಾಡುವಂತೆ ಪ್ರಚೋದನೆ ನೀಡಿದ್ದರು ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬಸವರಾಜನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮತ್ತೋರ್ವ ಆರೋಪಿ ಶ್ರೀನಿವಾಸ ಎಂಬವರನ್ನು ಕೂಡ ಪೊಲೀಸರ ವಶಕ್ಕೆ ಪಡೆದಿದ್ದಾರೆ, ಬಸವರಾಜನ್ ಪತ್ನಿ ಸೌಭಾಗ್ಯ ಅವರಿಗೆ ಪೊಲೀಸರ ಶೋಧ ಆರಂಭಿಸಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಕಿತವಾಡ್ ಫಾಲ್ಸ್: ಸೆಲ್ಫಿ ತೆಗೆಯುವಾಗ ಜಾರಿ ಬಿದ್ದು ಬೆಳಗಾವಿ ನಾಲ್ವರು ಯುವತಿಯರು ನೀರುಪಾಲು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement