ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ಇನ್ಮುಂದೆ ಇವೆಲ್ಲವೂ ನಿಷೇಧ

ಬೆಂಗಳೂರು: ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ಆಡಳಿತ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ಈ ಹಿಂದಿನಿಂದ ನಡೆಸಿಕೊಂಡು ಬರುತ್ತಿರುವಂತ ರೂಢಿ ಸಂಪ್ರದಾಯಗಳನ್ನು ಮುಂದುವರೆಸಿಕೊಂಡು ಹೋಗಬೇಕು. ಅದರ ಹೊರತಾಗಿ ಜಯಂತಿಗಳನ್ನು ಆಚರಿಸುವಂತಿಲ್ಲ, ಭಾವಚಿತ್ರಗಳನ್ನು ಅಳವಡಿಸುವಂತಿಲ್ಲ ಎಂದು ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ ಹೊರಡಿಸಿದೆ.
ಧಾರ್ಮಿಕ ದತ್ತಿ ಇಲಾಖೆ ( Department of Religious Endowments) ಆಯುಕ್ತರು ಹೊರಡಿಸಿದ ಸುತ್ತೋಲೆಯಲ್ಲಿ, ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ಆಡಳಿತ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದು ಬಂದಿರುವ ಪದ್ಧತಿಗಳನ್ನ ಬಿಟ್ಟು, ಅದಕ್ಕೆ ವಿರುದ್ಧವಾದ ಧಾರ್ಮಿಕ ಆಚರಣೆಗಳನ್ನು ನಡೆಸಲಾಗುತ್ತಿದೆ. ನಾಮಫಲಕ, ಭಾವಚಿತ್ರ ಇತ್ಯಾದಿಗಳನ್ನು ಅಳವಡಿಸುತ್ತಿರುವು ಬಗ್ಗೆ ಆಕ್ಷೇಪ, ದೂರುಗಳು ಬಂದಿವೆ ಎಂದು ಹೇಳಿದ್ದಾರೆ.

02-11-2022ರಂದು ನಡೆದ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ಈ ಎಲ್ಲ ಸಂಗತಿಗಳ ಬಗ್ಗೆ ಚರ್ಚಿಸಲಾಗಿದ್ದು, ನಡೆದುಕೊಂಡು ಬಂದಿರುವ ಪದ್ಧತಿ, ಸಂಪ್ರದಾಯಗಳಿಗೆ ವಿರುದ್ಧವಾಗಿ ಧಾರ್ಮಿಕ ಆಚರಣೆ ನಡೆಸುವುದು, ಮುದ್ರಾಧಾರಣೆ ಮಾಡುತ್ತಿರುವುದು, ಜಯಂತಿಗಳನ್ನು ಆಚರಿಸುತ್ತಿರುವದು ಹಾಗೂ ಭಾವಚಿತ್ರಗಳನ್ನು ಅಳವಡಿಸುತ್ತಿರುವದ ಬಗ್ಗೆ ಆಕ್ಷೇಪ ಕೇಳಿ ಬಂದಿದೆ. ಹೀಗಾಗಿ ಆಯಾ ದೇವಾಲಯಗಳಲ್ಲಿ ಚಾಲ್ತಿಯಲ್ಲಿರುವ ಧಾರ್ಮಿಕ ಪದ್ಧತಿ, ಸಂಪ್ರದಾಯಗಳಿಗೆ ವಿರುದ್ಧವಾಗಿ ಧಾರ್ಮಿಕ ಪದ್ಧತಿ, ಸಂಪ್ರದಾಯಗಳನ್ನು ಅನುಸರಿಸುವುದು, ಭಾವಚಿತ್ರ, ವಿಗ್ರಹಗಳನ್ನು ಅಳವಡಿಸುವುದು, ಜಯಂತಿಗಳನ್ನು ಆಚರಿಸುವುದನ್ನು ನಡೆಸದಂತೆ ಸೂಚನೆ ನೀಡಲಾಗಿದೆ ಎಂದು ಸುತ್ತೋಲೆಯಲ್ಲಿ ಹೇಳಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ವಂಚನೆ ಪ್ರಕರಣ: ಆರೋಪಿ ಚೈತ್ರಾ ಹೆಸರಿನೊಂದಿಗೆ ʼಕುಂದಾಪುರʼ ಬಳಸದಂತೆ ಕೋರ್ಟ್‌ ನಿರ್ಬಂಧ

ಅಲ್ಲದೆ, ಆಯಾ ದೇವಾಲಯಗಳಲ್ಲಿ ಆಚರಣೆಯಲ್ಲಿರುವ ಆಗಮ, ಶಾಸ್ತ್ರ, ಪದ್ಧತಿ, ಸಂಪ್ರದಾಯಗಳಿಗೆ ವಿರುದ್ಧವಾಗಿ ಧಾರ್ಮಿಕ ಆಚರಣೆ, ಮುದ್ರಾಧಾರಣೆ, ಜಯಂತಿಗಳನ್ನು ಆಚರಿಸುವುದು, ಭಾವಚಿತ್ರಗಳನ್ನು ಅಳವಡಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಈ ನಿಯಮ ತಪ್ಪಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4.3 / 5. ಒಟ್ಟು ವೋಟುಗಳು 3

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement