ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಸೇರಿ ಎಲ್ಲ ಜಯಂತಿ, ಧಾರ್ಮಿಕ ಕಾರ್ಯಕ್ರಮಗಳಿಗೆ ಷರತ್ತು ವಿಧಿಸಿ ಅನುಮತಿಗೆ ಪಾಲಿಕೆ ನಿರ್ಧಾರ

posted in: ರಾಜ್ಯ | 0

ಹುಬ್ಬಳ್ಳಿ: ಇಲ್ಲಿನ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಸೇರಿದಂತೆ ಅರ್ಜಿ ಸಲ್ಲಿಸುವ ಎಲ್ಲಾ ಮಹನೀಯರ ಜಯಂತಿ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಷರತ್ತು ವಿಧಿಸಿ ಅನುಮತಿ ನೀಡಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ನಿರ್ಧರಿಸಿದೆ.
ಪಾಲಿಕೆ ಮಹಾಪೌರರ ಕಚೇರಿಯಲ್ಲಿ ನಡೆದ ಸರ್ವ ಪಕ್ಷಗಳ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮಹಾಪೌರ ಈರೇಶ ಅಂಚಟಗೇರಿ ಅವರು, ಟಿಪ್ಪು ಸುಲ್ತಾನ್ ಜಯಂತಿ ಸೇರಿದಂತೆ ಮುಂದಿನ ದಿನಗಳಲ್ಲಿ ಅರ್ಜಿ ಸಲ್ಲಿಸುವ ಎಲ್ಲಾ ಜಯಂತಿ ಆಚರಣೆಗೆ ಷರತ್ತು ಬದ್ಧ ಅನುಮತಿ ನೀಡಲು ನಿರ್ಧರಿಸಲಾಗಿದೆ. ಎಂದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಇದು ಸಾರ್ವಜನಿಕ ಆಸ್ತಿಯಾಗಿದ್ದು, ಈಗಾಗಲೇ ಗಣೇಶ ಮೂರ್ತಿ ಪ್ರತಿಷ್ಠಾನಪನೆಗೆ ಅವಕಾಶ ನೀಡಲಾಗಿತ್ತು. ಎಲ್ಲಾ ಸಮಾಜ ಹಾಗೂ ಧರ್ಮಗಳಿಗೆ ಮುಕ್ತ ಅವಕಾಶ ನೀಡಬೇಕು ಎನ್ನುವ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ. ನವೆಂಬರ್‌ 10 ರಂದು ನಡೆಯುವ ಟಿಪ್ಪು ಜಯಂತಿಗೂ ಅವಕಾಶ ನೀಡಲಾಗುವುದು. ಕನಕ ಜಯಂತಿ ಹಾಗೂ ಒನಕೆ ಓಬವ್ವ ಜಯಂತಿ ಆಚರಿಸಲು ಅರ್ಜಿ ಸಲ್ಲಿಸಲಾಗಿದೆ. ಅವುಗಳ ಆಚರಣೆಗೂ ಅವಕಾಶ ನೀಡಲಾಗುವುದು. ಇದು ಪಾಲಿಕೆ ಆಸ್ತಿಯಾಗಿದ್ದು, ಎಲ್ಲ ಆಚರಣೆಗಳಿಗೂ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದರು.
ಇದಕ್ಕೆ ವಿಪಕ್ಷವಾದ ಕಾಂಗ್ರೆಸ್ ಸದಸ್ಯ ದೊರಾಜ ಮಣಿಕುಂಟ್ಲಾ ಹಾಗೂ ಎಐಎಂಐಎಂ ಪಕ್ಷದ ಜಿಲ್ಲಾಧ್ಯಕ್ಷ ನಜೀರ್ ಅಹ್ಮದ್ ಸುದ್ದಿಗೋಷ್ಠಿ ವೇಳೆಯೇ ವಿರೋಧ ವ್ಯಕ್ತಪಡಿಸಿದರು. ಈದ್ಗಾ ಮೈದಾನ ಪವಿತ್ರ ಸ್ಥಳವಾಗಿದ್ದು, ಜಯಂತಿ ಸೇರಿದಂತೆ ಇತರೆ ಯಾವುದೇ ಕಾರ್ಯಕ್ರಮಗಳಿಗೆ ಅವಕಾಶ ನೀಡುವುದು ಸರಿಯಲ್ಲ. ಈ ಮೈದಾನದ ವಿವಾದಿಂದ ಮಹಾನಗರದ ಜನತೆ ಸಾಕಷ್ಟು ಸಂಕಷ್ಟ ಅನುಭವಿಸಿದೆ. ಮುಂದೆ ಇಂತಹವುಗಳಿಗೆ ಅವಕಾಶ ನೀಡುವುದು ಬೇಡ. ಹೀಗಾಗಿ ಯಾವುದೇ ಆಚರಣೆಗೂ ಅವಕಾಶ ನೀಡಬಾರದು ಎಂದು ಮಹಾಪೌರರ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದರು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಕಿತವಾಡ್ ಫಾಲ್ಸ್: ಸೆಲ್ಫಿ ತೆಗೆಯುವಾಗ ಜಾರಿ ಬಿದ್ದು ಬೆಳಗಾವಿ ನಾಲ್ವರು ಯುವತಿಯರು ನೀರುಪಾಲು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement