ಬೆಂಗಳೂರಿನಲ್ಲಿ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಬೆಂಗಳೂರು: ಸ್ವದೇಶಿ ನಿರ್ಮಿತ ಅತಿ ವೇಗದ ರೈಲು ಮೈಸೂರು- ಬೆಂಗಳೂರು- ಚೆನ್ನೈ ನಡುವೆ ವಂದೇ ಭಾರತ್ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಚಾಲನೆ ನೀಡಿದರು. ನಗರದ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಪ್ರಧಾನಿ ಮೋದಿ ದಕ್ಷಿಣ ಭಾರತದ ಮೊದಲ ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಸ್ವದೇಶಿ ನಿರ್ಮಿತ ಅತಿ ವೇಗದ ರೈಲು ನವೆಂಬರ್‌ 11 ರಿಂದ ಮೈಸೂರು- ಬೆಂಗಳೂರು- ಚೆನ್ನೈ ನಡುವೆ ತನ್ನ ಮೊದಲ ಸಂಚಾರ ಆರಂಭಿಸಿದ್ದು, ವಾರದಲ್ಲಿ ಬುಧವಾರ ಹೊರತುಪಡಿಸಿ ವಾರದಲ್ಲಿ ಆರು ದಿನಗಳ ಕಾಲ ಸಂಚರಿಸಲಿದೆ. ಇದು ಪ್ರಯಾಣಿಕರಿಗೆ ಉತ್ತಮ ಪ್ರಯಾಣದ ಅನುಭವ ನೀಡಲಿದ್ದು, ಕರ್ನಾಟದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಿದೆ ಎಂದು ನಿರೀಕ್ಷಿಸಲಾಗಿದೆ.

 ವಂದೇ ಭಾರತ್ ರೈಲಿನ ವಿಶೇಷತೆ
ದೇಶದ ಅತಿ ವೇಗದ ರೈಲಾಗಿದ್ದು ಗಂಟೆಗೆ ಗರಿಷ್ಠ 160 ಕಿ.ಮೀ. ವೇಗದ ಸಾಮರ್ಥ್ಯ ಹೊಂದಿದೆ, ಐಶಾರಾಮಿ ವ್ಯವಸ್ಥೆ, ಸೀಟುಗಳನ್ನು ವಿಮಾನದ ರೀತಿ ನಿರ್ಮಿಸಲಾಗಿದೆ. ನಿಧಾನಗೊಳಿಸಲು ಇಂಟೆಲಿಜೆಂಟ್ ಬ್ರೇಕಿಂಗ್‌ ವ್ಯವಸ್ಥೆಯಿದೆ. 16 ಬೋಗಿಗಳನ್ನು ಹೊಂದಿದ್ದು, 384 ಮೀ. ಉದ್ದವಿದೆ. ಪ್ರತ್ಯೇಕ ಎಂಜಿನ್‌ ಇಲ್ಲ.
ಆರು ದಿನ ರೈಲು ಬೆಳಿಗ್ಗೆ 5:50ಕ್ಕೆ ಚೆನ್ನೈ ಸೆಂಟ್ರಲ್‌ನಿಂದ ಹೊರಡುವ ಎಕ್ಸ್‌ಪ್ರೆಸ್ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಆರ್‌ಎಸ್) ನಿಲ್ದಾಣದಲ್ಲಿ ಒಂದು ನಿಲುಗಡೆಯೊಂದಿಗೆ ಮಧ್ಯಾಹ್ನ 12:30 ಕ್ಕೆ ಮೈಸೂರು ತಲುಪುತ್ತದೆ.
ಚೆನ್ನೈ-ಬೆಂಗಳೂರು-ಮೈಸೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಮೂರು ನಿಲ್ದಾಣಗಳ ನಡುವೆ ಇದು ಪೆರಂಬೂರ್, ವೆಪ್ಪಂಪಟ್ಟು, ಕಟ್ಪಾಡಿ ಜಂಕ್ಷನ್, ಗುಡುಪಲ್ಲಿ ಮತ್ತು ಮಾಲೂರು ಮೂಲಕ ಹಾದು ಹೋಗಲಿದೆ.ವಂದೇ ಭಾರತ್ ಎಕ್ಸ್‌ಪ್ರೆಸ್ ಚೆನ್ನೈ-ಬೆಂಗಳೂರು-ಮೈಸೂರು ರೈಲು ಒಂದೇ ಒಂದು ನಿಲುಗಡೆ ಹೊಂದಿದೆ. ಚೆನ್ನೈ ಸೆಂಟ್ರಲ್ ಮತ್ತು ಮೈಸೂರು ನಡುವೆ ಬೆಂಗಳೂರು ಸಿಟಿ ಜಂಕ್ಷನ್‌ನಲ್ಲಿ ಒಂದು ಸ್ಟಾಪ್ ನೀಡಲಿದೆ.
ವಂದೇ ಭಾರತ್ ಎಕ್ಸ್‌ಪ್ರೆಸ್ ಭಾರತದ ಮೊದಲ ಸೆಮಿ ಹೈಸ್ಪೀಡ್‌ ರೈಲು. ಇದು ವಿಶ್ವದರ್ಜೆಯ ಪ್ರಯಾಣಿಕರ ಸೌಕರ್ಯಗಳನ್ನು ಹೊಂದಿದೆ. ಹವಾನಿಯಂತ್ರಿತ ಕ್ಲಾಸ್‌, ಎಕಾನಮಿ ಮತ್ತು ಪ್ರೀಮಿಯಂ ಕ್ಲಾಸ್‌ಗಳನ್ನು ಹೊಂದಿದೆ.

ಪ್ರಮುಖ ಸುದ್ದಿ :-   ವೀಡಿಯೊ...| ಅವನ ಬಗ್ಗೆ ಯೋಚನೆ ಮಾಡ್ತೀಯಲ್ಲ, 1.5 ಕೋಟಿ ರೂ. ಗಾಡಿ ಡ್ಯಾಮೇಜ್ ಯಾರ್ ಕೊಡ್ತಾರೆ : ಕಾರಿಗೆ ಗುದ್ದಿದ ಬೈಕ್‌ ಸವಾರನ ಮೇಲೆ ಒದರಾಡಿದ ಭವಾನಿ ರೇವಣ್ಣ

ವಂದೇ ಭಾರತ್‌ ರೈಲಿನಲ್ಲಿ ಆನ್‌ಬೋರ್ಡ್‌ ಉಪಾಹಾರದ ವ್ಯವಸ್ಥೆ ಇದೆ, ವೈಫೈ, ಮಾಹಿತಿ ವ್ಯವಸ್ಥೆ, ಚಾರ್ಜಿಂಗ್‌ ಪಾಯಿಂಟ್‌, ರೀಡಿಂಗ್‌ ಲೈಟ್‌ ವ್ಯವಸ್ಥೆ, ಸ್ವಯಂ ಚಾಲಿತ ಬಾಗಿಲು, ಸಿಸಿಟಿವಿ, ಬಯೋ ಶೌಚಾಲಯ ವ್ಯವಸ್ಥೆ ಇವೇ ಮೊದಲಾದ ವ್ಯವಸ್ಥೆಗಳಿವೆ.
ಪ್ರತಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನಲ್ಲಿ 1,128 ಪ್ರಯಾಣಿಕರ ಸೀಟಿನ ಸಾಮರ್ಥ್ಯವಿದ್ದು,. ಮೈಸೂರು, ಚೆನ್ನೈ ನಡುವಿನ ಪ್ರಯಾಣದರ ಎಕಾನಮಿ ಕ್ಲಾಸ್‌ 921 ರೂ., ಎಕ್ಸಿಕ್ಯುಟಿವ್‌ ಕ್ಲಾಸ್‌ 1880 ರೂ.ಆಗಿದೆ.
ಮೈಸೂರು, ಬೆಂಗಳೂರು ನಡುವಿನ ಪ್ರಯಾಣದರ ಎಕಾನಮಿ ಕ್ಲಾಸ್‌ 368 ರೂ, ಎಕ್ಸಿಕ್ಯುಟಿವ್‌ ಕ್ಲಾಸ್‌ 768 ರೂ.
ಮೈಸೂರು ಮತ್ತು ಚೆನ್ನೈ ನಡುವಿನ 504 ಕಿ.ಮೀ. ದೂರವನ್ನು ಈ ರೈಲು 7 ತಾಸುಗಳಲ್ಲಿ ಕ್ರಮಿಸಲಿದೆ. ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ಗರಿಷ್ಠ ವೇಗ 160 ಕಿ.ಮೀ. ಇದೆಯಾದರೂ, ಮೈಸೂರು ಮತ್ತು ಚೆನ್ನೈ ನಡುವೆ ಗಂಟೆಗೆ ಗರಿಷ್ಠ 75 ಕಿ.ಮೀ ವೇಗದಲ್ಲಿ ಸಂಚರಿಸಲಿದೆ. ಸದ್ಯ ತಾಂತ್ರಿಕ ಕಾರಣಗಳಿಂದಾಗಿ ದೇಶದ ಎಲ್ಲ ಕಡೆಗಳಲ್ಲಿ ಕಡಿಮೆ ವೇಗದಲ್ಲಿ ಓಡಿಸಲಾಗುತ್ತಿದೆ. 497 ಕಿ.ಮೀ ದೂರವನ್ನು ಕ್ರಮಿಸಲು 6 ಗಂಟೆ 40 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ.

ಪ್ರಮುಖ ಸುದ್ದಿ :-   ಸಿ.ಪಿ. ಯೋಗೇಶ್ವರ ಬಾವ ಮಹದೇವಯ್ಯ ನಾಪತ್ತೆ ಪ್ರಕರಣ: ಕಾರು ಪತ್ತೆ

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ರೈಲು ನಿಲ್ದಾಣದಲ್ಲಿ ‘ಭಾರತ ಗೌರವ ಕಾಶಿ ದರ್ಶನ’ ವಿಶೇಷ ರೈಲಿಗೆ ಚಾಲನೆ ನೀಡಿದರು. ಈ ರೈಲು ಯಾತ್ರಿಗಳನ್ನು ಕಾಶಿ, ಅಯೋಧ್ಯೆ ಸೇರಿದಂತೆ ಹಲವು ಪ್ರಮುಖ ಯಾತ್ರಾ ಸ್ಥಳಗಳಿಗೆ ಕೊಂಡೊಯ್ಯಲಿದ್ದು, ಒಂದು ವಾರದಲ್ಲಿ ಮರಳಿ ಬರಲಿದೆ.
ರೈಲಿಗೆ ₹ 20,000 ಶುಲ್ಕ ನಿಗದಿಪಡಿಸಲಾಗಿದ್ದು, ರಾಜ್ಯ ಸರ್ಕಾರವು ₹ 5 ಸಾವಿರ ಸಹಾಯನಧನ ಒದಗಿಸುತ್ತಿದೆ. ಹೀಗಾಗಿ ಯಾತ್ರಿಕರು ₹ 15,000 ಮೊತ್ತದಲ್ಲಿ ಕಾಶಿ ಯಾತ್ರೆ ಪೂರ್ಣಗೊಳಿಸಬಹುದಾಗಿದೆ. ಈ ಶುಲ್ಕವು ಯಾತ್ರೆ ಊಟೋಪಚಾರವನ್ನೂ ಒಳಗೊಂಡಿರುತ್ತದೆ.

 

4.3 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement