ಬೆಂಗಳೂರು ನಿಲ್ದಾಣದಲ್ಲಿರುವ ಟರ್ಮಿನಲ್-2 ಲೋಕಾರ್ಪಣೆ, 108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ

posted in: ರಾಜ್ಯ | 0

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಮೊದಲು ಕನಕದಾಸ, ವಾಲ್ಮೀಕಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ನಂತರ ಪ್ರಧಾನಿ ಮೋದಿ ವಂದೇಭಾರತ್ ರೈಲಿಗೆ ಚಾಲನೆ ನೀಡಿದ್ದಾರೆ. ನಂತರ ಕಾಶಿ ದರ್ಶನ ರೈಲಿಗೆ ಹಸಿರು ನಿಶಾನೆ ನೀಡಿದ ಪ್ರಧಾನಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ವಿಮಾನ ನಿಲ್ದಾಣದಲ್ಲಿರುವ ಟರ್ಮಿನಲ್-2 ಉದ್ಘಾಟನೆ ಮಾಡಿದರು. ನಂತರ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣಗೊಳಿಸಿದರು.
ನಂತರ ಸಭೆಯಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತಣಾಡಿದ ಪ್ರಧಾನಿ ಮೋದಿ ಭಾರತದ ಅಭಿವೃದ್ಧಿಗೆ ಕರ್ನಾಟಕ ನೀಡುತ್ತಿರುವ ಕೊಡುಗೆಯನ್ನು ಶ್ಲಾಘಿಸಿದರು.
ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ಮೋದಿ ವಿಶೇಷ ದಿನದಂದು ಬೆಂಗಳೂರಿಗೆ ಬರುವ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ. ಇಂದು ಕರ್ನಾಟಕದ ಹಾಗೂ ದೇಶದ ಎರಡು ಮಹಾನ್ ಪುರುಷರಿಗೆ ಗೌರವ ಸಲ್ಲಿಸುವ ಸುವರ್ಣಾವಕಾಶ ಲಭಿಸಿದೆ. ಬೆಂಗಳೂರು ಭಾರತದ ಭವಿಷ್ಯಕ್ಕೆ ಅತ್ಯಂತ ಮುಖ್ಯ ನಗರ. ಬೆಂಗಳೂರು ಭಾರತದ ಯುವಶಕ್ತಿಯ ಪ್ರತೀಕವಾಗಿದೆ ಎಂದು ಬಣ್ಣಿಸಿದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಇಂದು ಕೆಂಪೇಗೌಡ ನಿಲ್ದಾಣದ ಎರಡನೇ ಟರ್ಮಿನಲ್ ಕೂಡಾ ಲೋಕಾರ್ಪಣೆಯಾಗಿದೆ. ಇದರ ಫೋಟೋಗಳನ್ನು ನಾನೇ ಪೋಸ್ಟ್​ ಮಾಡಿದ್ದೆ. ಆದರೆ ಇಂದು ಇಲ್ಲಿಗೆ ಭೇಟಿ ನೀಡಿದ ಬಳಿಕ ಇದು ಫೋಟೋದಲ್ಲಿ ಕಂಡುಬಂದಿದ್ದಕ್ಕಿಂತಲೂ ಭವ್ಯವಾಗಿ, ಆಧುನಿಕವಾಗಿದೆ. ಇದು ಬೆಂಗಳೂರಿನ ಜನರ ದೀರ್ಘಕಾಲದ ಬೇಡಿಕೆಯಾಗಿತ್ತು. ಇದೀಗ ನಮ್ಮ ಸರ್ಕಾರ ಇದನ್ನು ಪೂರ್ಣಗೊಳಿಸಿದೆ ಎಂದರು.
ಇಂದು ಭಾರತ ಸ್ಟಾರ್ಟಪ್​ನಿಂದ ಭಾರತ ಗುರುತಿಸಿಕೊಳ್ಳುತ್ತದೆ. ಭಾರತ ಗುರುತಿಸಿಕೊಳ್ಳುವಲ್ಲಿ ಬೆಂಗಳೂರಿನ ಕೊಡುಗೆ ಅತ್ಯಂತ ಮಹತ್ವದ್ದು,
ಸ್ಟಾರ್ಟ್​ಅಪ್​ ಎನ್ನುವುದು ಒಂದು ಕಂಪನಿಯಿಂದ ಆಗುವುದಿಲ್ಲ. ಅದೊಂದು ಮನೋಭಾವ, ಸಮಗ್ರ ಪ್ರಯತ್ನದ ಫಲ.ಅದು ಹೊಸತನವನ್ನು ತರುವ ಒಂದು ಹಠ ಎಂದು ವ್ಯಾಖ್ಯಾನಿಸಿದರು. ಇಲೆಕ್ಟ್ರಿಕ್‌ ವಾಹನ ನಿರ್ಮಾಣದಲ್ಲಿ ಕರ್ನಾಟಕದ ಪಾತ್ರ ದೊಡ್ಡದಿದೆ. ಸೇನಾ ವಾಹನಗಳ ನಿರ್ಮಾಣದಲ್ಲೂ ಕರ್ನಾಟಕದ ಪಾತ್ರ ಮಹತ್ವದ್ದಾಗಿದೆ ಎಂದರು.

ಇಂದಿನ ಪ್ರಮುಖ ಸುದ್ದಿ :-   ಮಂಗಳೂರು: ಇಸ್ಲಾಂಗೆ ಮತಾಂತರಿಸಿ ಲೈಂಗಿಕ ಕಿರುಕುಳ-ಯುವತಿಯಿಂದ ದೂರು ದಾಖಲು

ನನಗೆ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಅನಾವರಣ, ಜಲಾಭಿಷೇಕದ ಅವಕಾಶ ಸಿಕ್ಕಿದೆ. ಇದು ಭವಿಷ್ಯದ ಬೆಂಗಳೂರು ಹಾಗೂ ಭಾರತಕ್ಕೆ ನಿರಂತರ ಶ್ರಮಿಸುವ ಪ್ರೇರಣೆ ನೀಡುತ್ತದೆ. ಬೆಂಗಳೂರು ನಗರವನ್ನು ನಾಡಪ್ರಭು ಕೆಂಪೇಗೌಡರ ಪರಿಕಲ್ಪನೆಯಂತೆಯೇ ಅಭಿವೃದ್ಧಿಪಡಿಸುತ್ತೇವೆ. ಕೆಂಪೇಗೌಡರು ಬೆಂಗಳೂರನ್ನು ಆರ್ಥಿಕವಾಗಿ ಮಾತ್ರವಲ್ಲ ಸಾಂಸ್ಕೃತಿವಕಾಗಿಯೂ ಸದೃಢಗೊಳಿಸಬೇಕು ಎಂದು ಚಿಂತಿಸಿದ್ದರು. ಬೆಂಗಳೂರು ಇಂದು ಜಾಗತಿಕ ನಗರವಾಗಿ ಬೆಳೆದಿದೆ. ಬೆಂಗಳೂರಿನ ಪರಂಪರೆ ಸಂರಕ್ಷಿಸುವ ಜೊತೆಗೆ ಆಧುನಿಕ ಸೌಲಭ್ಯಗಳನ್ನೂ ಒದಗಿಸಬೇಕು. ಈ ಕಾರ್ಯಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮೋದಿ ಹೇಳಿದರು.
ಕನಕದಾಸರು ಹಾಗೂ ವಾಲ್ಮೀಕಿ ನಮ್ಮ ಸಂಸ್ಕೃತಿ ರಕ್ಷಣೆಗೆ ಕೊಡುಗೆ ನೀಡಿದ್ದಾರೆ. ಇಬ್ಬರೂ ಮಹಾನುಭಾವರಿಗೆ ಮತ್ತೊಮ್ಮೆ ನನ್ನ ನಮನಗಳು. ಕನಕದಾಸರು ಒಂದು ಕಡೆಯಿಂದ ಕೃಷ್ಣನ ಭಕ್ತಿಯ ಮಾರ್ಗ ತೋರಿದರು. ಮತ್ತೊಂದೆಡೆ ‘ಕುಲಕುಲವೆಂದು ಹೊಡೆದಾಡದಿರಿ’ ಎಂದು ಕಿವಿಮಾತು ಹೇಳಿದರು.

ಕರ್ನಾಟಕಕ್ಕೆ ಮೊದಲ ಸ್ವದೇಶಿ ವಂದೇ ಭಾರತ್ ರೈಲು ಸಿಕ್ಕಿದೆ. ಈ ರೈಲು ಚೆನ್ನೈ-ಬೆಂಗಳೂರು-ಮೈಸೂರು ಈ ಮೂರನ್ನು ಪರಸ್ಪರ ಸಂಪರ್ಕಿಸುತ್ತದೆ. ಅಯೋಧ್ಯೆ, ಪ್ರಯಾಗ್​ರಾಜ್ ಹಾಗೂ ಕಾಶಿ ಯಾತ್ರೆ ನೀಡುವ ರೈಲು ಕೂಡಾ ಆರಂಭವಾಗಿದೆ. ಮುಂದೆ ಭಾರತದ ರೈಲ್ವೇ ಹೇಗಿರುತ್ತದೆ ಎಂಬುವುದಕ್ಕೆ ವಂದೇ ಭಾರತ ಉದಾಹರಣೆ. ಭಾರತ ಈಗ ನಿಂತು ಚಲಿಸುವ ದಿನಗಳನ್ನು ಹಿಂದೆ ಬಿಟ್ಟಿದೆ. ವೇಗವಾಗಿ ಓಡಲು ಇಚ್ಛಿಸುತ್ತದೆ ಎಂಬುವುದಕ್ಕೆ ಸಾಕ್ಷಿ. ವಂದೇ ಭಾರತ್ ಭಾರತೀಯ ರೈಲ್ವೆಯ ಹೊಸ ಗುರುತಾಗಲಿದೆ. ಸಾರಿಗೆ ವೇಗ ಹೆಚ್ಚಿಸಿ ಸಮಯ ಉಳಿಯಲಿದೆ. ವಂದೇ ಭಾರತ್ ಎಕ್ಸ್​ಪ್ರೆಸ್​ ಕೇವಲ ಒಂದು ರೈಲು ಮಾತ್ರವೇ ಅಲ್ಲ. ಅದು ಹೊಸ ಭಾರತದ ಹೊಸ ಮೈಲಿಗಲ್ಲು. ಮುಂದಿನ ದಿನಗಳಲ್ಲಿ ಭಾರತದ ರೈಲುಗಲು ಹೇಗಿರಲಿವೆ ಎಂಬುದರ ಒಂದು ಝಲಕ್ ಅಷ್ಟೆ ಎಂದು ಹೇಳಿದರು.
ಸಣ್ಣ ರೈತರ ಅನುಕೂಲಕ್ಕೆ ಹಲವು ಯೋಜನೆಗಳನ್ನು ರೂಪಿಸಿದ್ದೇವೆ. ಆಹಾರ ಧಾನ್ಯಗಳು ಸಕಾಲಕ್ಕೆ ಮಾರುಕಟ್ಟೆ ತಲುಪಲು ಅನುಕೂಲ ಕಲ್ಪಿಸಿದ್ದೇವೆ. ಎಲ್ಲರೂ ಜೊತೆಗೂಡಿದರೆ ದೇಶ ಸದೃಢವಾಗುತ್ತದೆ. ದೇಶದ ಅಭಿವೃದ್ಧಿ ಪಥದಲ್ಲಿ ಹೆಜ್ಜೆ ಹಾಕಲು ಎಲ್ಲರನ್ನೂ ಭಾಗಿದಾರರಾಗಿ ಮಾಡಿಕೊಳ್ಳಲಾಗಿದೆ ಎಂದ ಅವರು, ಇಂದು ಜಗತ್ತಿನಲ್ಲಿ ಕಿರುಧಾನ್ಯದ ಬಗ್ಗೆ ಮಾತು ಕೇಳಿಬರುತ್ತಿದೆ. ‘ರಾಮಧಾನ್ಯ ಚರಿತ್ರೆ’ ಮೂಲಕ ಕಿರುಧಾನ್ಯವಾದ ರಾಗಿಯ ಉದಾಹರಣೆ ನೀಡಿ ಸಾಮಾಜಿಕ ಸಮಾನತೆಯ ಸಂದೇಶ ನೀಡಿದರು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಕಿತವಾಡ್ ಫಾಲ್ಸ್: ಸೆಲ್ಫಿ ತೆಗೆಯುವಾಗ ಜಾರಿ ಬಿದ್ದು ಬೆಳಗಾವಿ ನಾಲ್ವರು ಯುವತಿಯರು ನೀರುಪಾಲು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 3

ನಿಮ್ಮ ಕಾಮೆಂಟ್ ಬರೆಯಿರಿ

advertisement