ಮರಾಠಾ ಐಕಾನ್ ಸಂಭಾಜಿ ಮಹಾರಾಜರನ್ನು ಅವಮಾನಿಸಿದ ಸತೀಶ ಜಾರಕಿಹೊಳಿ: ಮಹಾರಾಷ್ಟ್ರ ಡಿಸಿಎಂ ಫಡ್ನವೀಸ್ ಆರೋಪ, ನೀವಿದನ್ನು ಒಪ್ಪುತ್ತೀರಾ ಎಂದು ರಾಹುಲ್‌ ಗಾಂಧಿಗೆ ಪ್ರಶ್ನಿಸಿ ವೀಡಿಯೊ ಟ್ವೀಟ್‌

posted in: ರಾಜ್ಯ | 0

ಬೆಳಗಾವಿ: ನಿಪ್ಪಾಣಿಯಲ್ಲಿ ನಡೆದ ಮಾನವ ಬಂಧುತ್ವ ವೇದಿಕೆಯ ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಮತ್ತೊಂದು ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದ್ದು, ಧರ್ಮವೀರ ಸಂಭಾಜಿ ಮಹಾರಾಜರ ಕುರಿತು ಸತೀಶ ಜಾರಕಿಹೊಳಿ ಮಾಡಿದ ಭಾಷಣವನ್ನು ಖಂಡಿಸಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಟ್ವೀಟ್‌ ಮಾಡಿದ್ದಾರೆ.
ಅಲ್ಲದೆ ಅವರು ಸತೀಶ ಜಾರಕಿಹೊಳಿ ಭಾಷಣದ ವೀಡಿಯೊ ಕ್ಲಿಪ್‌ ಅನ್ನು ಸಹ ಹಂಚಿಕೊಂಡಿದ್ದಾರೆ. ನಿಪ್ಪಾಣಿಯಲ್ಲಿ ನವೆಂಬರ್ 6ರಂದು ನಡೆದ ಮಾನವ ಬಂಧುತ್ವ ವೇದಿಕೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಸತೀಶ ಜಾರಕಿಹೊಳಿ, ಧರ್ಮವೀರ ಸಂಭಾಜಿ ಮಹಾರಾಜರನ್ನ ಬ್ರಿಟಿಷರು ಹಿಡಿದು ಹತ್ಯೆ ಮಾಡಿದರು. ಏಕೆ ಹತ್ಯೆ ಮಾಡಿದರು? ಶಿವಾಜಿ ಮಹಾರಾಜರ ಊಟದಲ್ಲಿ ವಿಷ ಹಾಕಲಾಗಿತ್ತು. ಸಂಭಾಜಿ ಅವರನ್ನು ಹಿಡಿದು ಶಿಕ್ಷೆ ಕೊಟ್ಟಿದ್ದರು. ಈ ಕೋಪದಿಂದ ಅವರನ್ನು ಹಿಡಿದುಕೊಡಲಾಯಿತು. ಅವರಿಗೆ ಧರ್ಮವೀರ ಸಂಭಾಜಿ ಎಂಬ ಹೆಸರುಟ್ಟು ಇತಿಹಾಸ ಬರೆದಿದ್ದಾರೆ. ಈ ದೇಶದ ಇತಿಹಾಸ ಬಹಳ ವಿಚಿತ್ರವಾಗಿದೆ. ಇಂಥ ಇತಿಹಾಸ ತಿಳಿಯಲು ಬಹಳ ಸಮಯ ಬೇಕು ಎಂದು ಹೇಳಿದ್ದಾರೆ.
ಸತೀಶ ಜಾರಕಿಹೊಳಿ ಭಾಷಣದ ಸತೀಶ ಜಾರಕಿಹೊಳಿ ವಿಡಿಯೋ ಕ್ಲಿಪ್‌ ಅನ್ನು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದು, ಈ ರೀತಿಯ ನಾನ್‌ಸೆನ್ಸ್‌ ಹೇಳಿಕೆಯನ್ನು ನೀವು ಒಪ್ಪುತ್ತೀರಾ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಇಂದಿನ ಪ್ರಮುಖ ಸುದ್ದಿ :-   ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್‌ : 1.55 ಲಕ್ಷ ಹೊಸ ಪಡಿತರ ಕಾರ್ಡ್‌ ವಿತರಣೆಗೆ ಸರ್ಕಾರದ ಆದೇಶ

ಈ ರೀತಿ ಮಹಾನ್‌ ನಾಯಕ ಸಂಭಾಜಿ ಮಹಾರಾಜರ ಬಗ್ಗೆ ಹೇಳುವುದನ್ನು ನೀವು ಒಪ್ಪುತ್ತೀರಾ? ಸಂಭಾಜಿ ಮಹಾರಾಜರ ಬಗ್ಗೆ ತಪ್ಪು ಮಾಹಿತಿ ನೀಡುವ, ದಾರಿ ತಪ್ಪಿಸುವ, ಅವಮಾನ ಮಾಡುವ ಹೇಳಿಕೆ ಇದು ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಇದು ನಿಮ್ಮ ಕಾಂಗ್ರೆಸ್‌ ಪಕ್ಷದ ಅಧಿಕೃತ ಹೇಳಿಕೆಯೇ ಎಂದು ಪ್ರಶ್ನಿಸಿರುವ ಅವರು, ಮಹಾರಾಷ್ಟ್ರವು ಇದನ್ನು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.

ಸತೀಶ ಜಾರಕಿಹೊಳಿ ಹೇಳಿಕೆಯನ್ನು ರಾಹುಲ್ ಗಾಂಧಿ ಅವರು ಅನುಮೋದಿಸುತ್ತಾರೆಯೇ ಎಂದು ಸ್ಪಷ್ಟಪಡಿಸಬೇಕು ಎಂದು ಬಿಜೆಪಿಯ ಅಮಿತ್ ಮಾಳವಿಯಾ ಹೇಳಿದ್ದಾರೆ, ಅವರು ಈಗ ತಮ್ಮ ಭಾರತ ಜೋಡೋ ಯಾತ್ರೆಯೊಂದಿಗೆ ಮಹಾರಾಷ್ಟ್ರ ಪ್ರವಾಸ ಮಾಡುತ್ತಿದ್ದಾರೆ. ಅವರು ಕರ್ನಾಟಕದ ಶಾಸಕ ಮತ್ತು ಕಾಂಗ್ರೆಸ್ ನಾಯಕನ ಈ ಹೇಳಿಕೆಯನ್ನು ಅನುಮೋದಿಸುತ್ತಾರೆಯೇ? ಅವರು ಸ್ಪಷ್ಟಪಡಿಸದ ಹೊರತು ಅವರ ಉದ್ದೇಶಗಳು ಅನುಮಾನಾಸ್ಪದವಾಗಿ ಉಳಿಯುತ್ತವೆ ಎಂದು ಹೇಳಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಯಲ್ಲಾಪುರ: ಅರೆಬೈಲ್‌ ಘಟದಲ್ಲಿ ಕಾರು ಅಡ್ಡಗಟ್ಟಿ ದರೋಡೆ ಮಾಡಿದ ಪ್ರಕರಣ: ಮೂವರು ಅಂತಾರಾಜ್ಯ ಕಳ್ಳರ ಬಂಧನ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4.3 / 5. ಒಟ್ಟು ವೋಟುಗಳು 3

ನಿಮ್ಮ ಕಾಮೆಂಟ್ ಬರೆಯಿರಿ

advertisement