ಸಂಜೆ ಬಳಿಕವೂ ವಿದ್ಯಾರ್ಥಿಗಳು ಬಸ್ ಪಾಸ್ ನಲ್ಲಿ ಪ್ರಯಾಣಿಸಬಹುದು: ಬಿಎಂಟಿಸಿ

ಬೆಂಗಳೂರು: ವಿದ್ಯಾರ್ಥಿಗಳ ಬಸ್ ಪಾಸ್ ಕುರಿತು ಸಂಜೆ 7:30 ರ ನಂತರ ಮಾನ್ಯವಿಲ್ಲವೆಂದು ಬಸ್ ನಿರ್ವಾಹಕರು ವಿದ್ಯಾರ್ಥಿಗಳಿಗೆ ಟಿಕೆಟ್ ನೀಡಬಾರದು ಎಂದು ಬಿಎಂಟಿಸಿ ಸೂಚನೆ ನೀಡಿದೆ.
ಈ ಮೊದಲು ವಿದ್ಯಾರ್ಥಿಗಳು ಸಂಜೆ 7:30ರ ಬಳಿಕ ಬಿಎಂಟಿಸಿ ಬಸ್‌ನಲ್ಲಿ ಸಂಚರಿಸುವ ಹಾಗಿಲ್ಲ ಎಂಬ ಸೂಚನೆ ಸಾಕಷ್ಟು ತೊಂದರೆಯಾಗುತ್ತಿತ್ತು. ಹೀಗಾಗಿ ವಿದ್ಯಾರ್ಥಿಗಳು ಬಿಎಂಟಿಸಿ ಕಚೇರಿಗೆ ದೂರು ಸಲ್ಲಿಸಿದ್ದರು. ವಿದ್ಯಾರ್ಥಿಗಳ ಮನವಿ ಮೇರೆಗೆ ಸಂಜೆ 7:30ರ ನಂತರ ಮಾನ್ಯವಿಲ್ಲವೆಂದು ಬಸ್ ನಿರ್ವಾಹಕರು ವಿದ್ಯಾರ್ಥಿಗಳಿಗೆ ಟಿಕೆಟ್ ನೀಡಬಾರದು ಎಂದು ಬಿಎಂಟಿಸಿ ಸೂಚೆನೆ ನೀಡಿದೆ. ವಿದ್ಯಾರ್ಥಿಗಳು ಬಿಎಂಟಿಸಿ ಪಾಸ್ ಉಪಯೋಗಿಸಿಕೊಂಡು ಯಾವ ಸಮಯದಲ್ಲಿ ಬೇಕಾದರೂ ಪ್ರಯಾಣಿಸಬಹುದು. ಪಾಸ್ ಇರುವ ವಿದ್ಯಾರ್ಥಿಗಳ ಬಳಿ ನಿರ್ವಾಹಕರು ಟಿಕೆಟ್ ತೆಗೆದುಕೊಳ್ಳುವಂತಿಲ್ಲ ಎಂದು ಬಿಎಂಟಿಸಿ ಹೇಳಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

ನಿಮ್ಮ ಕಾಮೆಂಟ್ ಬರೆಯಿರಿ

advertisement