ಕರ್ನಾಟಕದ ಈ ಜಿಲ್ಲೆಗಳಲ್ಲಿ ನವೆಂಬರ್‌14ರ ವರೆಗೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ, ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ. ಕರ್ನಾಟಕದ ಒಟ್ಟು 8 ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಮಿಂಚು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ನವೆಂಬರ್‌ 13 ಮತ್ತು 14ರಂದು ಮಳೆಯಾಗಲಿದ್ದು, ಬೆಂಗಳೂರು ಸೇರಿದಂತೆ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ಹಾಸನ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಬೀಳಲಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ನವೆಂಬರ್ 14ರಂದು ಭಾರೀ ಮಳೆಯಾಗಲಿದ್ದು ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಾದ್ಯಂತ ಒಣ ಹವೆ ಮುಂದುವರಿಯಲಿದೆ. ಈ ಭಾಗದಲ್ಲಿ ಮಳೆ ಮುನ್ಸೂಚನೆ ಇಲ್ಲ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ತಮಿಳುನಾಡು, ರಾಯಲಸೀಮಾ, ಪುದುಚೇರಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಮತ್ತು ಕಾರೈಕಲ್‌ನಲ್ಲಿ ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಆಂಧ್ರಪ್ರದೇಶ, ಯಾನಂ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಸಾಕಷ್ಟು ವ್ಯಾಪಕವಾದ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ನವೆಂಬರ್ 13ರವರೆಗೆ ಭಾರಿ ಮಳೆ ಮುಂದುವರಿಯಲಿದ್ದು, ನ. 14ರ ವೇಳೆಗೆ ಕಡಿಮೆಯಾಗುವ ಸಾಧ್ಯತೆ ಇದೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ ವೇಳೆ ಬಿಜೆಪಿಗೆ ಶಾಕ್ : ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿ ಸದಸ್ಯ ಕೆ.ಪಿ.ನಂಜುಂಡಿ

4.3 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement