ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ದೇವೇಗೌಡರಿಗೆ ಆಹ್ವಾನ ಹೋಗಿತ್ತು : ಸಿಎಂ ಪತ್ರ ಟ್ವೀಟ್‌ ಮಾಡಿದ ಬಿಜೆಪಿ

ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪ್ರತಿಮೆ ಅನಾವರಣಗೊಳಿಸಿದ್ದ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರನ್ನು ಆಹ್ವಾನಿಸಿಲ್ಲ ಎಂದು ಜೆಡಿಎಸ್‌ ನಾಯಕರು ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜೆಡಿಎಸ್‌ ನಾಯಕರ ಆರೋಪಕ್ಕೆ ಕರ್ನಾಟಕ ಬಿಜೆಪಿ ತನ್ನ ಟ್ವಿಟರ್‌ ಖಾತೆಯಿಂದ ಪ್ರತಿಕ್ರಿಯೆ ನೀಡಿದ್ದು, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರಿಗೆ ಪ್ರಗತಿ ಪ್ರತಿಮೆಯ ಅನಾವರಣದ ಮೊದಲ ಆಹ್ವಾನ ಪತ್ರ ಹೋಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ದೂರವಾಣಿ ಕರೆ ಮಾಡಿ ಆಹ್ವಾನಿಸಿದ್ದಾರೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರು ಮಾಜಿ ಪ್ರಧಾನಿ ದೇವೇಗೌಡರಿಗೆ ಬರೆದ ಆಹ್ವಾನ ಪತ್ರವನ್ನು ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದೆ.
ಅದಲ್ಲದೆ, ಆಹ್ವಾನ ವಿಷಯದಲ್ಲೂ ಸುಳ್ಳಾಡುವ ಜೆಡಿಎಸ್ ತನ್ನ ಸಮಯಸಾಧಕ ಬುದ್ಧಿಯನ್ನು ಪ್ರದರ್ಶಿಸಿದೆ. ಇದಷ್ಟೇ ಅಲ್ಲ, ಕನ್ನಡದ ಅಸ್ಮಿತೆಯ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೇ ಈ ಮಣ್ಣಿಗೆ ಸೇವೆ‌ ಸಲ್ಲಿಸಿದ ಸಾಧಕರಾದಿಯಾಗಿ ನಮ್ಮ ರಾಜ್ಯದ ಕಟ್ಟ ಕಡೆಯಲ್ಲಿರುವವರನ್ನೂ ಮರೆಯದೇ, ಹಿಂಬಾಲಿಸಿ ಗುರುತಿಸಿದ್ದು ಬಿಜೆಪಿ ಎಂದು ಜೆಡಿಎಸ್‌ ವಿರುದ್ಧ ಬಿಜೆಪಿ ಕಿಡಿಕಾರಿದೆ. ಕುಟುಂಬವನ್ನೇ ಪಕ್ಷವನ್ನಾಗಿಸಿಕೊಂಡ ಜೆಡಿಎಸ್‌ಗೆ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಎಂಬುದು ಯಾವತ್ತಿಗೂ ಬಿಡಿಸಲಾಗದ ಒಗಟು ಎಂದು ಕೂಡ ಬಿಜೆಪಿ ಟ್ವೀಟ್‌ ಮಾಡಿ ಜೆಡಿಎಸ್‌ ಆರೋಪಕ್ಕೆ ತಿರುಗೇಟು ನೀಡಿದೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

ಪತ್ರದಲ್ಲೇನಿದೆ?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನವೆಂಬರ್‌ 10, 2022 ಶುಕ್ರವಾರ ಮಾಜಿ ಪ್ರಧಾನಿ ದೇವೇಗೌಡರಿಗೆ ಪತ್ರ ಬರೆದಿದ್ದು, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನವೆಂಬರ್‌ 11ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಭವ್ಯ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ ಎಂದು ಬರೆದಿದ್ದಾರೆ.

https://twitter.com/BJP4Karnataka/status/1591077138966663168?ref_src=twsrc%5Etfw%7Ctwcamp%5Etweetembed%7Ctwterm%5E1591077138966663168%7Ctwgr%5E2a2ce5e34a7b52ba6ab2dfd35110d54e351561cf%7Ctwcon%5Es1_&ref_url=https%3A%2F%2Fvijaykarnataka.com%2Fnews%2Fhasana%2Fsoldier-and-his-first-wife-committed-suicide%2Farticleshow%2F95459092.cms

ಆಧುನಿಕ ಕರ್ನಾಟಕದ ಇತಿಹಾಸದಲ್ಲಿ ಒಂದು ಸುವರ್ಣ ಫಳಿಗೆ, ಕೆಂಪೇಗೌಡರು ಐದು ನೂರು ವರ್ಷಗಳ ಹಿಂದೆ ನಿರ್ಮಿಸಿದ ಬೆಂಗಳೂರು ನಗರ ಈಗ ಎಲ್ಲ ಕ್ಷೇತ್ರಗಳ ಸೃಜನಶೀಲ ಮನಸ್ಸುಗಳಿಗೆ, ಸಾಧಕರಿಗೆ ಮತ್ತು ಕನಸುಗಾರರಿಗೆ ಅವಕಾಶ ಕಲ್ಪಿಸುವ ಒಂದು ಅನನ್ಯ ತಾಣವಾಗಿದೆ. ಇಂತಹ ದೂರದೃಷ್ಟಿಯ ಒಬ್ಬ ಮಹಿಮಾತಸ್ವಿತರಿಗೆ ಒಂದು ಸೂಕ್ತ ಮತ್ತು ಭವ್ಯ ಸ್ಮಾರಕ ಎನ್ನುವುದು ಇದುವರೆಗೆ ಇರಲಿಲ್ಲ. ಇದು ನಮ್ಮ ಸರ್ಕಾರದ ಅವಧಿಯಲ್ಲಿ ನಿಮ್ಮೆಲ್ಲರ ಸಹಕಾರದಿಂದ ಸಾಧ್ಯವಾಗಿದೆ.
ನಮ್ಮೆಲ್ಲರ ಕನಸು ಕೈಗೂಡಿದಂತೆ ಎದ್ದು ನಿಂತಿರುವ “ಪ್ರಗತಿಯ ಪ್ರತಿಮೆ”ಯ ಅನಾವರಣದ ಸುಮುಹೂರ್ತದಲ್ಲಿ ತಾವು ಭಾವಗಹಿಸಬೇಕು ಎಂದು ಈ ಪತ್ರದ ಮೂಲಕ ವಿನಂತಿಸುತ್ತಿರುವೆ. ತಮ್ಮ ಉಪಸ್ಥಿತಿಯು ಸಮಾರಂಭದ ಶೋಭೆ ಹೆಚ್ಚಿಸಲಿದ್ದು, ತಮ್ಮ ಆಗಮನದ ನಿರೀಕ್ಷೆಯಲ್ಲಿರುತ್ತೇನೆ. ಬನ್ನಿ ನಾಡ ಕಟ್ಟೋಣ ಎಂದು ಬರೆದಿದ್ದಾರೆ.

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement