ಟಿಪ್ಪು ಸುಲ್ತಾನ್‌ 100 ಅಡಿ ಪ್ರತಿಮೆ ಮಾಡಿಯೇ ಮಾಡ್ತೇವೆ: ತನ್ವೀರ್ ಸೇಠ್

ಮೈಸೂರು: ಟಿಪ್ಪು ಸುಲ್ತಾನನ ಆಳ್ವಿಕೆಯ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸುವ ಸಲುವಾಗಿ ಅವರ 100 ಅಡಿ ಎತ್ತರದ ಬೃಹತ್ ಪ್ರತಿಮೆಯನ್ನು ನಿರ್ಮಾಣ ಮಾಡಲು ನಿರ್ಧರಿಸಲಾಗಿದ್ದು, ಎಷ್ಟೇ ವಿರೋಧ ಬಂದರೂ ಈ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ತನ್ವೀರ್ ಸೇಠ್ ಹೇಳಿದ್ದಾರೆ.
ಮೈಸೂರು ಅಥವಾ ಶ್ರೀರಂಗಪಟ್ಟಣದಲ್ಲಿ ಪ್ರತಿಮೆ ಪ್ರತಿಷ್ಠಾಪಿಸುವುದು ಖಚಿತ. ಅದನ್ನು ಕಂಚಿನಿಂದ ತಯಾರಿಸಬೇಕಾ, ಪಂಚಲೋಹದಿಂದ ಮಾಡಿಸಬೇಕಾ ಎಂಬುದರ ಬಗ್ಗೆ ಮುಸ್ಲಿಂ ಸಮುದಾಯದ ಮುಖಂಡರ ಜೊತೆ ಚರ್ಚೆ ಮಾಡುತ್ತೇನೆ. ಇದಕ್ಕೆ ಸರ್ಕಾರ ಅನುಮತಿ ನೀಡಿದರೆ ಸ್ವಾಗತಿಸುತ್ತೇನೆ. ಕೊಡದಿದ್ದರೆ ಕೋರ್ಟ್‌ ಮೊರೆ ಹೋಗಿ ಅನುಮತಿ ಪಡೆದು ಪ್ರತಿಮೆ ಸ್ಥಾಪನೆ ಮಾಡುತ್ತೇವೆ ಎಂದು ಹೇಳಿದರು.

ಇದು ಕಾಂಗ್ರೆಸ್ ಪಕ್ಷದ ತೀರ್ಮಾನವಲ್ಲ, ನಮ್ಮ ಸಮುದಾಯದ ತೀರ್ಮಾನ. ಟಿಪ್ಪುಅಷ್ಟೊಂದು ಒಳ್ಳೆಯ ಕೆಲಸಗಳನ್ನು ಸುಲ್ತಾನ್ ಮಾಡಿದ್ದಾರೆ. ಹೀಗಾಗಿ ಪ್ರತಿಮೆ ನಿರ್ಮಾಣ ಮಾಡಿಯೇ ಮಾಡುತ್ತೇವೆ ಎಂದರು.
ಟಿಪ್ಪು ಪ್ರತಿಮೆ ಸ್ಥಾಪನೆ ಮಾಡಿದರೆ ಧ್ವಂಸ ಮಾಡುತ್ತೇವೆ ಎಂಬ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ”ಮುತಾಲಿಕ್ ಅವರಿಗೆ ನಿರ್ಮಾಣದ ಕೆಲಸಗಳಲ್ಲಿ ಕೈ ಜೋಡಿಸಿ ಗೊತ್ತಿಲ್ಲ. ಅದಕ್ಕಾಗಿ ಈ ರೀತಿ ಹೇಳಿಕೆ ನೀಡುತ್ತಾರೆ ಎಂದರು.

ಪ್ರಮುಖ ಸುದ್ದಿ :-   ಮಾರ್ಚ್‌ 31ರೊಳಗೆ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಬದಲಾವಣೆ ಮಾಡಿ : ಬಿಜೆಪಿ ಹೈಕಮಾಂಡಿಗೆ ಮಠಾಧೀಶರ ಗಡುವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement