ಮಧುಮೇಹಿಗಳಿಗಾಗಿ ವಿಶಿಷ್ಟವಾದ ರೈಸ್ ಕುಕ್ಕರ್ ವಿನ್ಯಾಸಗೊಳಿಸಿದ ಕಾಶ್ಮೀರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು…!

ಶ್ರೀನಗರ : ಕಾಶ್ಮೀರ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ತಂಡವೊಂದು ಮಧುಮೇಹ ರೋಗಿಗಳಿಗೆ ವಿಶೇಷ ‘ಸ್ಟಾರ್ಚ್ ರೈಸ್ ಕುಕ್ಕರ್’ ಆವಿಷ್ಕಾರಕ್ಕಾಗಿ ಪೇಟೆಂಟ್ ಹಕ್ಕುಗಳನ್ನು ಪಡೆದುಕೊಂಡಿದೆ. ಈ ಸ್ಟಾರ್ಚ್ ರೈಸ್ ಕುಕ್ಕರ್ ಆವಿಷ್ಕಾರದೊಂದಿಗೆ ಬಂದ ಐದು ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ಕುಕ್ಕರ್ ಅನ್ನು ಸಾಜಿದ್ … Continued

ಭದ್ರಾವತಿ: ಕ್ಷುಲ್ಲಕ ಕಾರಣಕ್ಕೆ ಎರಡು ಕೋಮಿನ ಯುವಕರ ನಡುವೆ ಗಲಾಟೆ, ಕೆಲವರಿಗೆ ಗಾಯ

ಶಿವಮೊಗ್ಗ: ಕ್ಷುಲ್ಲಕ ಕಾರಣಕ್ಕೆ ಎರಡು ಕೋಮಿನ ಯುವಕರ ನಡುವೆ ಗಲಾಟೆ ನಡೆದ ಘಟನೆ ಭದ್ರಾವತಿಯ ಗಾಂಧಿ ವೃತ್ತದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಗಲಾಟೆಯಲ್ಲಿ ಅರವಿಂದ್ ಮತ್ತು ಗೌತಮ್ ಎಂಬುವವರಿಗೆ ಗಾಯವಾಗಿದೆ. ಇಬ್ಬರನ್ನು ಭದ್ರವತಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಂತರ ಆಸ್ಪತ್ರೆ ಬಳಿಯೂ ಎರಡು ಕೋಮಿನ ಯುವಕರ ನಡುವೆ ಗಲಾಟೆ ನಡೆದಿದ್ದು, ಗಲಾಟೆಯಲ್ಲಿ … Continued

45 ಗಂಟೆಗಳಲ್ಲಿ 20 ಸಭೆಗಳು, ದ್ವಿಪಕ್ಷೀಯ ಸಭೆ: ಪ್ರಧಾನಿ ಮೋದಿ ಜಿ20 ವೇಳಾಪಟ್ಟಿ

ನವದೆಹಲಿ: ಎರಡು ದಿನಗಳ ಸುದೀರ್ಘ ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 14 ಸೋಮವಾರ ಇಂಡೋನೇಶ್ಯಾದ ಬಾಲಿಗೆ ಪ್ರಯಾಣಿಸಲಿದ್ದಾರೆ. ಇತರ ವಿಶ್ವ ನಾಯಕರೊಂದಿಗೆ ಹಲವಾರು ದ್ವಿಪಕ್ಷೀಯ ಸಭೆಗಳು ಮತ್ತು ಇಂಡೋನೇಷ್ಯಾದಲ್ಲಿನ ಭಾರತೀಯ ವಲಸಿಗರೊಂದಿಗೆ ಸಂಪರ್ಕ ಸಾಧಿಸಲು ಸಮುದಾಯ ಕಾರ್ಯಕ್ರಮ ಸೇರಿದಂತೆ 45 ಗಂಟೆಗಳ ಅವಧಿಯಲ್ಲಿ ಪ್ರಧಾನಿಯವರು ಸುಮಾರು 20 ಕಾರ್ಯಕ್ರಮಗಳನ್ನು ಹೊಂದಿದ್ದಾರೆ. … Continued

4 ರಾಜ್ಯಗಳ ರಾಜ್ಯಪಾಲರ ಕಾನೂನು ಸಲಹೆಗಾರರಾಗಿದ್ದ ವಿಕಾಸ್ ಬನ್ಸೋಡೆ ಬಿಜೆಪಿಗೆ ಸೇರ್ಪಡೆ

ನವದೆಹಲಿ : ಹಲವು ರಾಜ್ಯಗಳ ರಾಜ್ಯಪಾಲರ ಕಾನೂನು ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದ ಸುಪ್ರೀಂ ಕೋರ್ಟ್‌ ವಕೀಲ ವಿಕಾಸ್ ಬನ್ಸೋಡೆ ಅವರು ಭಾನುವಾರ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಹಂಸರಾಜ್ ಭಾರದ್ವಾಜ್ ಸೇರಿದಂತೆ ನಾಲ್ಕು ರಾಜ್ಯಗಳ ರಾಜ್ಯಪಾಲರ ಕಾನೂನು ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದ ಸುಪ್ರೀಂ ಕೋರ್ಟ್‌ ವಕೀಲ ವಿಕಾಸ್ ಬನ್ಸೋಡೆ ಅವರು ಬಿಜೆಪಿ … Continued

ಭಾರತದಲ್ಲಿ ಶೇ.99ರಷ್ಟು ಮುಸ್ಲಿಮರು ತಮ್ಮ ಪೂರ್ವಜರು, ಸಂಸ್ಕೃತಿಯಿಂದ ‘ಹಿಂದೂಸ್ತಾನಿಗಳು’: ಆರ್‌ಎಸ್‌ಎಸ್ ನಾಯಕ

ಥಾಣೆ: ಭಾರತದಲ್ಲಿನ ಶೇಕಡಾ 99 ರಷ್ಟು ಮುಸ್ಲಿಮರು ತಮ್ಮ ಪೂರ್ವಜರು, ಸಂಸ್ಕೃತಿ, ಸಂಪ್ರದಾಯಗಳು ಮತ್ತು ಈ ನೆಲದ ಮೂಲದಿಂದ“ಹಿಂದೂಸ್ತಾನಿ” ಆಗಿದ್ದಾರೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪ್ರಮುಖರಾದ ಇಂದ್ರೇಶಕುಮಾರ್ ಭಾನುವಾರ ಹೇಳಿದ್ದಾರೆ. ಭಾರತೀಯರ ಪೂರ್ವಜರನ್ನು ನಾವು ಪರಿಗಣಿಸಿದರೆ ಅವರ ಡಿಎನ್‌ಎ ಒಂದೇ ಆಗಿದೆ ಎಂದು ಈ ಹಿಂದೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವ್ಯಕ್ತಪಡಿಸಿದ … Continued

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 25 ಕ್ಷೇತ್ರಗಳಲ್ಲಿ ಹಿಂದುತ್ವವಾದಿಗಳಿಂದ ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧೆ: ಮುತಾಲಿಕ್‌ ಘೋಷಣೆ

ಚಿಕ್ಕಮಗಳೂರು: ರಾಜ್ಯದ 2023 ರ ವಿಧಾನಸಭಾ ಚುನಾವಣೆಯಲ್ಲಿ ಹಿಂದೂಗಳನ್ನು ರಕ್ಷಿಸುವ ಉದ್ದೇಶದಿಂದ ಸ್ವತಂತ್ರ ಅಭ್ಯರ್ಥಿಗಳಾಗಿ 25 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಭಾನುವಾರ ಹೇಳಿದ್ದಾರೆ. ಹಿಂದೂಗಳ ಬೆಂಬಲದೊಂದಿಗೆ ಅಧಿಕಾರಕ್ಕೆ ಬಂದ ಬಿಜೆಪಿ ಪಕ್ಷವು ಸಮುದಾಯ ಮತ್ತು ಹಿಂದುತ್ವವನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸ್ಥಾಪನೆಯಾಗಿದ್ದು ಹಿಂದುತ್ವಕ್ಕಾಗಿ ಮತ್ತು… … Continued

ಬಾದಾಮಿಯಿಂದ ಸ್ಪರ್ಧೆ ಮಾಡಲ್ಲ : ಮೊದಲ ಬಾರಿಗೆ ಬಹಿರಂಗವಾಗಿ ಹೇಳಿಕೆ ನೀಡಿದ ಸಿದ್ದರಾಮಯ್ಯ

ಕೋಲಾರ: ವಿಧಾನಸಭೆ ಚುನಾವಣೆ ಸಮೀಪದ ಸಮಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕೋಲಾರ ಪ್ರವಾಸ ಮಾಡುವ ಮೂಲಕ ತಮ್ಮ ಮುಂದಿನ ಕ್ಷೇತ್ರ ಕೋಲಾರ ಎಂಬ ಸುಳಿವು ನೀಡಿದ್ದಾರೆ. ಇದರ ಜೊತೆಗೆ ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸಲ್ಲವೆಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಕೋಲಾರ ತಾಲೂಕಿನ ಗರುಡಾಪಾಳ್ಯದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸುವುದಿಲ್ಲ ಎಂದು ಬಹಿರಂಗವಾಗಿ … Continued

ನಾನು ಗಾಂಧಿ ಕುಟುಂಬವನ್ನು ಪ್ರೀತಿಸುತ್ತೇನೆ, ಪ್ರತಿದಿನ ಅವರಿಗಾಗಿ ಪ್ರಾರ್ಥಿಸುತ್ತಿದ್ದೆ : ರಾಜೀವ್ ಗಾಂಧಿ ಹತ್ಯೆಯ ಅಪರಾಧಿ ನಳಿನಿ

ಚೆನ್ನೈ: ನಾನು ಗಾಂಧಿ ಕುಟುಂಬವನ್ನು ಪ್ರೀತಿಸುತ್ತೇನೆ ಮತ್ತು ನಾನು ಅವರಲ್ಲಿ ಪ್ರತಿಯೊಬ್ಬರಿಗಾಗಿ ಪ್ರತಿದಿನ ಪ್ರಾರ್ಥಿಸುತ್ತೇನೆ. ನಾನು ಅವರಿಗೆ ಶುಭ ಹಾರೈಸುತ್ತೇನೆ” ಎಂದು ಜೈಲಿನಿಂದ ಬಿಡುಗಡೆಯಾಗಿರುವ ರಾಜೀವ ಗಾಂಧಿ ಹತ್ಯೆ ಅಪರಾಧಿ ನಳಿನಿ ಶ್ರೀಹರನ್ ಹೇಳಿದ್ದಾಳೆ. ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ನಳಿನಿ ಮತ್ತು ಇತರ ಐವರು ಜೀವಾವಧಿ ಅಪರಾಧಿಗಳನ್ನು ಸುಪ್ರೀಂ ಕೋರ್ಟ್ ಬಿಡುಗಡೆ ಮಾಡಿದ ಒಂದು … Continued

ಕಳ್ಳತನವಾದ 4 ತಿಂಗಳ ನಂತರ ಅದೇ ಬಸ್ಸನ್ನೇರಿ ಕುಳಿತಿದ್ದ ಕಳ್ಳರ ಮುಖಚಹರೆ ಗುರುತಿಸಿ ಪೊಲೀಸರಿಗೆ ಒಪ್ಪಿಸಿದ ಬಸ್‌ ಕಂಡಕ್ಟರ್‌…!

ಬೆಂಗಳೂರು: ಬಸ್‌ನಲ್ಲಿ ಪ್ರಯಾಣಿಕರ ಸೋಗಿನಲ್ಲಿ ಸಂಚರಿಸಿ ಪ್ರಯಾಣಿಕರೊಬ್ಬರ ಲಕ್ಷಾಂತರ ರೂ.ಗಳ ಮೌಲ್ಯದ ಒಡವೆ, ಹಣ ದೋಚಿ ಪರಾರಿಯಾಗಿದ್ದ ಕಳ್ಳರು ನಾಲ್ಕು ತಿಂಗಳ ಬಳಿಕ ಅದೇ ಬಸ್‌ನಲ್ಲಿ ಸಂಚರಿಸಿತ್ತಿದ್ದ ವೇಳೆ ಬಸ್ ನಿರ್ವಾಹಕರು ಅವರ ಮುಖಚಹರೆ ಗುರುತಿಸಿ ಕಳ್ಳರನ್ನು ಪೊಲೀಸರ ಅತಿಥಿಯಾಗುವಂತೆ ಮಾಡಿದ ಘಟನೆ ನಡೆದಿದೆ. ತಾನು ನಿರ್ವಾಹಕನಾಗಿದ್ದ ಬಸ್‌ನಲ್ಲಿ ಈ ಹಿಂದೆ ಕಳ್ಳತನ ಮಾಡಿ ಮಾರ್ಗ … Continued

ಭಾರತಕ್ಕೆ ಶೀಘ್ರದಲ್ಲೇ ಬರಲಿದೆ ಚಾಲಕ ರಹಿತ ರೈಲುಗಳ ಸಂಚಾರ…!

ನವದೆಹಲಿ: ಭಾರತದಲ್ಲಿ (India) ಮೊದಲ ಬಾರಿಗೆ ಮಾನವರಹಿತ ಚಾಲಿತ ರೈಲು (Unmanned Train) ಶೀಘ್ರವೇ ಸಂಚಾರ ಆರಂಭಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ದೆಹಲಿ ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (DMRC)ನೊಂದಿಗೆ ಸ್ಥಳೀಯ ಸಂವಹನ ಆಧಾರಿತ ರೈಲು ನಿಯಂತ್ರಣ ವ್ಯವಸ್ಥೆಯನ್ನು ಜಂಟಿಯಾಗಿ ಅಭಿವೃದ್ಧಿಪಡಿಸಲು ಒಪ್ಪಂದಕ್ಕೆ ಸಹಿ ಹಾಕಿದ್ದು, ಸಂಕೀರ್ಣವಾದ ರೈಲ್ವೆ ಜಾಲಕ್ಕೆ ಹೆಸರುವಾಸಿಯಾದ … Continued