ಬಾದಾಮಿಯಿಂದ ಸ್ಪರ್ಧೆ ಮಾಡಲ್ಲ : ಮೊದಲ ಬಾರಿಗೆ ಬಹಿರಂಗವಾಗಿ ಹೇಳಿಕೆ ನೀಡಿದ ಸಿದ್ದರಾಮಯ್ಯ

posted in: ರಾಜ್ಯ | 0

ಕೋಲಾರ: ವಿಧಾನಸಭೆ ಚುನಾವಣೆ ಸಮೀಪದ ಸಮಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕೋಲಾರ ಪ್ರವಾಸ ಮಾಡುವ ಮೂಲಕ ತಮ್ಮ ಮುಂದಿನ ಕ್ಷೇತ್ರ ಕೋಲಾರ ಎಂಬ ಸುಳಿವು ನೀಡಿದ್ದಾರೆ. ಇದರ ಜೊತೆಗೆ ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸಲ್ಲವೆಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.
ಕೋಲಾರ ತಾಲೂಕಿನ ಗರುಡಾಪಾಳ್ಯದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸುವುದಿಲ್ಲ ಎಂದು ಬಹಿರಂಗವಾಗಿ ಮೊದಲ ಬಾರಿಗೆ ಹೇಳಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಹಾಗೂ ಬಾದಾಮಿ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಆದರೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲುಕಂಡ ಅವರನ್ನು ಬಾದಾಮಿ ಕ್ಷೇತ್ರದ ಮತದಾರರು ಅಲ್ಪಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಆದರೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಮೊದಲ ಬಾರಿಗೆ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.
ಕೋಲಾರದಲ್ಲಿ ನನಗೆ ಸ್ಪರ್ಧಿಸುವಂತೆ ಒತ್ತಾಯ ಮಾಡುತ್ತಿದ್ದಾರೆ, ಕೆ.ಹೆಚ್ ಮುನಿಯಪ್ಪ‌ ಅವರ ಜೊತೆಗೂ ಮಾತನಾಡಿದ್ದೇವೆ. ಅವರು ಸಪೋರ್ಟ್ ಮಾಡುವುದಾಗಿ ಹೇಳಿದ್ದಾರೆ, ಹಾಲಿ ಶಾಸಕ ಶ್ರೀನಿವಾಸಗೌಡ ಒತ್ತಾಯ ಮಾಡುತ್ತಿದ್ದಾರೆ. ಕೋಲಾರ ಜಿಲ್ಲೆಯ ಎಲ್ಲಾ ನಾಯಕರ ಒತ್ತಾಸೆಗೆ ನಾನು ಚಿರಋಣಿ. ಆದರೆ ಅಂತಿಮವಾಗಿ ಹೈಕಮಾಂಡ್ ಎಲ್ಲಿ ನಿಲ್ಲಲು ಸೂಚಿಸುತ್ತದೆಯೋ ಅಲ್ಲಿ ನಿಲ್ಲುತ್ತೇನೆ ಎಂದು ಹೇಳಿದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಇಂದಿನ ಪ್ರಮುಖ ಸುದ್ದಿ :-   ಸಂಸದೆ ಸುಮಲತಾ ಆಪ್ತ ಸಚ್ಚಿದಾನಂದ ಬಿಜೆಪಿಗೆ ಸೇರ್ಪಡೆ

 

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

2 / 5. ಒಟ್ಟು ವೋಟುಗಳು 3

ನಿಮ್ಮ ಕಾಮೆಂಟ್ ಬರೆಯಿರಿ

advertisement