ಕೆಎಸ್ಆರ್‌ಟಿಸಿ ಸಿಬ್ಬಂದಿಗೆ 1 ಕೋಟಿ ಮೊತ್ತದ ಅಪಘಾತ ವಿಮಾ ಯೋಜನೆ ಜಾರಿ

posted in: ರಾಜ್ಯ | 0

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ ಟಿಸಿ) ಸಿಬ್ಬಂದಿಗೆ 1 ಕೋಟಿ ರೂ. ಮೊತ್ತದ ಅಪಘಾತ ವಿಮಾ ಯೋಜನೆ ಸೌಲಭ್ಯ ಜಾರಿ ಮಾಡಲಾಗಿದೆ.
ಈಗಾಗಲೇ 50 ಲಕ್ಷ ರೂ. ಗಳಷ್ಟು ವಿಮೆ ಸೌಲಭ್ಯವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ) ಹಾಗೂ ಇಂದು, ಸೋಮವಾರ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಾವರ ಜೊತೆ ಮಾಡಿಕೊಂಡ ಒಡಂಬಡಿಕೆಯ 50 ಲಕ್ಷ ರೂ.ಗಳು ಸೇರಿ, ಒಟ್ಟು 1 ಕೋಟಿ ರೂ.ಗಳ ಅಪಘಾತ ವಿಮೆಯನ್ನು ಸಂಸ್ಥೆಯ ಸಿಬ್ಬಂದಿಗೆ ಜಾರಿ ಮಾಡಲಾಗಿದ್ದು ಇದು ದೇಶದ ಭೂ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಪ್ರಪ್ರಥಮವಾಗಿದೆ.
ನಿಗಮದ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ ಅವರ ಸಮ್ಮುಖದಲ್ಲಿ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ ಹಾಗೂ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ಪ್ರಧಾನ ವ್ಯವಸ್ಥಾಪಕರು ಅಪಘಾತ ವಿಮಾ ಯೋಜನೆ ಸೌಲಭ್ಯ ಒಡಂಬಡಿಕೆಗೆ ಸಹಿ ಹಾಕಿದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ನಿಗಮದ ಸಿಬ್ಬಂದಿ ಅಪಘಾತದಲ್ಲಿ (ಕರ್ತವ್ಯದ ಮೇಲೆ ಅಥವಾ ಕರ್ತವ್ಯದಲ್ಲಿ ಇಲ್ಲದಿರುವಾಗಲೂ) ಮೃತಪಟ್ಟರೆ ಅಥವಾ ಶಾಶ್ವತ / ತಾತ್ಕಾಲಿಕ ಅಂಗವೈಕಲ್ಯಕ್ಕೆ ತುತ್ತಾದರೆ ಅವರಿಗೆ 50 ಲಕ್ಷ ರೂ.ಗಳ ಪರಿಹಾರ ನೀಡುವ ಪ್ರೀಮಿಯಂ ರಹಿತ ಅಪಘಾತ ಪರಿಹಾರ ವಿಮಾ ಯೋಜನೆಯನ್ನು ನಿಗಮವು ಎಸ್‌ಬಿಐ ಜೊತೆಯಲ್ಲಿ ಒಡಂಬಡಿಕೆ ಮಾಡಿಕೊಳ್ಳುವ ಮೂಲಕ ಈಗಾಗಲೇ ಜಾರಿಗೆ ತಂದಿದೆ.
ಇದರ ಮುಂದುವರಿದ ಭಾಗವಾಗಿ, ಸೋಮವಾರ ನಿಗಮವು ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಜೊತೆ ಒಡಂಬಡಿಕೆ ಮಾಡಿಕೊಂಡಿದ್ದು , ಅದರಂತೆ ಸಿಬ್ಬಂದಿಗೆ 50 ಲಕ್ಷ ರೂ.ಗಳ ವರೆಗೆ ಅಪಘಾತ ಪರಿಹಾರ ವಿಮಾ ಯೋಜನೆ ಜಾರಿಗೆ ತಂದಿದೆ.

ಇಂದಿನ ಪ್ರಮುಖ ಸುದ್ದಿ :-   ಮಹಾ ಕನ್ನಡಿಗರ ನಕಾಶೆ ನೋಡಿ ಬೆಚ್ಚಿ ಬಿದ್ದ ಮಹಾರಾಷ್ಟ್ರ...!

ಈ ವಿಮಾ ಯೋಜನೆಗೆ ಸಿಬ್ಬಂದಿ ತಿಂಗಳಿಗೆ ರೂ.62.50 + ಜಿ.ಎಸ್.ಟಿ ಸೇರಿದಂತೆ (ವಾರ್ಷಿಕ ರೂ.885/- ಪ್ರೀಮಿಯಂ) ಪಾವತಿಸಬೇಕಾಗುತ್ತದೆ.
ಈ ಸಂದರ್ಭದಲ್ಲಿ, ಮಾತನಾಡಿದ ನಿಗಮದ ಮಾನ್ಯ ಅಧ್ಯಕ್ಷರಾದ ಶ್ರೀ ಎಂ. ಚಂದ್ರಪ್ಪ ನವರು ನಿಗಮವು ಜಾರಿಗೊಳಿಸುತ್ತಿರುವ ಈ ವಿಮಾ
ಕಾರ್ಯಕ್ರಮದಲ್ಲಿ ನಿರ್ದೇಶಕ ಡಾ. ನವೀನ್ ಭಟ್ ವೈ, ಕಾರ್ಮಿಕ ಮುಖಂಡರಾದ ಅನಂತ ಸುಬ್ಬರಾವ್ ಮತ್ತು ಇತರೆ ಕಾರ್ಮಿಕ ಸಂಘಗಳ ಮುಖಂಡರು, ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ಅಧಿಕಾರಿಗಳು ಹಾಗೂ ಕೆಎಸ್‌ಆರ್‌ಟಿಸಿ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಬಿಜೆಪಿ ಸಂಸದರ ಎಚ್ಚರಿಕೆ ನಂತರ ಮೈಸೂರು-ಊಟಿ ರಸ್ತೆಯ ಬಸ್ ಶೆಲ್ಟರ್‌ನ ಎರಡು ಗುಮ್ಮಟ ತೆರವು

4 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement