ದೆಹಲಿ-ಹುಬ್ಬಳ್ಳಿ – ದೆಹಲಿ ಇಂಡಿಗೋ ವಿಮಾನಯಾನಕ್ಕೆ ಸಚಿವ ಜೋಶಿ ಚಾಲನೆ

posted in: ರಾಜ್ಯ | 0

ಹುಬ್ಬಳ್ಳಿ: ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಜೊತೆ ವರ್ಚುವಲ್ ಸಭೆಯ ಮೂಲಕ ದೆಹಲಿ-ಹುಬ್ಬಳ್ಳಿ, ಹುಬ್ಬಳ್ಳಿ-ದೆಹಲಿ ನಡುವೆ ನೇರ ವಿಮಾನಯಾನಕ್ಕೆ ಇಂದು, ಸೋಮವಾರ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಈ ವಿಮಾನಯಾನ ಸೇವೆಯಿಂದ ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕ ಜನರ ಬಹುದಿನಗಳ ಕನಸು ಈಡೇರಿದಂತಾಗಿದೆ. ಹುಬ್ಬಳ್ಳಿಯಿಂದ ರಾಷ್ಟ್ರ ರಾಜಧಾನಿಗೆ ನೇರ ಸಂಪರ್ಕ ದೊರೆತಿರುವುದು ನಗರದ ಪ್ರಗತಿಯ ದೃಷ್ಟಿಯಿಂದ ಮಹತ್ವದ ಮೈಲಿಗಲ್ಲಾಗಿದೆ. ಕೇವಲ 2 ಗಂಟೆ 30 ನಿಮಿಷದಲ್ಲಿ ದೆಹಲಿ ತಲುಪಬಹುದಾಗಿದ್ದು, ಪ್ರತಿ ನಿತ್ಯ ಈ ಸೇವೆ ಲಭ್ಯವಿರುವುದರಿಂದ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಪ್ರಹ್ಲಾದ ಜೋಶಿ ಹೇಳಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ನನ್ನ ಪ್ರಸ್ತಾವನೆಗೆ ಅನುಮೋದನೆ ನೀಡಿ ವಿಮಾನಯಾನ ಸೇವೆ ಪ್ರಾರಂಭಿಸುವ ನಿರ್ಧಾರ ಕೈಗೊಂಡ ಪ್ರಧಾನಿ ಮೋದಿ, ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಇಂಡಿಗೋ ಸಂಸ್ಥೆಯ ಅಧಿಕಾರಿಗಳಿಗೆ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ. ಅಲ್ಲದೆ, ಈ ಭಾಗದ ಜನರಿಗೆ ಅನುಕೂಲವಾಗುವಂತೆ ಹುಬ್ಬಳ್ಳಿ-ಅಹಮದಾಬಾದ್ ಸಂಪರ್ಕವನ್ನು ಆದಷ್ಟು ಬೇಗ ಮಾಡುವಂತೆ ಜೋಶಿ ಇಂಡಿಗೋ ಅಧಿಕಾರಿಗಳಿಗೆ ಮನವಿ ಮಾಡಿದರು. ದೆಹಲಿ ಸಂಪರ್ಕ ಆರಂಭವಾಗಿರುವುದರಿಂದ ಇದೀಗ ಸ್ಥಗಿತಗೊಂಡಿರುವ ಹುಬ್ಬಳ್ಳಿಯ ಕಾರ್ಗೋ ಸೇವೆಯನ್ನು ಪುನರರಾಂಭಿಸುವಂತೆ ಸೂಚಿಸಿದರು.

ಇಂದಿನ ಪ್ರಮುಖ ಸುದ್ದಿ :-   ಮಕ್ಕಳ ಜೊತೆ ಅಸಭ್ಯ ವರ್ತನೆ : ಚಾಲಕನನ್ನು ಕಂಬಕ್ಕೆ ಕಟ್ಟಿ ಧರ್ಮದೇಟು ನೀಡಿದ ಗ್ರಾಮಸ್ಥರು

ದೇಶದ ಬೇರೆ ಬೇರೆ ಸ್ಥಳಗಳಿಗೆ ಹುಬ್ಬಳ್ಳಿಯಿಂದ ಹೆಚ್ಚಿನ ವಿಮಾನಯಾನ ಸಂಪರ್ಕದಿಂದ ಈ ಭಾಗದ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಚಾಲನೆಯೂ ದೊರಕಲಿದೆ ಎಂದು ಸಚಿವರು ಹೇಳಿದರು.
ಈ ಸಮಯದಲ್ಲಿ ಇಂಡಿಗೋ ಸಂಸ್ಥೆಯ ಅಕ್ಷಯ ಪಾಟೀಲ ಅವರು ವಿಮಾನ ಹಾರಾಟಕ್ಕೆ ಮೊದಲು ಪ್ರಯಾಣಿಕರನ್ನುದ್ದೇಶಿಸಿ ಮಾತನಾಡಿ, 1700 ಕಿಮೀ ಅಂತರದ ಹುಬ್ಬಳ್ಳಿಯಿಂದ ದೆಹಲಿಗೆ ಸಂಚರಿಸಲು ಹುಬ್ಬಳ್ಳಿ ಜನಕ್ಕೆ ಈವರೆಗೆ ಎರಡೂವರೆ ದಿವಸ ಬೇಕಾಗಿತ್ತು. ಆದರೆ ಈಗ ಕೇವಲ ಎರಡೂವರೆ ಗಂಟೆಗಳಲ್ಲೆ ತಲುಪಬಹುದು ಎಂದರು.
ಇಂಡಿಗೋ ವಿಮಾನ ಪ್ರತಿದಿನ ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಸಂಖ್ಯೆ 6ಇ 5625 ಬೆಳಿಗ್ಗೆ 10ಕ್ಕೆ ಹೊರಟು ಹುಬ್ಬಳ್ಳಿಯನ್ನು 12:45 ಕ್ಕೆ ತಲುಪಲಿದೆ. ಮರಳಿ ಮಧ್ಯಾಹ್ನ 1:15 ಕ್ಕೆ ಹುಬ್ಬಳ್ಳಿಯಿಂದ ಹೊರಟು 3:45ಕ್ಕೆ ದೆಹಲಿ ತಲುಪಲಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 1

ಇಂದಿನ ಪ್ರಮುಖ ಸುದ್ದಿ :-   ಮಹಾ ಕನ್ನಡಿಗರ ನಕಾಶೆ ನೋಡಿ ಬೆಚ್ಚಿ ಬಿದ್ದ ಮಹಾರಾಷ್ಟ್ರ...!

ನಿಮ್ಮ ಕಾಮೆಂಟ್ ಬರೆಯಿರಿ

advertisement