ನಂದಿನ ಹಾಲು, ಮೊಸರಿನ ದರದಲ್ಲಿ ಹೆಚ್ಚಳಕ್ಕೆ ಸಿಎಂ ಬೊಮ್ಮಾಯಿ ತಾತ್ಕಾಲಿಕ ಬ್ರೇಕ್

ಬೆಂಗಳೂರು:  ಪ್ರತಿ ಲೀಟರ್‌ ನಂದಿನಿ ಹಾಲು ಮತ್ತು ಮೊಸರಿನ ದರ ಹೆಚ್ಚಳ ಮಾಡಲಾಗಿದೆ. ಪ್ರತಿ ಲೀಟರ್‌ ನಂದಿನಿ ಹಾಲು ಮತ್ತು ಮೊಸರಿಗೆ 3 ರೂ.ಗಳಷ್ಟು ಹೆಚ್ಚಳ ಮಾಡಲಾಗಿದೆ. ಆದರೆ ಮುಖ್ಯಮಂತ್ರಿ ಬೊಮ್ಮಾಯಿ ತಾತ್ಕಾಲಿಕ ಬ್ರೇಕ್‌ ಹಾಕಿದ್ದಾರೆ.ನವೆಂಬರ್‌ 20ರ ನಂತರ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ರೈತರಿಂದ ಪ್ರತಿ ಲೀಟರ್ ಹಾಲನ್ನು ಕೆಎಂಎಫ್‌(KMF) ಸರಾಸರಿ 29 ರೂ.ಗಳಿಗೆ ಖರೀದಿ ಮಾಡುತ್ತಿತ್ತು. ಸರ್ಕಾರದಿಂದ‌ ರೈತರಿಗೆ ಪ್ರತಿ ಲೀಟರ್‌ಗೆ 5 ರೂ. ಸಹಾಯಧನ ನೀಡಲಾಗುತ್ತಿದೆ. ಈಗ ಏರಿಕೆ ಮಾಡಿದ ಹಣವನ್ನು ರೈತರಿಗೆ ನೀಡುವ ಯೋಜನೆ ರೂಪಿಸಲಾಗಿದೆ ಎಂದು ಹೇಳಲಾಗಿತ್ತು.
ಹವಾಮಾನ ವೈಪರೀತ್ಯ ಕಾರಣದಿಂದ ಮೇವು ಸಿಗದೆ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಜೊತೆ ಹಸುವಿಗೆ ಚರ್ಮ ಗಂಟು ರೋಗ ಬಾಧಿಸುತ್ತಿದೆ. ಅಲ್ಲದೆ, ಸಾಗಾಣಿಕೆ , ವಿದ್ಯುತ್ , ಪ್ಯಾಕಿಂಗ್ ಇತ್ಯಾದಿ ವೆಚ್ಚ ಶೇ.25 – 35 ರಷ್ಟು ಹೆಚ್ಚಾಳವಾಗಿದೆ. ಈ ಹಿನ್ನೆಲೆಯಲ್ಲಿ ಹಾಲು ಮತ್ತು ಮೊಸರಿನ ಬೆಲೆಯನ್ನು ಏರಿಕೆ ಮಾಡಲಾಗಿತ್ತು.
ಈ ಕುರಿತು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (KMF ) ಮಾಹಿತಿ ಬಿಡುಗಡೆ ಮಾಡಿದ್ದು, ನಂದಿನಿಯ ಎಲ್ಲಾ ಮಾದರಿಯ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್‌ಗೆ 3 ರೂ.ಗಳಷ್ಟು ಹೆಚ್ಚಳ ಮಾಡಲಾಗುತ್ತಿದೆ ಎಂದು ತಿಳಿಸಿದೆ.

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

ನಂದಿನ ಹಾಲು, ಮೊಸರಿನ ಪರಿಷ್ಕೃತ ದರಪಟ್ಟಿ
ಪ್ರಸ್ತುತ ಟೋನ್ಡ್‌ ಹಾಲಿನ ದರ 37ರಿಂದ 40 ರೂ.ಗಳಿಗೆ ಹೆಚ್ಚಳ
ಹೋಮೋಜಿನೈಸ್ಡ್ ಟೋನ್ಡ್ ಹಾಲು 38ರಿಂದ ರೂ.41 ರೂ.ಗಳಿಗೆ ಹೆಚ್ಚಳ
ಹೋಮೋಜಿನೈಸ್ಡ್ ಹಸುವಿನ ಹಾಲು 42 ರಿಂದ 45 ರೂ.ಗಳಿಗೆ ಹೆಚ್ಚಳ
ಸ್ಪೆಷಲ್ ಹಾಲು 43 ರಿಂದ 46ರೂ.ಗಳಿಗೆ ಹೆಚ್ಚಳ
ಶುಭಂ ಹಾಲು 43 ರಿಂದ 46 ರೂ.ಗಳಿಗೆ ಹೆಚ್ಚಳ
ಹೋಮೋಜಿನೈಸ್ಡ್ ಸ್ಟ್ಯಾಂಡಡೈಸ್ಡರ್ ಹಾಲು 44 ರಿಂದ 47 ರೂ.ಗಳಿಗೆ ಹೆಚ್ಚಳ
ಸಮೃದ್ಧಿ ಹಾಲು 48 ರಿಂದ 51ರೂ.ಗಳಿಗೆ ಹೆಚ್ಚಳ
ಸಂತೃಪ್ತಿ ಹಾಲು (ಹೋಮೋಜಿನೈಸ್ಡ್) 50 ರಿಂದ 53 ರೂ.ಗಳಿಗೆ ಹೆಚ್ಚಳ
ಡಬಲ್ ಟೋನ್ಡ್ ಹಾಲು 36 ರಿಂದ 39 ರೂ.ಗಳಿಗೆ ಏರಿಕೆ
ಮೊಸರು ಪ್ರತಿ ಕೆಜಿಗೆ 45 ರಿಂದ 48 ರೂ.ಗಳಿಗೆ ಹೆಚ್ಚಳ

3.3 / 5. 3

ನಿಮ್ಮ ಕಾಮೆಂಟ್ ಬರೆಯಿರಿ

advertisement