ಶಬರಿಮಲೆ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಬೆಳಗಾವಿ, ಹುಬ್ಬಳ್ಳಿಯಿಂದ ಕೊಲ್ಲಂಗೆ ವಿಶೇಷ ರೈಲು ಸಂಚಾರ

posted in: ರಾಜ್ಯ | 0

ಹುಬ್ಬಳ್ಳಿ:  ಬೆಳಗಾವಿಯ ಸಂಸದರಾದ ಮಂಗಲಾ ಅಂಗಡಿ ಅವರು ಶಬರಿಮಲೆಗೆ ಹೋಗುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಬೆಳಗಾವಿಯಿಂದ ಕೊಲ್ಲಂಗೆ ವಿಶೇಷ ರೈಲುಗಳನ್ನು ಓಡಿಸಲು ರೈಲ್ವೇ ಸಚಿವಾಲಯಕ್ಕೆ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಈಗ, ಕೊಲ್ಲಂಗೆ ವಿಶೇಷ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ.
ರೈಲು ಸಂಖ್ಯೆ 07357 ಬೆಳಗಾವಿ – ಕೊಲ್ಲಂ ವಿಶೇಷ ಎಕ್ಸ್‌ಪ್ರೆಸ್ ರೈಲು (1 ಟ್ರಿಪ್) ನವೆಂಬರ್ 20ರಂದು ಬೆಳಿಗ್ಗೆ 11:30ಕ್ಕೆ ಬೆಳಗಾವಿಯಿಂದ ಹೊರಟು ಮರುದಿನ ಮಧ್ಯಾಹ್ನ 3.15 ಕ್ಕೆ ಕೊಲ್ಲಂ ತಲುಪಲಿದೆ. ಇದೇ ಮಾರ್ಗದಲ್ಲಿ ಹಿಂದಿರುಗುವ, ರೈಲು ಸಂಖ್ಯೆ 07358 ಕೊಲ್ಲಂ-ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ ರೈಲು ನವೆಂಬರ್ 21 ರಂದು ಕೊಲ್ಲಂನಿಂದ ಸಾಯಂಕಾಲ 05:10ಕ್ಕೆ ಹೊರಟು ಮರುದಿನ ರಾತ್ರಿ 11 ಗಂಟೆಗೆ ಬೆಳಗಾವಿ ತಲುಪಲಿದೆ.
ಈ ವಿಶೇಷ ರೈಲಿಗೆ ಎರಡೂ ಮಾರ್ಗದಲ್ಲಿ ಖಾನಾಪುರ, ಲೋಂಡಾ, ಧಾರವಾಡ, ಹುಬ್ಬಳ್ಳಿ, ಹಾವೇರಿ, ರಾಣಿಬೆನ್ನೂರು, ದಾವಣಗೆರೆ, ಬೀರೂರು, ಅರಸೀಕೆರೆ, ತಿಪಟೂರು, ತುಮಕೂರು, ಯಲಹಂಕ, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರು, ಪೊದನೂರು, ಪಲಕ್ಕಾಡ್, ತ್ರಿಶೂರ್‌, ಆಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ಚಂಗನಸ್ಸೆರಿ, ತಿರುವಲ್ಲಾ, ಚೆಂಗನ್ನೂರ್, ಮಾವೇಲಿಕರ, ಕಾಯಂಕುಲಂ, ಸಸ್ತಾನ್‌ಕೋಟ್ಟ ನಿಲ್ದಾಣಗಳಲ್ಲಿ ನಿಲುಗಡೆ ಇದೆ.
ಈ ವಿಶೇಷ ರೈಲು ಒಂದು 2 ಟೈರ್‌ ಹವಾನಿಯಂತ್ರಿತ ದರ್ಜೆ, ಎಂಟು 3 ಟೈರ್‌ ಹವಾನಿಯಂತ್ರಿತ ದರ್ಜೆ, ಒಂಬತ್ತು ಸ್ಲೀಪರ್ ಕ್ಲಾಸ್ ಮತ್ತು ಎರಡು ಲಗೇಜ್ ಕಮ್ ಬ್ರೇಕ್-ವ್ಯಾನ್‌ ಗಳೊಂದಿಗೆ ಜನರೇಟರ್ ಕಾರ್ ಒಳಗೊಂಡಿರುವ 20 ಬೋಗಿಗಳು ಹೊಂದಿರುತ್ತದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಇಂದಿನ ಪ್ರಮುಖ ಸುದ್ದಿ :-   ಮಹಾ ಕನ್ನಡಿಗರ ನಕಾಶೆ ನೋಡಿ ಬೆಚ್ಚಿ ಬಿದ್ದ ಮಹಾರಾಷ್ಟ್ರ...!

ಹುಬ್ಬಳ್ಳಿ – ಕೊಲ್ಲಂ – ಹುಬ್ಬಳ್ಳಿ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ (1 ಟ್ರಿಪ್):
ರೈಲು ಸಂಖ್ಯೆ 07359 ಹುಬ್ಬಳ್ಳಿ – ಕೊಲ್ಲಂ ವಿಶೇಷ ಎಕ್ಸ್‌ಪ್ರೆಸ್ ರೈಲು ನವೆಂಬರ್ 27 ರಂದು ಮಧ್ಯಾಹ್ನ 02:40 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು ಮರುದಿನ ಮಧ್ಯಾಹ್ನ 03:15 ಕ್ಕೆ ಕೊಲ್ಲಂ ತಲುಪಲಿದೆ. ಇದೆ ಮಾರ್ಗದಲ್ಲಿ ಹಿಂದಿರುಗುವ, ರೈಲು ಸಂಖ್ಯೆ 07360 ಕೊಲ್ಲಂ – ಹುಬ್ಬಳ್ಳಿ ವಿಶೇಷ ಎಕ್ಸ್‌ಪ್ರೆಸ್ ರೈಲು ನವೆಂಬರ್ 28 ರಂದು ಕೊಲ್ಲಂನಿಂದ ಸಾಯಂಕಾಲ 5:10 ಕ್ಕೆ ಹೊರಟು ಮರುದಿನ ರಾತ್ರಿ 8 ಗಂಟೆಗೆ ಹುಬ್ಬಳ್ಳಿ ತಲುಪಲಿದೆ.
ಈ ವಿಶೇಷ ರೈಲಿಗೆ ಎರಡೂ ಮಾರ್ಗದಲ್ಲಿ ಹಾವೇರಿ, ರಾಣಿಬೆನ್ನೂರು, ದಾವಣಗೆರೆ, ಬೀರೂರು, ಅರಸೀಕೆರೆ, ತಿಪಟೂರು, ತುಮಕೂರು, ಯಲಹಂಕ, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರು, ಪೊದನೂರು, ಪಾಲಕ್ಕಾಡ್, ತ್ರಿಶೂರ್‌, ಆಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ಚಂಗನಸ್ಸೆರಿ, ತಿರುವಲ್ಲಾ, ಚೆಂಗನ್ನೂರ್, ಮಾವೇಲಿಕರ, ಕಾಯಂಕುಲಂ, ಸಸ್ತಾನ್‌ಕೋಟ್ಟ ನಿಲ್ದಾಣಗಳಲ್ಲಿ ನಿಲುಗಡೆ ಇದೆ.

ಬೆಳಗಾವಿ – ಕೊಲ್ಲಂ – ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ (7 ಟ್ರಿಪ್)
ಬೆಳಗಾವಿ – ಕೊಲ್ಲಂ ವಿಶೇಷ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 07361) ರೈಲು ಡಿಸೆಂಬರ್ 4 ರಿಂದ ಜನವರಿ 15 ರ ವರೆಗೆ ಬೆಳಗಾವಿಯಿಂದ ಪ್ರತಿ ಭಾನುವಾರ ಬೆಳಿಗ್ಗೆ 11:30 ಗಂಟೆಗೆ ಬೆಳಗಾವಿಯಿಂದ ಹೊರಡಲಿದ್ದು, ಮರುದಿನ ಮಧ್ಯಾಹ್ನ 03.15 ಕ್ಕೆ ಕೊಲ್ಲಂ ತಲುಪಲಿದೆ. ಇದೆ ಮಾರ್ಗದಲ್ಲಿ ಹಿಂದಿರುಗುವ ಕೊಲ್ಲಂ-ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 07362) ರೈಲು ಡಿಸೆಂಬರ್ 5 ರಿಂದ ಜನವರಿ 16ರ ವರೆಗೆ ಕೊಲ್ಲಂನಿಂದ ಪ್ರತಿ ಸೋಮವಾರದಂದು ಸಾಯಂಕಾಲ 05:10 ಗಂಟೆಗೆ ಹೊರಟು ಮರುದಿನ ರಾತ್ರಿ 11 ಗಂಟೆಗೆ ಬೆಳಗಾವಿ ತಲುಪಲಿದೆ.
ಈ ವಿಶೇಷ ರೈಲಿಗೆ ಎರಡೂ ಮಾರ್ಗದಲ್ಲಿ ಖಾನಾಪುರ, ಲೋಂಡಾ, ಧಾರವಾಡ, ಎಸ್‌.ಎಸ್‌.ಎಸ್ ಹುಬ್ಬಳ್ಳಿ, ಹಾವೇರಿ, ರಾಣಿಬೆನ್ನೂರು, ದಾವಣಗೆರೆ, ಬೀರೂರು, ಅರಸೀಕೆರೆ, ತಿಪಟೂರು, ತುಮಕೂರು, ಯಲಹಂಕ, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರು, ಪೊದನೂರು, ಪಾಲಕ್ಕಾಡ್, ತ್ರಿಶೂರ್‌, ಆಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ಚಂಗನಸ್ಸೆರಿ, ತಿರುವಲ್ಲಾ, ಚೆಂಗನ್ನೂರ್, ಮಾವೇಲಿಕರ, ಕಾಯಂಕುಲಂ, ಸಸ್ತಾನ್‌ಕೋಟ್ಟ ನಿಲ್ದಾಣಗಳಲ್ಲಿ ನಿಲುಗಡೆ ಇದೆ.
ಈ ಮೇಲೆ ತಿಳಿಸಿದ ವಿಶೇಷ ರೈಲುಗಳು ಒಂದು 2 ಟೈರ್‌ ಹವಾನಿಯಂತ್ರಿತ ದರ್ಜೆ, ಎರಡು 3 ಟೈರ್‌ ಹವಾನಿಯಂತ್ರಿತ ದರ್ಜೆ, ಹತ್ತು ಸ್ಲೀಪರ್ ಕ್ಲಾಸ್ ಮತ್ತು ಎರಡು ದ್ವಿತೀಯ ದರ್ಜೆ ಲಗೇಜ್ ಕಮ್ ಬ್ರೇಕ್-ವ್ಯಾನ್‌ ಗಳಿಂದ ಕೂಡಿದ/ಅಂಗವಿಕಲ ಸ್ನೇಹಿ ಕಂಪಾರ್ಟ್‌ಮೆಂಟ್ ಒಳಗೊಂಡಿರುವ 15 ಬೋಗಿಗಳು ಹೊಂದಿರುತ್ತದೆ ಎಂದು ಹುಬ್ಬಳ್ಳಿ ನೈಋತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ ಹೆಗಡೆ ತಿಳಿಸಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಮಂಗಳೂರು: ಇಸ್ಲಾಂಗೆ ಮತಾಂತರಿಸಿ ಲೈಂಗಿಕ ಕಿರುಕುಳ-ಯುವತಿಯಿಂದ ದೂರು ದಾಖಲು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement