ಕರ್ನಾಟಕದ ಈ ಜಿಲ್ಲೆಗಳಲ್ಲಿ ನವೆಂಬರ್ 17ರವರೆಗೆ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನವೆಂಬರ್ 17ರ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ, ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಹಳಷ್ಟು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು,ರಾಮನಗರ, ಶಿವಮೊಗ್ಗ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ತಮಿಳುನಾಡಿನಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಅದರ ಪರಿಣಾಮ ಬೆಂಗಳೂರಿಗೂ ಹಾಗೂ ಸುಮುತ್ತಲಿನ ಜಿಲ್ಲೆಗಳಿಗೂ ಆಗಲಿದೆ. ತಮಿಳುನಾಡಿನಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ, 5 ಜಿಲ್ಲೆಗಳಿಗೆ ಪ್ರವಾಹದ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಥೇಣಿ, ದಿಂಡಿಗಲ್, ಮಧುರೈ, ಶಿವಗಂಗಾ ಮತ್ತು ರಾಮನಾಥಪುರಂ ಜಿಲ್ಲೆಗಳಲ್ಲಿ ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅಣೆಕಟ್ಟುಗಳು ತುಂಬಿ ಹರಿಯುತ್ತಿದ್ದು, ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ.
ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಕಡೆ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋದ ಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆಗಳಿರುತ್ತವೆ. ಗರಿಷ್ಠ ಉಷ್ಣಾಂಶ 26 ಹಾಗೂ ಕನಿಷ್ಠ ಉಷ್ಣಾಂಶ 10 ಡಿಗ್ರಿ ಸೆಲ್ಸಿಯಸ್​ ಇರಲಿದೆ.

ಪ್ರಮುಖ ಸುದ್ದಿ :-   ಲೈಂಗಿಕ ದೌರ್ಜನ್ಯ ಪ್ರಕರಣ: ಮಹಿಳೆ ಅಪಹರಣ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಬಂಧನ

3.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement