ಮಿಜೋರಾಂ ಕಲ್ಲುಕ್ವಾರಿ ಅವಘಡ: 8 ಕಾರ್ಮಿಕರ ಮೃತದೇಹ ಹೊರಕ್ಕೆ

ಐಜ್ವಾಲ್: ಮಿಜೋರಾಂನ ಕಲ್ಲುಕ್ವಾರಿ ಅವಘಡದಲ್ಲಿ ಮೃತಪಟ್ಟ ಬಿಹಾರದ 8 ಕಾರ್ಮಿಕರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸೋಮವಾರ ಸಂಜೆ ಕುಸಿದಿದ್ದ ಕಲ್ಲುಕ್ವಾರಿ ಅಡಿ 12 ಮಂದಿ ಸಿಲುಕಿದ್ದರು ಎಂದು ಹೇಳಲಾಗಿದ್ದು, ಇನ್ನೂ ನಾಲ್ವರಿಗಾಗಿ ಶೋಧ ನಡೆಯುತ್ತಿದೆ.
ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹಗಳ ಗುರುತು ಪತ್ತೆ ಕಾರ್ಯ ನಡೆಯಲಿದೆ. ನಾಪತ್ತೆಯಾಗಿರುವ ಎಲ್ಲ ಕಾರ್ಮಿಕರು ಪತ್ತೆಯಾಗುವವರೆಗೂ ಕಾರ್ಯಾಚರಣೆ ನಡೆಯಲಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಹೇಳಿಕೆಯಲ್ಲಿ ತಿಳಿಸಿದೆ.
ರಾಜ್ಯ ವಿಪತ್ತು ನಿರ್ವಹಣಾ ಪಡೆ, ಗಡಿ ಭದ್ರತಾ ಪಡೆ ಮತ್ತು ಅಸ್ಸಾಂ ರೈಫಲ್ಸ್ ಪಡೆಯನ್ನು ರಕ್ಷಣಾ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗಿದೆ.ಲೀಟೆ ಮತ್ತು ನಾತಿಯಾಲ್ ಗ್ರಾಮಗಳ ಜನರು ಸ್ವಯಂಪ್ರೇರಿತರಾಗಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಮೂಲಗಳ ಪ್ರಕಾರ, ಹ್ನಾಥಿಯಾಲ್ ಜಿಲ್ಲೆಯ ಮೌದರ್ಹ್‌ನಲ್ಲಿರುವ ಖಾಸಗಿ ಕಂಪನಿಯ ಕಾರ್ಮಿಕರು ಊಟದ ವಿರಾಮದ ಬಳಿಕ ಕೆಲಸದಲ್ಲಿ ತೊಡಗಿದ್ದಾಗ ಈ ಅವಘಡ ಸಂಭವಿಸಿದೆ. ಕಾರ್ಮಿಕರ ಜೊತೆಗೆ ಐದು ಹಿಟಾಚಿ ಯಂತ್ರಗಳು ಮತ್ತು ಇತರ ಡ್ರಿಲ್ಲಿಂಗ್ ಯಂತ್ರಗಳು ಸಹ ಅವಶೇಷಗಳ ಅಡಿಯಲ್ಲಿ ಸಿಲುಕಿವೆ. ಎರಡೂವರೆ ವರ್ಷಗಳಿಂದ ಈ ಕ್ವಾರಿಯಲ್ಲಿ ಕೆಲಸ ನಡೆಯುತ್ತಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ವಿಲಕ್ಷಣ ಘಟನೆ : ಕುತ್ತಿಗೆಗೆ 'ತ್ರಿಶೂಲ' ಚುಚ್ಚಿದ ಸ್ಥಿತಿಯಲ್ಲೇ 65 ಕಿಮೀ ಪ್ರಯಾಣಿಸಿ ಆಸ್ಪತ್ರೆಗೆ ಬಂದ ವ್ಯಕ್ತಿ, ಈತನನ್ನು ನೋಡಿ ವೈದ್ಯರೇ ಕಂಗಾಲು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3.3 / 5. ಒಟ್ಟು ವೋಟುಗಳು 3

ನಿಮ್ಮ ಕಾಮೆಂಟ್ ಬರೆಯಿರಿ

advertisement