ವಿದ್ವತ್‌ ಮೇಲೆ ಹಲ್ಲೆ ಪ್ರಕರಣ: ನಲಪಾಡ ವಿರುದ್ಧದ ವಿಚಾರಣೆ ಮುಂದುವರಿಕೆಗೆ ನ್ಯಾಯಾಲಯ ಸಮ್ಮತಿ

posted in: ರಾಜ್ಯ | 0

ಬೆಂಗಳೂರು: ಬೆಂಗಳೂರಿನ ಉದ್ಯಮಿಯೊಬ್ಬರ ಪುತ್ರ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಶಾಸಕ ಎನ್ ಎ ಹ್ಯಾರಿಸ್ ಪುತ್ರ ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್‌ ವಿರುದ್ಧದ ವಿಚಾರಣೆಗೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ತಡೆಯಾಜ್ಞೆ ವಿಸ್ತರಣೆಯಾಗಿಲ್ಲವಾದ್ದರಿಂದ ಬೆಂಗಳೂರಿನ ವಿಚಾರಣಾಧೀನ ನ್ಯಾಯಾಲಯವು ವಿಚಾರಣೆಗೆ ಸಮ್ಮತಿ ಸೂಚಿಸಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ.
ವರದಿ ಪ್ರಕಾರ, ಹಿರಿಯ ವಕೀಲ ಶ್ಯಾಂಸುಂದರ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರಾಗಿ ಮುಂದುವರಿಸಲು ಮತ್ತು ಪ್ರಕರಣದ ವಿಚಾರಣೆ ಮುಂದುವರಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು 66ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶರಾದ ಎಸ್‌ ನಟರಾಜ್‌ ಅವರು ಮಾನ್ಯ ಮಾಡಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಹಿರಿಯ ವಕೀಲ ಎಂ ಶ್ಯಾಂಸುಂದರ ಪ್ರಾಸಿಕ್ಯೂಷನ್‌ ಪರವಾಗಿ ಈ ನ್ಯಾಯಾಲಯದಲ್ಲಿ ವಾದ ಮಂಡಿಸಲು ಅರ್ಹರು. ಆರು ತಿಂಗಳಿಂದ ಪ್ರಕರಣಕ್ಕೆ ನೀಡಲಾಗಿದ್ದ ತಡೆಯಾಜ್ಞೆ ಮುಂದುವರಿಸಿಲ್ಲವಾದ್ದರಿಂದ ವಿಚಾರಣೆಗೆ ಅನುಮತಿಸಲಾಗಿದೆ” ಎಂದು ಕೋರ್ಟ್‌ ಆದೇಶದಲ್ಲಿ ಹೇಳಿದೆ.
ಮೊಹಮ್ಮದ್ ನಲಪಾಡ್‌ ಮತ್ತು ಅವರ ಸಹಚರರು ಬೆಂಗಳೂರಿನ ಯುಬಿ ಸಿಟಿಯ ಫರ್ಜಿ ಕೆಫೆಯಲ್ಲಿ 2018ರ ಫೆಬ್ರವರಿ 17ರ ರಾತ್ರಿ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದಾರೆ. 2018ರ ಜೂನ್‌ 14ರಂದು ಹೈಕೋರ್ಟ್ ಜಾಮೀನು ನೀಡುವಾಗ ಆರೋಪಿ ಬೆಂಗಳೂರು ನಗರದ ನ್ಯಾಯಾಲಯದ ವ್ಯಾಪ್ತಿ ಬಿಟ್ಟು ಹೊರಗೆ ಹೋಗಬಾರದು ಎಂಬ ಷರತ್ತನ್ನು ವಿಧಿಸಿತ್ತು. ನಂತರ ಮೆಕ್ಕಾಗೆ ತೆರಳಲು ಜಾಮೀನು ಷರತ್ತು ಸಡಿಲಿಕೆ ಮಾಡಿತ್ತು. ಆನಂತರ ಪ್ರಕರಣದ ವಿಚಾರಣೆಗೆ ತಡೆ ನೀಡಿತ್ತು. ತಡೆಯಾಜ್ಞೆಯನ್ನು ಆರು ತಿಂಗಳಿಂದ ವಿಸ್ತರಣೆ ಮಾಡದಿರುವುದರಿಂದ ನಲಪಾಡ್‌ ವಿಚಾರಣೆ ಎದುರಿಸಬೇಕಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಮಕ್ಕಳ ಜೊತೆ ಅಸಭ್ಯ ವರ್ತನೆ : ಚಾಲಕನನ್ನು ಕಂಬಕ್ಕೆ ಕಟ್ಟಿ ಧರ್ಮದೇಟು ನೀಡಿದ ಗ್ರಾಮಸ್ಥರು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement