ಶಾಲಾ ಶಿಕ್ಷಕರ ನೇಮಕಾತಿ: ಈ ವಾರವೇ 1:1 ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯದ ಶಾಲೆಗಳಿಗೆ 15,000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಈ ವಾರ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ ತಿಳಿಸಿದ್ದಾರೆ.
15,000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷೆ ನಡೆಸಿದ ನಂತರ ದಾಖಲಾತಿಯ ಪರಿಶೀಲನೆ ನಡೆದಿತ್ತು. ಈಗ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಈ ವಾರ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಶಿಕ್ಷಣ ಸಚಿವ ಬಿ.ಸಿ ನಾಗೇಶ ಅವರು, ಪದವೀಧರ ಪ್ರಾಥಮಿಕ ಶಾಲಾ‌ ಶಿಕ್ಷಕರ ನೇಮಕ ಸಂಬಂಧಿಸಿದ 1:1 ‘ತಾತ್ಕಾಲಿಕ ಆಯ್ಕೆ’ ಪಟ್ಟಿಯನ್ನು ಈ ವಾರ ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಸ್ಪರ್ಧಾತ್ಮಕ ಪರೀಕ್ಷೆ ನಂತರ ನೇಮಕಾತಿಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಲಾಗಿತ್ತು. 1:5 ಅನುಪಾತದಲ್ಲಿ ದಾಖಲಾತಿ ಪರಿಶೀಲನೆ ಮುಕ್ತಾಯಗೊಳಿಸಲಾಗಿತ್ತು. ಈಗ ಇದರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಈ ವಾರ ಪ್ರಕಟಿಸಲಾಗುತ್ತಿದೆ.

ಪ್ರಮುಖ ಸುದ್ದಿ :-   ರಾಜ್ಯದಲ್ಲಿ ತಾಪಮಾನ ಏರಿಕೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

4.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement