ಸೇಡಂ: ಬಿಜೆಪಿ ಮುಖಂಡನ ಬರ್ಬರ ಹತ್ಯೆ

posted in: ರಾಜ್ಯ | 0

 ಕಲಬುರಗಿ: ಅಂಗಡಿಯಲ್ಲಿ ಮಲಗಿದ್ದ ಬಿಜೆಪಿ ಮುಖಂಡನನ್ನು ದುಷ್ಕರ್ಮಿಗಳು ಮರ್ಮಾಂಗಕ್ಕೆ ಚಾಕು ಇರಿದು ಕುತ್ತಿಗೆಗೆ ಹಗ್ಗ ಬಿಗಿದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಮಲ್ಲಿಕಾರ್ಜುನ್ ಮುತ್ಯಾಲ (64) ಎಂದು ಗುರುತಿಸಲಾಗಿದೆ. ಬಿಜೆಪಿ ಮುಖಂಡರಾಗಿದ್ದ ಇವರು, ಪಟ್ಟಣದಲ್ಲಿ ಎಲೆಕ್ಟ್ರಾನಿಕ್ಸ್‌ ಅಂಗಡಿ (Electronic Store) ಹಾಗೂ ಟಿವಿ ಅಂಗಡಿ ಇತ್ತು ಕೆಲ ದಿನಗಳ ಹಿಂದೆ ಮಲ್ಲಿಕಾರ್ಜುನ್‍ರ ಅಂಗಡಿಗೆ ಕಳ್ಳರು ಕನ್ನ ಹಾಕಿದ್ದರು. ಹೀಗಾಗಿ ಅಂದಿನಿಂದ ರಾತ್ರಿ ಊಟ ಮಾಡಿಕೊಂಡು ಅವರು ಅಂಗಡಿಯಲ್ಲೇ ಮಲಗುತ್ತಿದ್ದರು ಎಂದು ಹೇಳಲಾಗಿದೆ.
ನಿನ್ನೆ ಸೋಮವಾರ ರಾತ್ರಿ ಕೂಡ ಮನೆಗೆ ಹೋಗಿ ಊಟ ಮಾಡಿ ಅಂಗಡಿಗೆ ಬಂದು ಮಲಗಿದ್ದಾರೆ. ಆದರೆ ನಿತ್ಯ ಬೆಳಗ್ಗೆ 8 ಗಂಟೆಗೆ ಮನೆಗೆ ಬರಬೇಕಾದ ಮಲ್ಲಿಕಾರ್ಜುನ ಅವರು ಮನೆಗೆ ಬಾರದಿದ್ದಾಗ ಪುತ್ರ ಅಂಗಡಿ ಹೋಗಿದ್ದಾರೆ. ಈ ವೇಳೆ ಅಂಗಡಿಯ ಹಿಂಬದಿಯಲ್ಲಿ ದುಷ್ಕರ್ಮಿಗಳು ಕೊಲೆ ಮಾಡಿರುವ ದೃಶ್ಯ ಕಂಡು ಬೆಚ್ಚಿಬಿದ್ದಿದ್ದಾರೆ.
ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮುತ್ಯಾಲ ಅವರ ಹತ್ಯೆ ಸುದ್ದಿ ತಿಳಿಯುತ್ತಲೇ ಸೇಡಂ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ್ ಸ್ಥಳಕ್ಕೆ ಭೇಟಿ ನೀಡಿದರು. ಘಟನಾ ಸ್ಥಳಕ್ಕೆ ಎಸ್ಪಿ ಈಶಾ ಪಂತ್ ಭೇಟಿ ನೀಡಿ ಸೇಡಂ ಡಿವೈಎಸ್ ಪಿ. ಬಸವರಾಜ್ ನೇತೃತ್ವದಲ್ಲಿ ತನಿಖಾ ತಂಡ ರಚಿಸಿರುವುದಾಗಿ ಹೇಳಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಇಂದಿನ ಪ್ರಮುಖ ಸುದ್ದಿ :-   ಕಿತ್ತೂರು ತಹಶೀಲ್ದಾರ ಲೋಕಾಯುಕ್ತ ಬಲೆಗೆ

 

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4.5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement