1ನೇ ತರಗತಿ ಪ್ರವೇಶಕ್ಕೆ 6 ವರ್ಷ ವಯೋಮಿತಿ ಕಡ್ಡಾಯ 2025-26ರಿಂದ ಜಾರಿ: ಶಿಕ್ಷಣ ಇಲಾಖೆ ತಿದ್ದುಪಡಿ ಆದೇಶ

ಬೆಂಗಳೂರು: 1ನೇ ತರಗತಿಗೆ ದಾಖಲು ಮಾಡಲು ಕನಿಷ್ಠ ವಯೋಮಿತಿಯನ್ನು 6 ವರ್ಷಕ್ಕೆ ಕಡ್ಡಾಯಗೊಳಿಸಿ ಹೊರಡಿಸಿದ್ದ ಆದೇಶ ಶೈಕ್ಷಣಿಕ ವರ್ಷ 2025-26 ಸಾಲಿನಿಂದ ಜಾರಿಗೆ ಬರಲಿದೆ ಎಂದು ಶಿಕ್ಷಣ ಇಲಾಖೆ ಮರು ತಿದ್ದುಪಡಿ ಆದೇಶ ಹೊರಡಿಸಿದೆ.
26-07-2022ರ ಆದೇಶದಲ್ಲಿ ರಾಜ್ಯ ಸರ್ಕಾರವು ಮುಂಬರುವ ಶೈಕ್ಷಣಿಕ ವರ್ಷದಿಂದಲೇ 1ನೇ ತರಗತಿಗೆ ಮಕ್ಕಳ ದಾಖಲಾತಿಗೆ 6 ವರ್ಷ ನಿಗದಿಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿತ್ತು. ಈ ಬಳಿಕ ಆದೇಶ ರದ್ದುಗೊಳಿಸಲಾಗಿತ್ತು. ಈಗ ತಿದ್ದುಪಡಿ ಆದೇಶ ಹೊರಡಿಸಿದ್ದು 2025-26ನೇ ಶೈಕ್ಷಣಿಕ ವರ್ಷದಿಂದ ಕಡ್ಡಾಯಗೊಳಿಸಿದೆ.
ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ತಿದ್ದುಪಡಿ ಆದೇಶ ಹೊರಡಿಸಿದ್ದು, ಅದರಲ್ಲಿ ಅದರಲ್ಲಿ 2025-26 ಸಾಲಿನಿಂದ 1ನೇ ತರಗತಿಗೆ ದಾಖಲಾತಿಗೆ (1st Standard School Admission) ಕನಿಷ್ಠ ವಯೋಮಿತಿಯನ್ನು 6 ವರ್ಷಕ್ಕೆ ಕಡ್ಡಾಯವನ್ನು ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದೆ.

4 / 5. 3

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement