ನಾನು ಮೋದಿ ಭಕ್ತ’ ಎಂದು ಬಹಿರಂಗವಾಗಿ ಘೋಷಣೆ ಮಾಡಿದ ನಟ ಅನಂತ ನಾಗ್: ಯಾಕೆಂದರೆ…

posted in: ರಾಜ್ಯ | 0

ಬೆಂಗಳೂರು: ‘ಪ್ರಧಾನಿ ನರೇಂದ್ರ ಮೋದಿ (Narendra Modi) ಎಂಟೂವರೆ ವರ್ಷಗಳಲ್ಲಿ ಒಂದು ದಿನವೂ ರಜೆ ತಗೆದುಕೊಳ್ಳದೇ ಕೆಲಸ ಮಾಡಿದ್ದಾರೆ, ಮಾಡುತ್ತಿದ್ದಾರೆ. ಅವರ ಕೆಲಸಗಳಿಗೆ ನಾನು ಮನಸೋತಿದ್ದೇನೆ. ಹೀಗಾಗಿ ನಾನು ಮೋದಿ ಭಕ್ತ ಎಂದು ಹೇಳಿಕೊಳ್ಳಲು ನನಗೆ ಯಾವುದೇ ಸಂಕೋಚವಿಲ್ಲ’ ಎಂದು ನಟ ಅನಂತ್ ನಾಗ್ ಬಹಿರಂಗವಾಗಿ ಘೋಷಿಸಿದ್ದಾರೆ.
ಕರ್ನಾಟಕ ಮಾಧ್ಯಮ ಅಕಾಡೆಮಿ ಬೆಂಗಳೂರು ಆಶ್ರಯದಲ್ಲಿ ‘ರಾಷ್ಟ್ರೀಯ ಪತ್ರಿಕಾ ದಿನಾಚರಣೆ’ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಅವರು ಈ ಮಾತುಗಳನ್ನು ಹೇಳಿದ್ದಾರೆ.
ರಾಷ್ಟ್ರ ನಿರ್ಮಾಣದಲ್ಲಿ ಮಾಧ್ಯಮಗಳ ಪಾತ್ರ ವಿಷಯವಾಗಿ ಮಾತನಾಡಿದ ಅನಂತ ನಾಗ್, ಈ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ಕೊಟ್ಟಾಗ ನಾನು ‘ಇದ್ಯಾವುದೋ ಮೋದಿ ತಂದಿರುವ ಹೊಸ ಕಾರ್ಯಕ್ರಮವೇ ಎಂದು ಯೋಚನೆಗೆ ಬಿದ್ದೆ’ ಎಂದು ಅನಂತ್​ನಾಗ್​ ಹೇಳಿದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಪತ್ರಿಕೆಗಳು ಹೀಗೆ ನಡೆಯಬೇಕು ಎಂದು ಸರ್ಕಾರಗಳು ತೀರ್ಮಾನ ಮಾಡಬೇಕಾ..? ಹೊಸ ಹೊಸ ಪೀಳಿಗೆಯ ಮಾಧ್ಯಮಗಳು ಹೇಗಿರಬೇಕು ಎಂದು ಅವರೇ ಚಿಂತಿಸಬೇಕು’ ಎಂದು ಅವರು ಹೇಳಿದರು.
ಬಿಜೆಪಿ ಪರವಾಗಿ ಈಗಾಗಲೇ ಅನಂತ್ ನಾಗ್ (Anant Nag) ಸಾಕಷ್ಟು ಮಾತುಗಳನ್ನು ಆಡಿದ್ದಾರೆ ಮೋದಿ ಸಾಧನೆಯನ್ನು ಹಲವು ಬಾರಿ ಕೊಂಡಾಡಿದ್ದಾರೆ. ಆದರೆ ಮೊದಲ ಬಾರಿಗೆ ತಾವು ಮೋದಿ ಭಕ್ತ ಎಂದು ಅವರು ಬಹಿರಂಗವಾಗಿ ಹೇಳಿಕೊಂಡಿದ್ದಾರೆ.
ಕಾರ್ಯಕ್ರಮದಲ್ಲಿ ನಟ ಅನಂತನಾಗ್ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಭಾಗಿಯಾಗಿದ್ದರು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಕರ್ನಾಟಕ ಗಡಿ-ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ನ್ಯಾ.ಶಿವರಾಜ ಪಾಟೀಲ ನೇಮಕ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4.3 / 5. ಒಟ್ಟು ವೋಟುಗಳು 3

ನಿಮ್ಮ ಕಾಮೆಂಟ್ ಬರೆಯಿರಿ

advertisement