ಪರೇಶ ಮೇಸ್ತ ಸಾವು ಪ್ರಕರಣ: ಆಕ್ಷೇಪಣೆ ಸಲ್ಲಿಸುವುದಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ

ಹೊನ್ನಾವರ: ಪರೇಶ ಮೇಸ್ತ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (CBI) ಹೊನ್ನಾವರ ನ್ಯಾಯಾಲಯಕ್ಕೆ ಸಲ್ಲಿಸಿರುವ ʼಬಿʼ ರಿಪೋರ್ಟ್‌ಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿ ಪರೇಶ ಮೇಸ್ತಾ ತಂದೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಪರೇಶ್ ಮೇಸ್ತ ಸಾವಿನ ಪ್ರಕರಣದಲ್ಲಿ ಸಿಬಿಐ ತನಿಖಾ ತಂಡವು ಅಕ್ಟೋಬರ್ 6ರಂದು ಹೊನ್ನಾವರದ ನ್ಯಾಯಾಲಯಕ್ಕೆ ʼಬಿ‌ʼ ರಿಪೋರ್ಟ್ ಸಲ್ಲಿಸಿದೆ. ಇದನ್ನು ಆಕ್ಷೇಪಿಸಲು ಪರೇಶ ಮೇಸ್ತಾ ತಂದೆ ಕಮಲಾಕರ ಮೇಸ್ತಾ ಅವರು ಹೊನ್ನಾವರದ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಹಾಜರಾಗಿ ಆಕ್ಷೇಪಣಾ ಅರ್ಜಿ ಸಲ್ಲಿಕೆ ಮಾಡಲು ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯವು ಪ್ರಕರಣವನ್ನು ಡಿಸೆಂಬರ್‌ 21ಕ್ಕೆ ಮುಂದೂಡಿದೆ.

ಕಳೆದ ಅಕ್ಟೋಬರ್ 6 ರಂದು ನ್ಯಾಯಾಲಯಕ್ಕೆ ಬಿ ರಿಪೋರ್ಟ್‌ ಸಲ್ಲಿಸಿದ್ದ ಸಿಬಿಐ ತನಿಖಾ ತಂಡ, ಪರೇಶ್ ಮೇಸ್ತಾ ಕೊಲೆ ನಡೆದಿಲ್ಲ. ಅದು ಆಕಸ್ಮಿಕವಾಗಿ ಸಾವು ಸಂಭವಿಸಿದೆ ಎಂದು ನ್ಯಾಯಾಲಯಕ್ಕೆ ವರದಿ ನೀಡಿತ್ತು. ಇದನ್ನು ಈಗ ಪರೇಶ ಮೇಸ್ತ ಅವರ ತಂದೆ ಕಮಲಾಕರ ಮೇಸ್ತ ಅವರು ನ್ಯಾಯಾಲಯದಲ್ಲಿ ಆಕ್ಷೇಪಣೆ ಸಲ್ಲಿಸಲು ಅರ್ಜಿ ಸಲ್ಲಿಸಿದ್ದಾರೆ.
ಕಮಲಾಕರ ಮೇಸ್ತ ಪರವಾಗಿ ವಕೀಲರಾದ ನಾಗರಾಜ ನಾಯಕ ಹಾಗೂ ಎಸ್‌.ಜಿ.ಹೆಗಡೆ ದುಗ್ಗೂರು ಅವರು ಹಾಜರಾಗಿದ್ದರು.

ಪ್ರಮುಖ ಸುದ್ದಿ :-   ಏಪ್ರಿಲ್‌ 20ರಂದು ಕರ್ನಾಟಕಕ್ಕೆ ಪ್ರಧಾನಿ ಮೋದಿ, ಎರಡು ಚುನಾವಣಾ ಸಮಾವೇಶದಲ್ಲಿ ಭಾಗಿ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement