ಬಿಜೆಪಿ ಪರವಾಗಿ ಕೆಲಸ ಮಾಡಿದವರನ್ನಿಟ್ಟುಕೊಂಡು ಹೋದರೆ ಚುನಾವಣೆಯಲ್ಲಿ ಗೆಲುವು ಕಷ್ಟವಾಗಬಹುದು : ಸಿದ್ದರಾಮಯ್ಯಗೆ ಮುನಿಯಪ್ಪ ಎಚ್ಚರಿಕೆ

ಬೆಂಗಳೂರು: ಕಳೆದ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಕೆಲಸ ಮಾಡಿದವರ ಮುಂದಾಳತ್ವದಲ್ಲಿ ಚುನಾವಣೆ ನಡೆಸಿದರೆ ಗೆಲವು ಕಷ್ಟವಾಗಬಹುದು ಎಂದು ಕಾಂಗ್ರೆಸ್ ಹಿರಿಯ ನಾಯಕ ಕೆ.ಎಚ್. ಮುನಿಯಪ್ಪ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರ ಜಿಲ್ಲಾ ಕಾಂಗ್ರೆಸ್ಸಿನಲ್ಲಿರುವ ಸಮಸ್ಯೆಗಳನ್ನು ಸರಿಪಡಿಸಿಕೊಂಡು ಬಳಿಕ ಸ್ಪರ್ಧೆ ಮಾಡುವಂತೆ ಸಲಹೆ ನೀಡಿದ್ದಾರೆ.
ಸಿದ್ಧರಾಮಯ್ಯ ಪ್ರಭಾವಿ ನಾಯಕರು, ರಾಜ್ಯಾದ್ಯಂತ ಪ್ರವಾಸ ಮಾಡಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಅಧಿಕಾರಕ್ಕೆ ತರುವ ಜವಾಬ್ದಾರಿ ಅವರ ಮೇಲಿದೆ. ಹೀಗಾಗಿ ಅವರು ಸ್ಪರ್ಧಿಸುವ ಕ್ಷೇತ್ರ ಸುರಕ್ಷಿತವಾಗಿರಬೇಕು ಎಂದು ಅವರು ಹೇಳಿದ್ದಾರೆ.

ಸಿದ್ಧರಾಮಯ್ಯ ಅವರಿಗೆ ಕೋಲಾರದಲ್ಲಿ ಸವಾಲಿದೆ ಎಂಬುದು ಸರಿಯಲ್ಲ. ಎಲ್ಲರೂ ಒಟ್ಟಾಗಿ ಕೆಲಸ ಮಾಡಿದರೆ ಗೆಲುವು ಕಷ್ಟವಲ್ಲ. ಕಳೆದ ಆದರೆ ಕಳೆದ ಬಾರಿ ಚುನಾವಣೆಯಲ್ಲಿ ಕೆಲವರು ಬಿಜೆಪಿ ಪಕ್ಷದ ಪರವಾಗಿ ಕೆಲಸ ಮಾಡಿದ್ದಾರೆ. ಅವರ ಮುಂದಾಳತ್ವದಲ್ಲಿ ಈ ಬಾರಿ ಚುನಾವಣೆಗೆ ಹೋದರೆ ಜನರು ಗೊಂದಲಕ್ಕೆ ಒಳಗಾಗುತ್ತಾರೆ ಎಂದು ಹೇಳುತ್ತಿದ್ದೇನೆ ಎಂದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಐದು ಲಕ್ಷ ಜನ ಕಾಂಗ್ರೆಸ್ಸಿಗೆ ಮತ ಹಾಕಿದ್ದಾರೆ. ಪಕ್ಷ ನಿಷ್ಠ ನಾಯಕರ ನೇತೃತ್ವದಲ್ಲಿ ಚುನಾವಣೆಗೆ ಹೋದರೆ ಅನುಕೂಲವಾಗಲಿದೆ. ಅದನ್ನು ಬಿಟ್ಟು ಬಿಜೆಪಿ ಪರವಾಗಿ ಕೆಲಸ ಮಾಡಿದವರನ್ನು ಮುಂದಿಟ್ಟುಕೊಂಡು ಹೋದರೆ ಕಷ್ಟವಾಗಬಹುದು ಎಂದರು.
ಸಿದ್ದರಾಮಯ್ಯನವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸಲಿದ್ದಾರೆ ಎಂಬ ಹೇಳಲಾಗುತ್ತುದೆ. ಈ ಹಿನ್ನೆಲೆಯಲ್ಲಿ ಮುನಿಯಪ್ಪ ಅವರ ಅಭಿಪ್ರಾಯ ಮಹತ್ವ ಪಡೆದಿದೆ.

ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement