15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ಇಂದು ಸಂಜೆ 6ಕ್ಕೆ ‘ತಾತ್ಕಾಲಿಕ ಆಯ್ಕೆ’ ಪಟ್ಟಿ ಪ್ರಕಟ

ಬೆಂಗಳೂರು: 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸಂಬಂಧಿಸಿದಂತೆ ನವೆಂಬರ್‌ 18, ಶುಕ್ರವಾರ ಸಂಜೆ 6 ಗಂಟೆ ನಂತರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪ್ರಕಟವಾಗಲಿದೆ.
ಈ ಕುರಿತು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವರಾದ ಬಿ.ಸಿ. ನಾಗೇಶ್ ಅವರು, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಕ್ಕೆ ಸಂಬಂಧಿಸಿದ 1:1 ‘ತಾತ್ಕಾಲಿಕ ಆಯ್ಕೆ’ ಪಟ್ಟಿಯನ್ನು ನವೆಂಬರ್‌18ರಂದು ಸಂಜೆ 6 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ನವೆಂಬರ್ 15, 2022ರಂದು ಶಿಕ್ಷಣ ಸಚಿವರು ಟ್ವಿಟ್ಟರ್ ನಲ್ಲಿ ಪದವೀಧರ ಪ್ರಾಥಮಿಕ ಶಾಲಾ‌ ಶಿಕ್ಷಕರ ನೇಮಕಕ್ಕೆ ಸಂಬಂಧಿಸಿ 1:1 ‘ತಾತ್ಕಾಲಿಕ ಆಯ್ಕೆ’ ಪಟ್ಟಿಯನ್ನು ಈ ವಾರ ಪ್ರಕಟಿಸಲಾಗುವುದು ಎಂದು ತಿಳಿಸಿದ್ದರು.

ಈಗ ಗುರುವಾರ ಈ ಕುರಿತು ಟ್ವೀಟ್‌ ಮಾಡಿರುವ ಸಚಿವರು ನವೆಂಬರ್‌18ರಂದು ಸಂಜೆ 6 ಗಂಟೆ ನಂತರ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸುವುದಾಗಿ ಮಾಹಿತಿ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement