ಇಂದು ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ನಮ್ಮ ಪಕ್ಷದ ಜ್ಯೋತಿಷಿ ರೇವಣ್ಣಬೇಡ ಅಂದ್ರು : ಕುಮಾರಸ್ವಾಮಿ

posted in: ರಾಜ್ಯ | 0

ಮೈಸೂರು: ಮುಂಬರುವ ವಿಧಾನಸಭೆ ಚುನಾವಣೆ ಗೆ ಜೆಡಿಎಸ್ ಪಕ್ಷದಿಂದ ಕಣಕ್ಕಿಳಿಯುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮುಂದಾಗಿದ್ದರೂ ಪಟ್ಟಿ ಬಿಡುಗಡೆಗೆ ಕುಮಾರಸ್ವಾಮಿ ಸಹೋದರ ಹಾಗೂ ಮಾಜಿ ಸಚಿವ ಎಚ್​.ಡಿ.ರೇವಣ್ಣ ಈಗ ಬೇಡ ಎಂದು ಹೇಳಿದ್ದರಿಂದ ಪಟ್ಟಿ ಬಿಡುಗಡೆ ಮುಂದಕ್ಕೆ ಹೋಗಿದೆ.
ರೇವಣ್ಣ ನಮ್ಮ ಪಕ್ಷದ ಜ್ಯೋತಿಷಿ, ಅವರ ಮಾತಿನಂತೆ ಇಂದು ಜೆಡಿಎಸ್​ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿಲ್ಲ. ಇಂದು ಸಮಯ ಪ್ರಸಕ್ತವಾಗಿಲ್ಲ ಎಂದು ಅವರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ದಿನಾಂಕವನ್ನು ಮುಂದಕ್ಕೆ ಹಾಕುವಂತೆ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.
ಮುಳಬಾಗಿಲಿನಲ್ಲಿ ಇಂದು(ಶುಕ್ರವಾರ) ಆರಂಭವಾಗಲಿರುವ ಪಂಚರತ್ನ ಯಾತ್ರೆಗೂ ಮೊದಲು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಅವರು ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇಂದು ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಪ್ರಸಕ್ತ ಸಮಯವಿಲ್ಲ ಎಂದು ಹೇಳಿ ಎಚ್.ಡಿ.ರೇವಣ್ಣ ತಕರಾರು ತೆಗೆದಿದ್ದಾರೆ ಎಂದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಚುನಾವಣೆಗೆ ಕಣಕ್ಕಿಳಿಯುವ ಜೆಡಿಎಸ್‌ನ 100 ಅಭ್ಯರ್ಥಿಗಳ ಪಟ್ಟಿಯೇನೋ ಸಿದ್ಧವಾಗಿದೆ. ಆದರೆ ಸದ್ಯ ಪಟ್ಟಿ ಬಿಡುಗಡೆ ಬೇಡವೆಂಬ ಅಭಪ್ರಾಯ ಬಂದ ಹಿನ್ನೆಲೆ ಮುಂದಿನ ದಿನಗಳಲ್ಲಿ ಸೂಕ್ತ ಸಮಯ ನೋಡಿಕೊಂಡು ಬಿಡುಗಡೆ ಮಾಡುತ್ತೇವೆ. ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಪಕ್ಷದ ವರಿಷ್ಠ ಎಚ್‌.ಡಿ‌ ದೇವೇಗೌಡ ನೇತೃತ್ವದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಇಂದಿನಿಂದ 36 ದಿನಗಳ ಕಾಲ‌ ಮೊದಲ‌ ಹಂತದ ಪಂಚರತ್ನ ಯಾತ್ರೆ ಆರಂಭವಾಗಲಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಪಂಚರತ್ನ ಸಮಾರೋಪ ನಡೆಯಲಿದೆ. ಮಾರ್ಚ್​ನಲ್ಲಿ ಬೃಹತ್‌ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು ಎಂದ ಅವರು ರಾಜಕಾರಣದಲ್ಲಿ ಮುಂದಿನ ದಿನಗಳಲ್ಲಿ ರಾಜಕೀಯ ಸಮೀಕರಣ ಆಗಬಹುದು. ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಜನತಾ ಪರಿವಾರದಿಂದ ಹೋದವರು ಮತ್ತೆ ಪಕ್ಷಕ್ಕೆ ಬರಬಹುದು. ಬಂದಾಗ ಏನು ತೀರ್ಮಾನ ಮಾಡಬೇಕು ಎಂದು ನೋಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಮಂಗಳೂರು: ಇಸ್ಲಾಂಗೆ ಮತಾಂತರಿಸಿ ಲೈಂಗಿಕ ಕಿರುಕುಳ-ಯುವತಿಯಿಂದ ದೂರು ದಾಖಲು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement