ದತ್ತಪೀಠಕ್ಕೆ ಎಂಟು ಸದಸ್ಯರ ಆಡಳಿತ ಮಂಡಳಿ ರಚನೆ: ಅರ್ಚಕರ ನೇಮಕಕ್ಕೂ ಅಧಿಕಾರ

ಚಿಕ್ಕಮಗಳೂರು : ಚಿಕ್ಕಮಗಳೂರು ತಾಲೂಕಿನ ದತ್ತಪೀಠಕ್ಕೆ ಸರ್ಕಾರ ಎಂಟು ಸದಸ್ಯರ ಆಡಳಿತ ಮಂಡಳಿ ರಚನೆ ಮಾಡಿ ಆದೇಶ ಹೊರಡಿಸಿದೆ.
ಆಡಳಿತ ಮಂಡಳಿಗೆ ದತ್ತಪೀಠಕ್ಕೆ ಅರ್ಚಕರ ನೇಮಕ ಕುರಿತಂತೆ ನಿರ್ಧಾರ ಮಾಡುವ ಅಧಿಕಾರ ನೀಡಲಾಗಿದೆ. ರಾಜ್ಯ ಸರ್ಕಾರ ಇಂದು ಎಂಟು ಜನರ ಆಡಳಿತ ಮಂಡಳಿ ಸದಸ್ಯರನ್ನ ನೇಮಕ ಮಾಡಿದ್ದು, ಇದರಲ್ಲಿ ಇಬ್ಬರು ಮಹಿಳೆಯರು, ಒಬ್ಬರು ಮುಸ್ಲಿಂ ವ್ಯಕ್ತಿ ಸಹ ಇದ್ದಾರೆ. ಈ ಸಮಿತಿ ಶೀಘ್ರದಲ್ಲೇ ಸಭೆ ಸೇರಿ ದತ್ತಪೀಠದಲ್ಲಿ ಪೂಜೆ ಹೇಗಿರಬೇಕು? ಅಲ್ಲಿನ ಆಡಳಿತ ವ್ಯವಸ್ಥೆ ಹೇಗಿರಬೇಕು? ವಾರದಲ್ಲಿ ಯಾರು ಎಷ್ಟು ದಿನ ಪೂಜೆ ಮಾಡಬೇಕು ಎಂಬ ಅಂಶಗಳ ಕುರಿತು ಅಂತಿಮ ಪಟ್ಟಿ ತಯಾರಿಸಿ ಸರ್ಕಾರಕ್ಕೆ ರವಾನಿಸಲಿದೆ.ಸರ್ಕಾರ ಆಡಳಿತ ಮಂಡಳಿ ನೀಡುವ ಪಟ್ಟಿಗೆ ಅಂಕಿತ ಹಾಕಿದರೆ ದತ್ತಪೀಠದಲ್ಲಿ ಇನ್ನು ಮುಂದೆ ಹಿಂದೂ ಅರ್ಚಕರು ಪೂಜೆ ಮಾಡಲಿದ್ದಾರೆ.

ಹಿಂದೂ ಅರ್ಚಕರ ನೇಮಕಕ್ಕೆ ಹಿಂದೂ ಸಂಘಟನೆಗಳ ದಶಕಗಳ ಹೋರಾಟಕ್ಕೆ ಫಲ ಸಿಕ್ಕಂತಾಗಲಿದೆ. ಕಳೆದ ಫೆಬ್ರವರಿಯಲ್ಲಿ ರಾಜ್ಯ ಸರ್ಕಾರದ ಸಚಿವ ಸಂಪುಟದ ಉಪಸಮಿತಿ ಕೂಡ ಚಿಕ್ಕಮಗಳೂರಿಗೆ ಭೇಟಿ ನೀಡಿ, ಪೂಜಾ ಪದ್ಧತಿಯ ಬಗ್ಗೆ ಜನರ ಅಭಿಪ್ರಾಯ ಸಂಗ್ರಹಿಸಿ ಸರ್ಕಾರಕ್ಕೆ ವರದಿ ನೀಡಿತ್ತು. ಆ ವರದಿ ಹಿನ್ನೆಲೆಯಲ್ಲಿ ಇಂದು ರಾಜ್ಯ ಸರ್ಕಾರ ದತ್ತಪೀಠದ ವಿಚಾರದಲ್ಲಿ ಮಹತ್ವದ ಆದೇಶ ಹೊರಡಿಸಿದೆ. ಒಂದು ಸಮಯದಲ್ಲಿ ಭಾವೈಕ್ಯತಾ ಕ್ಷೇತ್ರವಾಗಿದ್ದ ದತ್ತಾತ್ರೇಯ ಪೀಠ-ಬಾಬು ಬುಡನ್‌ಗಿರಿ ನಂತರ ವಿವಾದದ ಕೇಂದ್ರವಾಗಿತ್ತು.

ಪ್ರಮುಖ ಸುದ್ದಿ :-   ಶ್ರೀರಂಗಪಟ್ಟಣ: ಐಸ್‌ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳ ಸಾವು

ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು, ದತ್ತಪೀಠಕ್ಕೆ ವ್ಯವಸ್ಥಾಪನಾ ಸಮಿತಿ ನೇಮಕ ಮಾಡಿರುವುದು ಹಿಂದೂಗಳ ಐದು ದಶಕಗಳ ಹೋರಾಟಕ್ಕೆ ಸಂದ ಜಯವಾಗಿದೆ. ಹಿಂದೂಗಳ ಪವಿತ್ರ ಕ್ಷೇತ್ರ ದತ್ತಪೀಠಕ್ಕೆ ಆಡಳಿತ ಮಂಡಳಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಧನ್ಯವಾದಗಳು ಹಾಗೂ ಶ್ರೀ ಗುರು ದತ್ತಾತ್ರೇಯರ ಪುಣ್ಯಸ್ಥಳದ ರಕ್ಷಣೆಗಾಗಿ ದಶಕಗಳಿಂದ ಹೋರಾಟಕ್ಕೆ ಕೈಜೋಡಿಸಿದ ಎಲ್ಲಾ ಕಾರ್ಯಕರ್ತ ಬಂಧುಗಳಿಗೆ, ಭಕ್ತಾದಿಗಳಿಗೆ ಶತ ಶತ ನಮನಗಳು ಎಂದು ಹೇಳಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement