ನಾಳೆ ಬ್ಯಾಂಕ್ ಮುಷ್ಕರದ ಎಚ್ಚರಿಕೆ : ಕೆಲ ಬ್ಯಾಂಕ್‌ಗಳ ಸೇವೆಗಳಲ್ಲಿ ವ್ಯತ್ಯಯವಾಗಬಹುದು

ನವದೆಹಲಿ: ತಮ್ಮ ಬೇಡಿಕೆಗಳನ್ನು ಒತ್ತಾಯಿಸಿ ನವೆಂಬರ್ 19 ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದು, ಹೀಗಾಗಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳ ಕೆಲ ಕಾರ್ಯಾಚರಣೆಗೆ ಅಡ್ಡಿಯಾಗುವ ಸಾಧ್ಯತೆ ಇದೆ.
ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳ ಕೆಲ ಕಾರ್ಯಾಚರಣೆಗೆ ಅಡ್ಡಿಯಾಗುವ ಸಾಧ್ಯತೆ ಇದೆ. ಆದರೆ ಬ್ಯಾಂಕ್‌ ಅಧಿಕಾರಿಗಳು ಈ ಮುಷ್ಕರದಲ್ಲಿ ಭಾಗಿಯಾಗುವುದಿಲ್ಲವಾದರೂ ನಗದು ಠೇವಣಿ ಇರಿಸುವಿಕೆ, ಚೆಕ್​ ಕ್ಲಿಯರೆನ್ಸ್, ವಿತ್​​ಡ್ರಾ, ಎಟಿಎಂ ಸೇರಿದಂತೆ ಹಲವು ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಮಧ್ಯೆ ಸಾರ್ವಜನಿಕ ವಲಯದ ಬ್ಯಾಂಕ್‌ಗಳ ನೌಕರರ ಸಂಘಟನೆಗಳು ಮುಷ್ಕರ ತಪ್ಪಿಸಲು ಮಾತುಕತೆಯ ಭಾಗವಾಗಿ ನವೆಂಬರ್ 18 ರಂದು ಮುಖ್ಯ ಕಾರ್ಮಿಕ ಆಯುಕ್ತರನ್ನು (ಸಿಎಲ್‌ಸಿ) ಭೇಟಿಯಾಗಲಿವೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಬ್ಯಾಂಕ್​ನ ಹಲವು ಸಿಬ್ಬಂದಿ ಮುಷ್ಕರದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇರುವುದರಿಂದ ಬ್ಯಾಂಕ್‌ನ ಸಾಮಾನ್ಯ ಕಾರ್ಯನಿರ್ವಹಣೆಗೆ ತೊಡಕಾಗಬಹುದು ಎಂದು ಬ್ಯಾಂಕ್​ ಆಫ್​ ಬರೋಡ, ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ಪ್ರಕಟಣೆ ಮೂಲಕ ಈಗಾಗಲೇ ಗ್ರಾಹಕರಿಗೆ ಸಂದೇಶ ಕಳುಹಿಸಿವೆ. ಅನೇಕ ಬ್ಯಾಂಕಿಂಗ್ ಚಟುವಟಿಕೆಗಳನ್ನು ಹೊರಗುತ್ತಿಗೆ ನೀಡಲಾಗುತ್ತಿದೆ. ಈ ಮೂಲಕ ಗ್ರಾಹಕರ ಹಣವನ್ನು ಅಪಾಯಕ್ಕೆ ಸಿಲುಕಿಸಲಾಗುತ್ತಿದೆ ಎಂದು ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟ (AIBEA)ದ ಪ್ರಧಾನ ಕಾರ್ಯದರ್ಶಿ ಸಿ.ಎಚ್. ವೆಂಕಟಾಚಲಂ ಹೇಳಿದ್ದಾರೆ. ಅನೇಕ ಬ್ಯಾಂಕ್​ಗಳು ಅನೇಕ ಬ್ಯಾಂಕಿಂಗ್ ಚಟುವಟಿಕೆಗಳನ್ನು ಹೊರಗುತ್ತಿಗೆ ನೀಡುತ್ತಿವೆ ಎಂದು ಅವರು ಹೇಳಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ಛತ್ತೀಸ್‌ಗಢದ ಬಿಜಾಪುರದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ 4 ನಕ್ಸಲರು ಹತ

ಕೆಲವು ಬ್ಯಾಂಕ್​ಗಳು ‘ಕೈಗಾರಿಕಾ ವಿವಾದ (ತಿದ್ದುಪಡಿ) ಕಾಯ್ದೆ’ಯನ್ನು ಉಲ್ಲಂಘಿಸುತ್ತಿವೆ. ಅಧಿಕಾರಿಗಳು ಮಧ್ಯಪ್ರವೇಶಿಸಿದರೂ ಆಡಳಿತ ಮಂಡಳಿ ಅವರ ಸಲಹೆಯನ್ನು ನಿರ್ಲಕ್ಷಿಸಿ, ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ ಬಲವಂತವಾಗಿ ನೌಕರರನ್ನು ವರ್ಗಾವಣೆ ಮಾಡಿದೆ ಎಂದೂ ಅವರು ಆರೋಪಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಬ್ಯಾಂಕ್ ಉದ್ಯೋಗಿಗಳ ಮೇಲೆ ದಾಳಿಗಳು ಹೆಚ್ಚುತ್ತಿವೆ. ಇದನ್ನು ನಾವು ಪ್ರತಿಭಟಿಸಬೇಕಿದೆ. ಒಟ್ಟಾರೆಯಾಗಿ ಈ ಉದ್ದೇಶಿತ ದಾಳಿಗಳನ್ನು ತಡೆಯಲು ಬ್ಯಾಂಕ್ ಉದ್ಯೋಗಿಗಳ ಸಂಘದ ಮಟ್ಟದಲ್ಲಿ ನಾವು ಪ್ರಯತ್ನಿಸಬೇಕಿದೆ ಎಂದು ಅವರು ಕರೆ ನೀಡಿದ್ದಾರೆ.
ಖಾಸಗಿ ಬ್ಯಾಂಕ್​ಗಳು ಎಂದಿನಂತಯೇ ಕಾರ್ಯಾಚರಿಸಲಿವೆ ಎಂದು ಮೂಲಗಳು ಹೇಳಿವೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement