ಬೆಂಗಳೂರಿನ ಚಿಲುಮೆ ಕಚೇರಿ ಮೇಲೆ ಪೊಲೀಸರ ದಾಳಿ; ನಾಲ್ವರು ವಶಕ್ಕೆ..?

posted in: ರಾಜ್ಯ | 0

ಬೆಂಗಳೂರು: ಬೆಂಗಳೂರಿನಲ್ಲಿ ಮತದಾರರ ವೈಯಕ್ತಿಕ ಮಾಹಿತಿ ಕಳುವು ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆ ಮೇಲೆ ಪೊಲೀಸರು ಶುಕ್ರವಾರ ದಾಳಿ ಮಾಡಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಚಿಲುಮೆ ಕಚೇರಿ ಮೇಲೆ ಹಲಸೂರು ಗೇಟ್​ ಪೊಲೀಸರು ದಾಳಿ ಮಾಡಿದ್ದು, ಪರಿಶೀಲನೆ ನಡೆಸಿದ್ದಾರೆ. ಈಗಾಗಲೇ ನಾಲ್ವರನ್ನು ವಶಕ್ಕೆ ಪಡೆದುಕೊಂಡು ಈ ಸಂಬಂಧ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ ಮತದಾರರ ವೈಯಕ್ತಿಕ ಮಾಹಿತಿ ಕಳ್ಳತನ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆ ವಿರುದ್ಧ ಹಲಸೂರು ಗೇಟ್‌ ಮತ್ತು ಕಾಡುಗೋಡಿ ಪೊಲೀಸ್‌ ಠಾಣೆಗಳಲ್ಲಿ ಬಿಬಿಎಂಪಿ ದೂರು ದಾಖಲಿಸಿತ್ತು. ಈ ಹಿನ್ನೆಲೆಯಲ್ಲಿ ಹಲಸೂರು ಗೇಟ್ ಠಾಣೆ​ ಇನ್ಸ್​​ಪೆಕ್ಟರ್​​ ಜಗದೀಶ್​ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ.
ಷರತ್ತುಗಳನ್ನು ಉಲ್ಲಂಘಿಸಿದ್ದರಿಂದ ಚಿಲುಮೆ ಸಂಸ್ಥೆಗೆ ನೀಡಿದ್ದ ಅನುಮತಿಯನ್ನು ಬಿಬಿಎಂಪಿ ರದ್ದುಪಡಿಸಿತ್ತು. ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಈ ಸಂಸ್ಥೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಅವರು ಹಲಸೂರುಗೇಟ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.
2018ರಿಂದ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ವೋಟರ್ಸ್‌ ಐಡಿ ಜಾಗೃತಿ ಬಗ್ಗೆ ಚಿಲುಮೆ ಸಂಸ್ಥೆಗೆ ಅನುಮತಿ ನೀಡಲಾಗಿತ್ತು. ಈ ವರ್ಷವೂ ಸಹ ಜಾಗೃತಿ ಕಾರ್ಯಕ್ರಮಕ್ಕೆ ಸಹ ಕೆಲವು ನಿರ್ಬಂಧನೆಯೊಂದಿಗೆ ಒಪ್ಪಿಗೆ ಸೂಚಿಸಲಾಗಿತ್ತು. ಈಗ ಷರತ್ತು ಉಲ್ಲಂಘನೆ ಆರೋಪದ ದೂರು ಬಂದ ನಂತರ ಚಿಲುಮೆ ಸಂಸ್ಥೆ ವಿರುದ್ಧ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮಿಗಳ ಅಂತ್ಯಕ್ರಿಯೆ

ಕಾಂಗ್ರೆಸ್‌ನಿಂದ ಆರೋಪ
ಮತದಾರರ ಮಾಹಿತಿಯನ್ನು ಸರ್ಕಾರ ಕಳ್ಳತನ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಗುರುವಾರ ಾರೋಪಿಸಿದ್ದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್​ದೀಪ್​ ಸುರ್ಜೇವಾಲಾ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ಚುನಾವಣೆ ಸಂದರ್ಭದಲ್ಲಿ ಮತದಾರರ ವೈಯಕ್ತಿಕ ಮಾಹಿತಿ ಕಳ್ಳತನ ಮಾಡುತ್ತಿದೆ ಎಂದು ಆರೋಪಿಸಿದ್ದರು. ಮುಖ್ಯಮಂತ್ರಿ ಬೊಮ್ಮಾಯಿ ಮತದಾರರ ದತ್ತಾಂಶ ಕಳ್ಳತನದ ಜವಾಬ್ದಾರಿ ಹೊರಬೇಕು ಎಂದು ಹೇಳಿದ್ದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement