ಆಸ್ಪತ್ರೆಯ ಐಸಿಯುನಲ್ಲಿ ಮುಕ್ತವಾಗಿ ಓಡಾಡಿದ ಹಸು : ವೀಡಿಯೊ ವೈರಲ್‌ ಆದ ನಂತರ ಮೂವರು ಕೆಲಸದಿಂದ ವಜಾ | ವೀಕ್ಷಿಸಿ

ಆಘಾತಕಾರಿ ಘಟನೆಯೊಂದರಲ್ಲಿ, ಶುಕ್ರವಾರ ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯ ಆಸ್ಪತ್ರೆಯೊಂದರ ತೀವ್ರ ನಿಗಾ ಘಟಕಕ್ಕೆ (ಐಸಿಯು) ಹಸುವೊಂದು ಪ್ರವೇಶಿಸಿದೆ. ಆಸ್ಪತ್ರೆ ಆವರಣದಲ್ಲಿದ್ದ ಕಸದ ತೊಟ್ಟಿಗಳಲ್ಲಿರುವ ವೈದ್ಯಕೀಯ ತ್ಯಾಜ್ಯವನ್ನು ಹಸು ತಿಂದು ಸ್ವಚ್ಛಂದವಾಗಿ ತಿರುಗಾಡುತ್ತಿರುವುದು ಕಂಡುಬಂದಿದೆ.
ಆಸ್ಪತ್ರೆಯಲ್ಲಿ ದಿನವಿಡೀ ಭದ್ರತಾ ಸಿಬ್ಬಂದಿ ನಿಯೋಜಿಸಿದ್ದರೂ, ಹಸುವನ್ನು ಆಸ್ಪತ್ರೆಯಿಂದ ಹೊರಗೆ ಕಳುಹಿಸಲು ಯಾರೂ ಇರಲಿಲ್ಲ. ಆಸ್ಪತ್ರೆಯಲ್ಲಿ ಇಬ್ಬರು ಹಸು ಹಿಡಿಯುವವರನ್ನು ನೇಮಿಸಲಾಗಿದೆ ಆದರೆ ಘಟನೆ ನಡೆದಾಗ ಅವರೂ ಇರಲಿಲ್ಲ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಒಬ್ಬ ಸೆಕ್ಯೂರಿಟಿ ಗಾರ್ಡ್ ಮತ್ತು ಇತರ ಇಬ್ಬರು ಸಿಬ್ಬಂದಿಯನ್ನು ಸೇವೆಯಿಂದ ತೆಗೆದುಹಾಕಲಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಜಿಲ್ಲಾ ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ ರಾಜೇಂದ್ರ ಕಟಾರಿಯಾ ಅವರು, “ನಾನು ಪರಿಸ್ಥಿತಿಯನ್ನು ಗಮನಿಸಿದ್ದೇನೆ ಮತ್ತು ವಾರ್ಡ್ ಬಾಯ್ ಮತ್ತು ಸೆಕ್ಯುರಿಟಿ ಗಾರ್ಡ್ ವಿರುದ್ಧ ಕ್ರಮ ಕೈಗೊಂಡಿದ್ದೇನೆ. ಈ ಘಟನೆ ನಮ್ಮ ಹಳೆಯ ಕೋವಿಡ್ ಐಸಿಯು ವಾರ್ಡ್‌ನಲ್ಲಿ ಆಗಿದೆ ಎಂದು ಹೇಳಿದ್ದಾರೆ.
ಮಧ್ಯಪ್ರದೇಶದ ಸಾರ್ವಜನಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಪ್ರಭುರಾಮ್ ಚದುಧರಿ ಅವರು ಆರಂಭದಲ್ಲಿ ಅಂತಹ ಯಾವುದೇ ಘಟನೆಯ ಬಗ್ಗೆ ನನಗೆ ತಿಳಿದಿಲ್ಲ ಎಂದು ಹೇಳಿದ್ದರು. ಆದರೆ ವಿಡಿಯೋ ವೈರಲ್ ಆದ ನಂತರ ಮೂವರನ್ನು ಕೆಲಸದಿಂದ ತೆಗೆದು ಹಾಕಲಾಗಿದೆ ಎಂದು ತಿಳಿಸಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ಅರ್ನಾಲ್ಟ್‌ ಹಿಂದಕ್ಕಿ ಪುನಃ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಯಾದ ಎಲೋನ್‌ ಮಸ್ಕ್‌

ಇದೇ ರೀತಿಯ ಘಟನೆಯಲ್ಲಿ ಕಳೆದ ವರ್ಷ ಉತ್ತರ ಪ್ರದೇಶದ ಮೊರಾದಾಬಾದ್‌ನ ಜಿಲ್ಲಾ ಆಸ್ಪತ್ರೆಗೆ ನಾಯಿಯೊಂದು ಪ್ರವೇಶಿಸಿತ್ತು. ಸೆಕ್ಯೂರಿಟಿ ಗಾರ್ಡ್‌ಗಳು ಗಮನ ಹರಿಸದೆ ಗೇಟ್‌ನಲ್ಲಿ ಕುಳಿತಿದ್ದಾಗ ನಾಯಿ ಸ್ವತಂತ್ರವಾಗಿ ವಾರ್ಡ್‌ಗಳಿಗೆ ಪ್ರವೇಶಿಸುತ್ತಿರುವುದು ಕಂಡುಬಂದಿತ್ತು. ಆಸ್ಪತ್ರೆಯ ಬೆಡ್ ಮೇಲೆ ನಾಯಿ ಕುಳಿತಿರುವ ಚಿತ್ರವೂ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement